ಇದು ಟಾಟಾ ಕಂಪನಿ ಕಾರಲ್ಲ.. ನ್ಯಾನೋದಂತಿರುವ ಈ ಪುಟ್ಟ ಎಲೆಕ್ಟ್ರಿಕ್ ಕಾರು ಶೀಘ್ರ ಬಿಡುಗಡೆ, 7.50 ಲಕ್ಷ ಬೆಲೆ?

ವಿಯೆಟ್ನಾಂ ಮೂಲದ ವಿನ್‌ಫಾಸ್ಟ್ (VinFast) ಪ್ರಖ್ಯಾತ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ವಿವಿಧ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಈ ಕಂಪನಿಯು ಭಾರತದ ವಾಹನ ಮಾರುಕಟ್ಟೆ ಪ್ರವೇಶಿಸಲು ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದೆ. ಇದೇ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಕೆಲವು ಕಾರುಗಳನ್ನು ಪ್ರದರ್ಶಿಸಿತ್ತು. ಅವುಗಳಲ್ಲಿ 'ವಿಎಫ್3' ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಎಲ್ಲರ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

ಎಲ್ಲವು ಅಂದುಕೊಂಡಂತೆ ನಡೆದರೆ, ದೇಶೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಹೊಚ್ಚ ಹೊಸ ವಿನ್‌ಫಾಸ್ಟ್ ವಿಎಫ್3 ಇವಿ (VinFast VF3 EV) ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಆದರೆ, ಈ ಕುರಿತಂತೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಬಹಿರಂಗಗೊಂಡಿಲ್ಲ.

VinFast VF3 Electric Car Launch Soon Expected Price Details

ಫೆಬ್ರವರಿಯಲ್ಲಿ ವಿನ್‌ಫಾಸ್ಟ್ ವಿಎಫ್3 ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ನ್ನು ಇಂಡೋನೇಷ್ಯಾದ ಮಾರುಕಟ್ಟೆಯಲ್ಲಿಯೂ ಪರಿಚಯಿಸಲಾಗಿತ್ತು. ಅಲ್ಲಿನ ಗ್ರಾಹಕರು, ಈ ನೂತನ ಕಾರಿನ ವಿನ್ಯಾಸ ಹಾಗೂ ವೈಶಿಷ್ಟ್ಯಗಳಿಗೆ ಮನಸೋತಿದ್ದು, ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಆ ಪುಟ್ಟ ದೇಶದಲ್ಲಿ ಕೇವಲ 2 ತಿಂಗಳಲ್ಲಿ 400 ಯುನಿಟ್ ಕಾರುಗಳನ್ನು ವಿತರಣೆ ಮಾಡಲಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ಹೊಸ ವಿನ್‌ಫಾಸ್ಟ್ ವಿಎಫ್3 ಇವಿ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 18.64 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿದ್ದು, ಭರ್ತಿ ಚಾರ್ಜ್‌ನಲ್ಲಿ 215 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡಬಲ್ಲದು. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, ಹೆಚ್ಚಿನ ಹಾರ್ಸ್ ಪವರ್ & ಪೀಕ್ ಟಾರ್ಕ್ ಅನ್ನು ಹೊರಹಾಕುತ್ತದೆ.

VinFast VF3 Electric Car Launch Soon Expected Price Details

ಈ ಎಲೆಕ್ಟ್ರಿಕ್ ಕಾರು ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಇದು ನೋಡುಗರ ಕಣ್ಮನ ಸೆಳೆಯುತ್ತದೆ. ಉತ್ತಮವಾಗಿರುವ ಹೆಡ್‌ಲೈಟ್‌ಗಳು, ಆಕರ್ಷಕವಾಗಿರುವ ಬಂಪರ್ ಹಾಗೂ ಇಂಗ್ಲಿಷ್ ಭಾಷೆಯ 'ವಿ' ಅಕ್ಷರಕ್ಕೆ ಹೋಲಿಕೆಯಾಗುವ ಟೈಲ್‌ಗೇಟ್‌ನ್ನು ಪಡೆದಿದೆ. ಜೊತೆಗೆ 2 ಬಾಗಿಲು (ಡೋರ್) ಹಾಗೂ 4 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

ನೂತನ ವಿನ್‌ಫಾಸ್ಟ್ ವಿಎಫ್3 ಇವಿ ಹತ್ತಾರು ನವೀನ ಶೈಲಿಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10 - ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಮ್ಯಾನುವಲ್ ಎಸಿ ಮತ್ತು ಫ್ರಂಟ್ ಪವರ್ ವಿಂಡೋಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) & ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಸೇರಿದಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

VinFast VF3 Electric Car Launch Soon Expected Price Details

ಹೊಸ ವಿಎಫ್3 ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಬಜೆಟ್ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಾಗುವ ನಿರೀಕ್ಷೆಯಿದೆ. ಇದು ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ ರೂ.7.50 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಹೊಂದಿರುವ ಸಾಧ್ಯತೆಯೂ ಹೆಚ್ಚಿದೆ. ಬಹುತೇಕ 'ನ್ಯಾನೋ'ದಂತೆ ಸಣ್ಣದಾಗಿರುವ ಈ ಕಾರಿಗೆ ಎಂಜಿ ಕಾಮೆಟ್ & ಟಾಟಾ ಟಿಯಾಗೊ ಇವಿಗಳು ಪ್ರಬಲವಾದ ಸ್ಪರ್ಧೆಯೊಡ್ಡಬಲ್ಲವು ಎನ್ನಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, May 15, 2025, 12:56 [IST]
English summary
Vinfast vf3 electric car launch soon expected price details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+