470 Km ರೇಂಜ್.. 5-ಸೀಟರ್, ಬೆಲೆಯೂ ಅಗ್ಗ.. ಈ VinFast SUV ಕುರಿತ ಮುಖ್ಯಾಂಶಗಳಿವು!

ವಿನ್‌ಫಾಸ್ಟ್ ವಿಎಫ್6 (VinFast VF6) ಪ್ರಮುಖ ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ವಿಎಫ್6' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಎಲೆಕ್ಟ್ರಿಕ್ ಎಸ್‌ಯುವಿಯ ಬೆಲೆ, ವಿನ್ಯಾಸ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತ ಮುಖ್ಯಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.16.49 ಲಕ್ಷದಿಂದ ರೂ.18.29 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಅರ್ಥ್ (Earth), ವಿಂಡ್ (Wind) & ವಿಂಡ್ ಇನ್ಫಿನಿಟಿ (Wind Infinity) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

VinFast VF6 Suv Price Design Range And Features And All Top Things

ವಿನ್ಯಾಸ & ಬಣ್ಣಗಳು (Design & Colors):

ಈ ಕಾರು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 18 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಕ್ರಿಮ್ಸನ್ ರೆಡ್, ಜೆನಿತ್ ಗ್ರೇ, ಅರ್ಬನ್ ಮಿಂಟ್, ಜೆಟ್ ಬ್ಲ್ಯಾಕ್ ಮತ್ತು ಡೆಸ್ಯಾಟ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

ನೂತನ 'ವಿಎಫ್6' ಹೆಚ್ಚು ವಿಶಾಲವಾಗಿದೆ. 4,241 ಮಿ.ಮೀ ಉದ್ದ, 1,834 ಮಿ.ಮೀ ಅಗಲ ಮತ್ತು 1,580 ಮಿ.ಮೀ ಎತ್ತರವಿದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,730 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,962 ಕೆಜಿ ತೂಕವಿದೆ.

VinFast VF6 Suv Price Design Range And Features And All Top Things

ಕಾರ್ಯಕ್ಷಮತೆ (Performance):

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 59.6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 470 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ 201 ಪಿಎಸ್ (ಹಾರ್ಸ್ ಪವರ್) ಹಾಗೂ 310 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಕಾರಿನಲ್ಲಿರುವ ಬ್ಯಾಟರಿ ಪ್ಯಾಕ್, ಡಿಸಿ ಪಾಸ್ಟ್ ಚಾರ್ಜ‌ರ್‌ನ್ನು ಉಪಯೋಗಿಸಿದಾಗ ಕೇವಲ 25 ನಿಮಿಷಗಳಲ್ಲಿ ಶೇಕಡ 10 ರಿಂದ 70% ಚಾರ್ಜ್ ಆಗಿ ಬಿಡುತ್ತದೆ. ಅದೇ ರೀತಿಯಲ್ಲಿ 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 8.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

VinFast VF6 Suv Price Design Range And Features And All Top Things

ಒಳಾಂಗಣ ವಿನ್ಯಾಸ & ವೈಶಿಷ್ಟ್ಯಗಳು (Interior Design & Features):

ಹೊಸ 'ವಿಎಫ್6' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 423 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 12.9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, 8 ಸ್ಪೀಕರ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಯುಎಸ್‌‍ಬಿ ಸಿ ಚಾರ್ಜಿಂಗ್ ಹಾಗೂ ಕನೆಕ್ಟೆಡ್ ಕಾರ್ ಟೆಕ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್ ಡಿಸ್ಕ್ ಬ್ರೇಕ್‌ಗಳು & 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Tuesday, October 14, 2025, 15:45 [IST]
English summary
Vinfast vf6 suv price design range and features and all top things
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+