ಸದ್ದಿಲ್ಲದೇ ಹೊಸ ಬ್ರ್ಯಾಂಡ್ ವಿನ್‌ಫಾಸ್ಟ್‌ನ ವಿಎಫ್7 ಎಸ್‌ಯುವಿ ಕುರಿತ ಈ ವಿವರಗಳು ಬಹಿರಂಗ.. ಯಾರು ಹೇಳಲ್ಲ!
ವಿಯೆಟ್ನಾಂನ ವಿನ್‌ಫಾಸ್ಟ್ (VinFast) ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿದ್ದು, ಭಾರತದ ಕಾರು ಮಾರುಕಟ್ಟೆಯನ್ನು ಪ್ರವೇಶಿಸಲು ಹಣಿಯಾಗುತ್ತಿದೆ. ತಮಿಳುನಾಡಿನಲ್ಲಿ ಬೃಹತ್ ಉತ್ಪಾದನಾ ಘಟಕವನ್ನು ಪ್ರಾರಂಭಿಸಿದೆ. ಇತ್ತೀಚೆಗೆ ಹೊಚ್ಚ ಹೊಸ ವಿಎಫ್6 (VF6) ಹಾಗೂ ವಿಎಫ್7 (VF7) ಹೆಸರಿನ ಎಲೆಕ್ಟ್ರಿಕ್ ಎಸ್‌ಯುವಿಗಳಾಗಿ ಪ್ರಿ ಬುಕ್ಕಿಂಗ್‌ನ್ನು ಶುರು ಮಾಡಿತ್ತು. ಆಸಕ್ತರು ರೂ.21,000 ಮುಂಗಡ ಮೊತ್ತವನ್ನು ಪಾವತಿಸಿ ಆರ್ಡರ್ ಮಾಡಬಹುದಾಗಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಇವೆರೆಡು ಕಾರುಗಳು ಅತಿ ಶೀಘ್ರದಲ್ಲೇ ಬಿಡುಗಡೆಯೂ ಆಗಲಿವೆ.
ಸದ್ಯ, ನೂತನ ವಿನ್‌ಫಾಸ್ಟ್ ವಿಎಫ್7 (Vinfast VF7) ಎಲೆಕ್ಟ್ರಿಕ್ ಎಸ್‌ಯುವಿ ಕುರಿತಂತೆ ಒಂದಷ್ಟು ವಿವರಗಳು ಬಹಿರಂಗಗೊಂಡಿವೆ. ಈ ಕಾರು ಅರ್ಥ್, ವಿಂಡ್ ಹಾಗೂ ಸ್ಕೈ ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದೆ. ಜೊತೆಗೆ ಜೆಟ್ ಬ್ಲ್ಯಾಕ್, ಡೆಸಾಟ್ ಸಿಲ್ವರ್, ಇನ್ಫಿನಿಟಿ ಬ್ಲಾಂಕ್, ಕ್ರಿಮ್ಸನ್ ರೆಡ್ ಮತ್ತು ಜೆನಿತ್ ಗ್ರೇ ಸೇರಿದಂತೆ 6 ಬಣ್ಣಗಳನ್ನು ಒಳಗೊಂಡಿರಲಿದೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ಈಗಾಗಲೇ ವಿನ್‌ಫಾಸ್ಟ್ ವಿಎಫ್7 ಎಲೆಕ್ಟ್ರಿಕ್ ಕಾರು ವಿವಿಧ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಖರೀದಿಗೆ ಸಿಗುತ್ತದೆ. 75.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 431 ರಿಂದ 450 ಕಿಲೋಮೀಟರ್ ಓಡುತ್ತದೆ. ದೇಶೀಯವಾಗಿಯೂ ಇದೇ ಪವರ್‌ಟ್ರೇನ್ ಆಯ್ಕೆಯಲ್ಲಿ ಮಾರಾಟಕ್ಕೆ ಬರುವ ಎಲ್ಲ ಸಾಧ್ಯತೆಗಳಿವೆ.
ವಿದೇಶದಲ್ಲಿ ಖರೀದಿಗೆ ಲಭ್ಯವಿರುವ ವಿನ್‌ಫಾಸ್ಟ್ ವಿಎಫ್7 ಎಸ್‌ಯುವಿ, ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಫುಲ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, 'ವಿ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಫ್ಲಶ್ ಡೋರ್ ಹ್ಯಾಂಡಲ್‌ಗಳು ಹಾಗೂ 19-ಇಂಚಿರುವ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಜಾಗತಿಕವಾಗಿ ಮಾರಾಟವಾಗುವ ನೂತನ ವಿಎಫ್7 ಕಾರು 5 ಆಸನಗಳನ್ನು ಹೊಂದಿದೆ. 15-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಗ್ಲಾಸ್ ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, 8 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಭಾರತದಲ್ಲೂ ಈ ರೀತಿಯ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ರೂ.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.
ವಿನ್‌ಫಾಸ್ಟ್ ವಿಎಫ್6 (VinFast VF6) ಎಲೆಕ್ಟ್ರಿಕ್ ಎಸ್‌ಯುವಿಯು ಮಾರಾಟಕ್ಕೆ ಬರಲಿದೆ:
ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದ್ದು, ರೂ.18 ಲಕ್ಷದಿಂದ ರೂ.24 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಅಂತರರಾಷ್ಟ್ರೀಯವಾಗಿರುವ ಲಭ್ಯವಿರುವ ಈ ಕಾರು, 'ವಿ' ಆಕಾರಕ್ಕೆ ಹೋಲಿಕೆಯಾಗುವ ಸಿಗ್ನೇಚರ್ ಎಲ್ಇಡಿ ಹೆಡ್‌ಲೈಟ್‌ಗಳು, ಫುಲ್-ವಿಡ್ತ್ ಡಿಆರ್‌ಎಲ್‌ಗಳು ಮತ್ತು 19-ಇಂಚಿರುವ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಹಲವು ದೇಶಗಳಲ್ಲಿ ಲಭ್ಯವಿರುವ ಈ ಕಾರು, ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 59.6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ . ಪೂರ್ತಿ ಚಾರ್ಜ್‌ನಲ್ಲಿ 379 ರಿಂದ 410 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.
ವಿದೇಶದಲ್ಲಿ ಸಿಗುವ ವಿಎಫ್6 ಎಲೆಕ್ಟ್ರಿಕ್ ಎಸ್‌ಯುವಿ ಹಲವು ಅತ್ಯುತ್ತಮವಾದ ವೈಶಿಷ್ಟ್ಯಗಳನ್ನು ಪಡೆದಿದೆ. ಭಾರತದಲ್ಲಿ ಬಿಡುಗಡೆಯಾಗುವ ಇದೇ ಕಾರು, 12.9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೆಡ್-ಅಪ್ ಡಿಸ್‌ಪ್ಲೇ, ರೇರ್ ಎಸಿ ವೆಂಟ್‌ಗಳು, 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ನಿರೀಕ್ಷೆಯಿದೆ.


Click it and Unblock the Notifications








