ಗುರು.. ಇದು Tata Nano ಅಲ್ಲ, ಕಡಿಮೆ ಬೆಲೆ.. ಹೊಸ ಬ್ರ್ಯಾಂಡ್ ವಿನ್‌ಫಾಸ್ಟ್‌ನ ಸಣ್ಣ ಎಲೆಕ್ಟ್ರಿಕ್ ಕಾರಿನ ಬಿಡುಗಡೆ ಯಾವಾಗ?
ವಿಯೆಟ್ನಾಂ ಮೂಲದ ವಿನ್‌ಫಾಸ್ಟ್ (VinFast) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿದೆ. ಈಚೆಗೆ ವಿಎಫ್6 (VF6) ಹಾಗೂ ವಿಎಫ್7 (VF7) ಎಲೆಕ್ಟ್ರಿಕ್ ಎಸ್‌ಯುವಿಗಳಾಗಿ ಪ್ರಿ-ಬುಕ್ಕಿಂಗ್ ಆರಂಭಿಸಿತ್ತು. ಆಸಕ್ತ ಗ್ರಾಹಕರು ರೂ.21,000 ಮುಂಗಡ ಹಣವನ್ನು ಪಾವತಿಸುವ ಮೂಲಕ ಆರ್ಡರ್ ಮಾಡಬಹುದು. ಈ ಕಾರುಗಳು ಅತಿ ಶೀಘ್ರದಲ್ಲಿ ಬಿಡುಗಡೆಯಾಗಲಿವೆ. ಇವುಗಳು ಮಾತ್ರವಲ್ಲದೇ, ಕಂಪನಿಯು ಬಹುನಿರೀಕ್ಷಿತ 'ವಿಎಫ್3' ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ನ್ನು ಕೂಡ ಮುಂಬರುವ ಕೆಲವೇ ತಿಂಗಳಲ್ಲಿ ಅದ್ದೂರಿಯಾಗಿಯೂ ಪರಿಚಯಿಸಲಿದೆ.
ಎಲ್ಲವು ಅಂದುಕೊಂಡಂತೆ ನಡೆದರೆ, ನೂತನ ವಿನ್‌ಫಾಸ್ಟ್ ವಿಎಫ್3 ಇವಿ (VinFast VF3 EV) 2026ರ ಫೆಬ್ರವರಿಯಲ್ಲಿ ಮಾರಾಟಕ್ಕೂ ಬರಲಿದೆ. ಇದು ಸಣ್ಣ ಗಾತ್ರದ ಕಾರಾಗಿದ್ದು, ಅತಿ ಕಡಿಮೆ ಬೆಲೆಯಲ್ಲಿಯೂ ಬಿಡುಗಡೆಯಾಗಬಹುದು ಎನ್ನಲಾಗಿದೆ. ರೂ.10 ಲಕ್ಷಕ್ಕಿಂತ ಕಡಿಮೆ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಈ ಕಾರು ಟಾಟಾ ನ್ಯಾನೋ (Tata Nano) ಹ್ಯಾಚ್‌ಬ್ಯಾಕ್‌ನಂತೆ ಸಣ್ಣ ಗಾತ್ರದಲ್ಲಿರಲಿದ್ದು, ಜನವರಿಯಲ್ಲಿ ಕೊನೆಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ಇದೇ 'ವಿಎಫ್3 ಇವಿ'ಯನ್ನು ಪ್ರದರ್ಶನ ಮಾಡಲಾಗಿತ್ತು. ಆಗಲೇ, ದೊಡ್ಡ ಮಟ್ಟದ ನೀರಿಕ್ಷೆಗಳನ್ನು ಹುಟ್ಟು ಹಾಕಿತ್ತು. ದೇಶೀಯ ಗ್ರಾಹಕರು ಸಹ ಮೆಚ್ಚಿಕೊಂಡಿದ್ದರು.
ನೂತನ ವಿನ್‌ಫಾಸ್ಟ್ ವಿಎಫ್3 ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಜಾಗತಿಕವಾಗಿಯೂ ಖರೀದಿಗೆ ಲಭ್ಯವಿದ್ದು, ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಕ್ರೋಮ್ ಗ್ರಿಲ್ ಬಾರ್ ಹಾಗೂ ಇಂಗ್ಲಿಷ್ ಭಾಷೆಯ 'ವಿ' ಅಕ್ಷರಕ್ಕೆ ಹೋಲುವ ಟೈಲ್‌ಗೇಟ್‌ನ್ನು ಒಳಗೊಂಡಿದೆ. 3,190 ಎಂಎಂ ಉದ್ದ, 1,679 ಎಂಎಂ ಅಗಲ & 1,652 ಎಂಎಂ ಎತ್ತರವು ಇದೆ. ಜೊತೆಗೆ 191 ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,075 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿರುವ 'ವಿಎಫ್3 ಇವಿ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. ಈ ಕಾರು 18.64 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 215 ಕಿ.ಮೀ ಓಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 43.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 110 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಕಾರು 100 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 5.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಪಿಹೆಚ್ ವೇಗವನ್ನು ಪಡೆಯಲಿದೆ. ಹೊಸ ವಿಎಫ್3 ಇವಿ 4 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

ವಿದೇಶಗಳಲ್ಲಿ ಸಿಗುವ ನೂತನ ವಿನ್‌ಫಾಸ್ಟ್ ವಿಎಫ್3 ಇವಿ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. 10-ಇಂಚಿರುವ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಮ್ಯಾನುವಲ್ ಎಸಿ ಹಾಗೂ ಫ್ರಂಟ್ ಪವರ್ ವಿಂಡೋಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.
ಒಟ್ಟಾರೆಯಾಗಿ ಮುಂಬರುವ 'ವಿನ್‌ಫಾಸ್ಟ್ ವಿಎಫ್3 ಇವಿ' ಮೇಲೆ ದೇಶೀಯ ಗ್ರಾಹಕರು ದೊಡ್ಡ ಮಟ್ಟದ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಕಾರು ಅತ್ಯುತ್ತಮವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದು ಬಹತೇಕ ಖಚಿತವಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬರುವ ಎಲ್ಲ ಸಾಧ್ಯತೆಗಳಿವೆ. ಆ ಬಳಿಕ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications








