ಹೊಸ ಬ್ರ್ಯಾಂಡ್‌ನ ಇನ್ನೊಂದು ಎಲೆಕ್ಟ್ರಿಕ್ ಕಾರು ಕಾಣಿಸಿಕೊಂಡೆ ಬಿಡ್ತು.. ಶೀಘ್ರ ಬಿಡುಗಡೆ, ಬೆಲೆ ಎಷ್ಟಿರಲಿದೆ?

ವಿಯೆಟ್ನಾಂನ ವಿನ್‌ಫಾಸ್ಟ್ (VinFast), ದೇಶೀಯ ಕಾರು ಮಾರುಕಟ್ಟೆಯನ್ನು ಪ್ರವೇಶಿಸಲು ಸರ್ವ ರೀತಿಯಲ್ಲಿಯೂ ಸನ್ನದ್ಧವಾಗುತ್ತಿದೆ. ಅದರ ಭಾಗವಾಗಿ ತಮಿಳುನಾಡಿನ ತೂತುಕುಡಿಯಲ್ಲಿ ಬೃಹತ್ ಉತ್ಪಾದನಾ ಘಟಕವನ್ನು ತೆರೆಯಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ತಯಾರಿಕಾ ಚಟುವಟಿಕೆಗಳು ಕೂಡ ಆರಂಭವಾಗಲಿವೆ. ಇದರೊಂದಿಗೆ ದೇಶಾದ್ಯಂತ ಕಂಪನಿಯು ಡೀಲರ್‌ಶಿಪ್‌ಗಳನ್ನು ಪ್ರಾರಂಭಿಸುವ ಕೆಲಸದಲ್ಲೂ ನಿರತವಾಗಿದೆ. ಕೇರಳದಲ್ಲಿ ಮೊದಲ ಡೀಲರ್‌ಶಿಪ್ ಬಹುತೇಕ ಸಿದ್ದಗೊಂಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲೇ 'ವಿನ್‌ಫಾಸ್ಟ್' ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಸಹ ಬಿಡುಗಡೆಗೊಳಿಸಲಿದೆ. ಬನ್ನಿ, ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಮುಂಬೈನಲ್ಲಿ 'ವಿನ್‌ಫಾಸ್ಟ್' ಮಾರಾಟಕ್ಕೆ ತರಲಿರುವ ನೂತನ ವಿಎಫ್7 (VF7) ಎಲೆಕ್ಟ್ರಿಕ್ ಎಸ್‌ಯುವಿ, ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಾಣಿಸಿಕೊಂಡಿದೆ. ಅದರ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿ ಕೂಡ ಸೋರಿಕೆಯಾಗಿವೆ. ಈ ಹಿಂದೆ, ಇದೇ ಕಂಪನಿಯ ವಿಎಫ್6 (VF6) ಎಲೆಕ್ಟ್ರಿಕ್ ಎಸ್‌ಯುವಿಯು ಪ್ರಾಯೋಜಿಕ ಓಡಾಟದ ವೇಳೆಯಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದಿತ್ತು.

Vinfast VF7 Electric Suv Spotted On Testing In India Launch Soon Details

ಈ ಫೋಟೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹೊಸ ವಿನ್‌ಫಾಸ್ಟ್ ವಿಎಫ್7 (Vinfast VF7) ಎಲೆಕ್ಟ್ರಿಕ್ ಎಸ್‌ಯುವಿ ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಅತ್ಯಾಧುನಿಕವಾದ ಸ್ಪ್ಲಿಟ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫುಲ್-ವಿಡ್ತ್ ಲೈಟ್ ಬಾರ್, ರೂಫ್ ಸ್ಪಾಯ್ಲರ್ ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಒಳಗೊಂಡಿದೆ.

ಸದ್ಯ ವಿವಿಧ ದೇಶಗಳಲ್ಲಿ 'ವಿನ್‌ಫಾಸ್ಟ್ ವಿಎಫ್7' ಎಲೆಕ್ಟ್ರಿಕ್ ಎಸ್‌ಯುವಿಯು ಗ್ರಾಹಕರ ಖರೀದಿಗೆ ಲಭ್ಯವಿದೆ. ಈ ಕಾರು 75.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 431 ರಿಂದ 450 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

Vinfast VF7 Electric Suv Spotted On Testing In India Launch Soon Details

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಕ್ಯಾಬಿನ್ ವಿನ್ಯಾಸವನ್ನು ತುಂಬಾ ಚೆನ್ನಾಗಿದೆ. ಹಾಗೆಯೇ 15-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೆಡ್ಸ್ ಅಪ್ ಡಿಸ್‌ಪ್ಲೇ, ಪನೋರಮಿಕ್ ಗ್ಲಾಸ್ ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ ವಿನ್‌ಫಾಸ್ಟ್ ವಿಎಫ್7' ಎಲೆಕ್ಟ್ರಿಕ್ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 8 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರು ಕೊಂಚ ದುಬಾರಿ ಬೆಲೆಯನ್ನು ಹೊಂದಿರಲಿದ್ದು, ರೂ.30 ಲಕ್ಷದಿಂದ ರೂ.35 ಲಕ್ಷ ದರದಲ್ಲಿ (ಎಕ್ಸ್-ಶೋರೂಂ) ಬಿಡುಗಡೆಯಾಗುವ ನಿರೀಕ್ಷೆಯಿದೆ.

Vinfast VF7 Electric Suv Spotted On Testing In India Launch Soon Details

'ವಿನ್‌ಫಾಸ್ಟ್ ವಿಎಫ್6' ಎಲೆಕ್ಟ್ರಿಕ್ ಎಸ್‌ಯುವಿಯು ಮಾರಾಟಕ್ಕೆ ಬರಲಿದೆ:

ಈ ಕಾರನ್ನು ಕೂಡ 'ವಿಎಫ್7' ಎಲೆಕ್ಟ್ರಿಕ್ ಎಸ್‌ಯುವಿಯೊಂದಿಗೆ ಪರಿಚಯಿಸುವ ನಿರೀಕ್ಷೆಯಿದೆ. ಇದು ರೂ.18 ಲಕ್ಷ ಬೆಲೆಯನ್ನು (ಎಕ್ಸ್-ಶೋರೂಂ) ಹೊಂದಿರಬಹುದು ಎನ್ನಲಾಗಿದೆ. ಜಾಗತಿಕವಾಗಿ ಲಭ್ಯವಿರುವ 'ವಿಎಫ್6' ಕಾರು 59.6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 379 ರಿಂದ 410 ಕಿಲೋಮೀಟರ್ ಓಡುತ್ತದೆ.

ನೂತನ 'ವಿನ್‌ಫಾಸ್ಟ್ ವಿಎಫ್6' ಎಲೆಕ್ಟ್ರಿಕ್ ಎಸ್‌ಯುವಿಯಲ್ಲೂ 5 ಆಸನಗಳಿವೆ. 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Source: Carwale

More from DriveSpark

Article Published On: Wednesday, June 18, 2025, 12:03 [IST]
English summary
Vinfast vf7 electric suv spotted on testing in india launch soon details
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+