ಭಾರತದಲ್ಲಿ ವೇಗ ಪಡೆದ ಹೊಸ ಕಂಪನಿ: ಶೀಘ್ರದಲ್ಲೇ ಈ ಕಾರು ಬಿಡುಗಡೆ.. ಯಾವುದು, 7.50 ಲಕ್ಷಕ್ಕೆ ಸಿಗುತ್ತೆ?

ವಿಯೆಟ್ನಾಂ ಮೂಲದ ವಿನ್‌ಫಾಸ್ಟ್ (VinFast), ಜಗಮೆಚ್ಚಿದ ವಾಹನ ತಯಾರಕ ಕಂಪನಿ ಎಂದೇ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿಎಫ್6 ಹಾಗೂ ವಿಎಫ್7 ಹೆಸರಿನ 2 ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. 2026ರ ಫೆಬ್ರವರಿಯಲ್ಲಿ ನೂತನ 'ಲಿಮೋ ಗ್ರೀನ್‌' ಎಂಪಿವಿಯನ್ನು ಬಿಡುಗಡೆಗೊಳಿಸುವುದಾಗಿ ಕಂಪನಿಯೇ ಘೋಷಣೆ ಮಾಡಿದೆ. ಇದರೊಂದಿಗೆ ಶ್ರೀಸಾಮಾನ್ಯರನ್ನು ಗಮನದಲ್ಲಿಟ್ಟುಕೊಂಡು, ಮತ್ತೊಂದು ಹೊಚ್ಚ ಹೊಸ ಕಾರೊಂದನ್ನು ಪರಿಚಯಿಸಲಿದೆ. ಅದಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ವರದಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಎಲ್ಲವು ಅಂದುಕೊಂಡಂತೆ ನಡೆದರೆ, ವಿನ್‌ಫಾಸ್ಟ್ ವಿಎಫ್3 (VinFast VF3) ಕಾರು ಸಹ 2026ರ ಫೆಬ್ರವರಿ ತಿಂಗಳಲ್ಲೇ ಮಾರಾಟಕ್ಕೆ ಬರಲಿದೆ. ಇದೊಂದು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ ಆಗಿದೆ. ರೂ.7.50 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರುವ ನೀರಿಕ್ಷೆಯಿದ್ದು, ಮಧ್ಯಮ ವರ್ಗದ ಖರೀದಿದಾರರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.

Vinfast VF3 Hatchback Launch Soon In India Details

ಈ 'ವಿನ್‌ಫಾಸ್ಟ್ ವಿಎಫ್3' ಕಾರು ಜಾಗತಿಕ ಮಾರುಕಟ್ಟೆಯಲ್ಲಿಯೂ ಖರೀದಿಗೆ ಲಭ್ಯವಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ಗಳು ಹಾಗೂ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಎಲೆಕ್ಟ್ರಿಕ್ ಬ್ಲೂ, ಅರ್ಬನ್ ಮಿಂಟ್, ಸಮ್ಮರ್ ಯೆಲ್ಲೋ & ರೋಸ್ ಪಿಂಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಇದು 4 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 285 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 3,190 ಎಂಎಂ ಉದ್ದ, 1,679 ಎಂಎಂ ಅಗಲ ಹಾಗೂ 1,622 ಎಂಎಂ ಎತ್ತರವಿದೆ. 191 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,075 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Vinfast VF3 Hatchback Launch Soon In India Details

ಹೊಸ 'ವಿನ್‌ಫಾಸ್ಟ್ ವಿಎಫ್3' ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌, 18.64 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 215 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 100 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 5.3 ಸೆಕೆಂಡುಗಳಲ್ಲಿ 0 ರಿಂದ 50 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಇಕೋ, ಕಂಫರ್ಟ್ ಹಾಗೂ ಸ್ಪೋರ್ಟ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.

ಈ ಕಾರು 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಮ್ಯಾನುವಲ್ ಎಸಿ, ಕ್ರೂಸ್ ಕಂಟ್ರೋಲ್ ಹಾಗೂ ಫ್ರಂಟ್ ಪವರ್ ವಿಂಡೋಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ರೇರ್-ವ್ಯೂ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ವಿನ್‌ಫಾಸ್ಟ್‌ ಲಿಮೋ ಗ್ರೀನ್‌ (VinFast Limo Green) ಎಂಪಿವಿಯೂ ಮಾರಾಟಕ್ಕೆ ಬರಲಿದೆ:

ಇದು ರೂ.25 ಲಕ್ಷದಿಂದ ರೂ.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಡೀಪ್ ಓಷನ್, ಡೆಸಾಟ್ ಸಿಲ್ವರ್, ನೆಪ್ಚೂನ್ ಗ್ರೇ, ಕ್ರಿಮ್ಸನ್ ರೆಡ್ ಹಾಗೂ ಜೆಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,840 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಲಿಮೋ ಗ್ರೀನ್‌' 60.13 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 450 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.1 ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಯರ ರಕ್ಷಣೆಗಾಗಿ 4 ಏರ್‌ಬ್ಯಾಗ್‌ಗಳು ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Thursday, December 4, 2025, 11:06 [IST]
English summary
Vinfast vf3 hatchback launch soon in india details
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+