ಬಿಡುಗಡೆಗೂ ಮುನ್ನವೇ ರಸ್ತೆಯಲ್ಲಿ ಕಾಣಿಸಿಕೊಂಡ ಹೊಸ ಕಂಪನಿ ವಿನ್‌ಫಾಸ್ಟ್‌ನ VF6 ಕಾರು, ಬೆಲೆ ಇಷ್ಟೇನಾ, ಹೇಗಿರಲಿದೆ?

ವಿಯೆಟ್ನಾಂ ಮೂಲದ ವಿನ್‌ಫಾಸ್ಟ್ (VinFast), ಭಾರತದ ಕಾರು ಮಾರುಕಟ್ಟೆಯನ್ನು ಪ್ರವೇಶಿಸಲು ಅಂತಿಮ ಹಂತದ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ತಮಿಳುನಾಡಿನ ಚೆನ್ನೈ ಹಾಗೂ ಗುಜರಾತ್‌ನ ಸೂರತ್‌ನಲ್ಲಿ ಡೀಲರ್‌ಶಿಪ್‌ನ್ನು ಆರಂಭಿಸಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಮುಂದಿನ ತಿಂಗಳು (ಸೆಪ್ಟೆಂಬರ್) ನೂತನ ವಿಎಫ್6 (VF6) ಮತ್ತು ವಿಎಫ್7 (VF7) ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಕೂಡ ಬಿಡುಗಡೆಗೊಳಿಸಲಾಗಿದೆ. ಈಗಾಗಲೇ, ಇವೆರಡು ಕಾರುಗಳಿಗಾಗಿ ಬುಕ್ಕಿಂಗ್ ಶುರುವಾಗಿದೆ. ಆಸಕ್ತರು ರೂ.21,000 ಮುಂಗಡ ಹಣ ಪಾವತಿಸಿ, ಆರ್ಡರ್ ಮಾಡಬಹುದು.

ಸದ್ಯ ವಿನ್‌ಫಾಸ್ಟ್ ವಿಎಫ್6 (VinFast VF6) ಎಲೆಕ್ಟ್ರಿಕ್ ಎಸ್‌ಯುವಿಯು ಪ್ರಾಯೋಗಿಕ ಸಂಚಾರ ನಡೆಸುವಾಗ, ಕ್ಯಾಮೆರಾ ಕಣ್ಣಿಗೆ ಬಿದ್ದಿದೆ. ಅದಕ್ಕೆ ಸಂಬಂಧಿದಂತೆ 'ಗಾಡಿವಾಡಿ' ವೆಬ್‌ಸೈಟ್‌ ವರದಿ ಮಾಡಿದೆ. ಈ ಫೋಟೋದಲ್ಲಿ ನೂತನ ಕಾರಿನ ಹಿಂಭಾಗದ (ರೇರ್) ವಿನ್ಯಾಸದ ಅಂಶಗಳು ಮಾತ್ರ ಗೋಚರಿಸುತ್ತಿದ್ದು, ಕನೆಕ್ಟ್ಡ್ ಎಲ್ಇಡಿ ಲೈಟ್ ಬಾರ್‌ನ್ನು ಹೊಂದಿರುವುದನ್ನು ಕಾಣಬಹುದು.

VinFast VF6 Electric SUV Spotted On Test Launch Soon Expected Price And Features Details

ಅಂತರರಾಷ್ಟ್ರೀಯವಾಗಿಯೂ ಲಭ್ಯವಿರುವ ಇದೇ 'ವಿಎಫ್6' ಎಸ್‌ಯುವಿ, ಮುಂಭಾಗ (ಫ್ರಂಟ್) ಕೂಡ 'ವಿ' ಆಕಾರಕ್ಕೆ ಹೋಲಿಕೆಯಾಗಬಲ್ಲ ಸಿಗ್ನೇಚರ್ ಎಲ್ಇಡಿ ಹೆಡ್‌ಲೈಟ್‌ಗಳು, ಫುಲ್-ವಿಡ್ತ್ ಡಿಆರ್‌ಎಲ್‌ಗಳು ಹಾಗೂ 19-ಇಂಚಿರುವ ಅಲಾಯ್ ವೀಲ್‌ಗಳನ್ನು ಪಡೆದಿದೆ. 4,238 ಎಂಎಂ ಉದ್ದ, 1,820 ಎಂಎಂ ಅಗಲ, 1,594 ಎಂಎಂ ಹಾಗೂ 2,730 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಇದು ಅರ್ಥ್ ಮತ್ತು ವಿಂಡ್ ಎಂಬ ಎರಡು ಅತ್ಯಾಧುನಿಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಒಳಗೊಂಡಿರಲಿದೆ. ಡೆಸಾಟ್ ಸಿಲ್ವರ್, ಜೆಟ್ ಬ್ಲ್ಯಾಕ್, ಇನ್ಫಿನಿಟಿ ಬ್ಲಾಂಕ್, ಕ್ರಿಮ್ಸನ್ ರೆಡ್, ಜೆನಿತ್ ಗ್ರೇ ಮತ್ತು ಅರ್ಬನ್ ಮಿಂಟ್ ಎಂಬ ಆಕರ್ಷಕ ಬಣ್ಣಗಳೊಂದಿಗೂ ದೊರೆಯಲ್ಲಿದೆ ಎಂಬ ವಿಚಾರವು ಈ ಹಿಂದೆ ಬಹಿರಂಗಗೊಂಡಿತ್ತು.

VinFast VF6 Electric SUV Spotted On Test Launch Soon Expected Price And Features Details

ವಿದೇಶದಲ್ಲಿ ಸಿಗುವ ವಿನ್‌ಫಾಸ್ಟ್ ವಿಎಫ್6 ಎಲೆಕ್ಟ್ರಿಕ್ ಎಸ್‌ಯುವಿ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 59.6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 381 ರಿಂದ 399 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರ ಬ್ಯಾಟರಿಯು ಡಿಸಿ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ 30 ನಿಮಿಷಗಳಲ್ಲಿ 20 ರಿಂದ 80% ಚಾರ್ಜ್ ಆಗಿ ಬಿಡುತ್ತದೆ. ದೇಶದಲ್ಲೂ ಇದೇ ರೂಪದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ನೂತನ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿಗುವ 'ವಿಎಫ್6' ಕಾರು 5 ಆಸನಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ಸಾಗಿಸಲು 423 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಇದರೊಂದಿಗೆ 12.9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೆಡ್ ಅಪ್ ಡಿಸ್‌ಪ್ಲೇ, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ರೇರ್ ಎಸಿ ವೆಂಟ್‌ಗಳನ್ನು ಹೊಂದಿರಬಹುದು ಎನ್ನಲಾಗಿದೆ.

VinFast VF6 Electric SUV Spotted On Test Launch Soon Expected Price And Features Details

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿರಲಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ನಿರೀಕ್ಷೆಯಿದೆ.

ಹೊಸ ವಿನ್‌ಫಾಸ್ಟ್ ವಿಎಫ್6 ಎಲೆಕ್ಟ್ರಿಕ್ ಎಸ್‌ಯುವಿ ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಬಿಡುಗಡೆಯಾಗಬಹುದು ಎನ್ನಲಾಗಿದೆ. ರೂ.18 ಲಕ್ಷದಿಂದ ರೂ.24 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ಮಹೀಂದ್ರಾ ಬಿಇ 6ಇ, ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಹಾಗೂ ಟಾಟಾ ಹ್ಯಾರಿಯರ್ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

More from DriveSpark

Article Published On: Monday, August 11, 2025, 13:15 [IST]
English summary
Vinfast vf6 electric suv spotted on test launch soon expected price and features details
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+