Vinfast: 468 ಕಿ.ಮೀ ಓಡುತ್ತೆ.. 5-ಸೀಟರ್, ಅಗ್ಗದ ಹೊಸ ವಿನ್‌ಫಾಸ್ಟ್ ವಿಎಫ್6ನ ಆನ್-ರೋಡ್ ಬೆಲೆ ಎಷ್ಟು, EMI ಏನು?
ಇತ್ತಿಚೆಗೆ ನೂತನ ವಿನ್‌ಫಾಸ್ಟ್ ವಿಎಫ್6 (VinFast VF6) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿದೆ. ಇದು ರೂ.16.49 ಲಕ್ಷದಿಂದ ರೂ.18.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಉತ್ತಮವಾಗಿರುವ ವಿನ್ಯಾಸ ಮತ್ತು ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅತಿ ಶೀಘ್ರದಲ್ಲೇ ವಿತರಣೆಯು ಶುರುವಾಗಲಿದೆ. ನೀವು ಹೊಚ್ಚ ಹೊಸ ಕಾರನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ವಿಎಫ್6' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಎಲೆಕ್ಟ್ರಿಕ್ ಎಸ್‌ಯುವಿಯ ನಿರೀಕ್ಷಿತ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (Emi) ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಈ ಕಾರು ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ ಅರ್ಥ್ (Earth) ರೂಪಾಂತರ, ರೂ.17.35 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿರಲಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.12.35 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.25,000 ವರೆಗೆ ಇಎಂಐ ಕಟ್ಟಬೇಕು.

ಮತ್ತೊಂದು ವಿಂಡ್ (Wind) ರೂಪಾಂತರ, ರೂ.18.71 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿರಲಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.13.71 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ ರೂ.28,000 ವರೆಗೆ ಇಎಂಐ ಪಾವತಿ ಮಾಡಬೇಕು.
ಇನ್ನೊಂದು ವಿಂಡ್ ಇನ್ಫಿನಿಟಿ (Wind Infinity) ರೂಪಾಂತರ, ರೂ.19.24 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿರಲಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.14.24 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.29,000 ವರೆಗೆ ಇಎಂಐ ಕಟ್ಟಬೇಕು.
ವಿನ್‌ಫಾಸ್ಟ್ ವಿಎಫ್6 ವಿಶೇಷತೆಗಳೇನು:
ಈ ಎಲೆಕ್ಟ್ರಿಕ್ ಎಸ್‌ಯುವಿಯು ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 18 ಇಂಚಿರುವ ಅಲಾಯ್ ವೀಲ್‌ಗಳನ್ನು ಪಡೆದಿದೆ. ಕ್ರಿಮ್ಸನ್ ರೆಡ್, ಜೆನಿತ್ ಗ್ರೇ, ಅರ್ಬನ್ ಮಿಂಟ್, ಜೆಟ್ ಬ್ಲ್ಯಾಕ್ ಹಾಗೂ ಡೆಸ್ಯಾಟ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 423 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಜೊತೆಗೆ 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,730 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ವಿನ್‌ಫಾಸ್ಟ್ ವಿಎಫ್6 ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 59.6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 463 ರಿಂದ 468 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 8.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಈ ಕಾರು 12.9 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 8-ಸ್ಪೀಕರ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಯುಎಸ್‌ಬಿ ಸಿ ಚಾರ್ಜಿಂಗ್ ಹಾಗೂ ರೈನ್ ಸೆನ್ಸಿಂಗ್ ವೈಪರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಆಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ನಿಮ್ಮ ಗಮನಕ್ಕೆ.. ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








