VinFast: 500+ ಕಿ.ಮೀ ರೇಂಜ್, ವಿನ್‌ಫಾಸ್ಟ್ ವಿಎಫ್7 ಕಾರನ್ನು ತೆಗೆದುಕೊಳ್ಳಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಇತ್ತೀಚೆಗೆ ವಿನ್‌ಫಾಸ್ಟ್ ವಿಎಫ್7 (VinFast VF7) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಇದು ರೂ.20.89 ಲಕ್ಷದಿಂದ ರೂ.25,49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ನೀವು ಹೊಚ್ಚ ಹೊಸ ಕಾರನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ 'ವಿಎಫ್7' ಉತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಎಲೆಕ್ಟ್ರಿಕ್ ಎಸ್‌ಯುವಿಯ ನಿರೀಕ್ಷಿತ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (Emi) ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಈ ಕಾರು ಹಲವು ವಿಧದಲ್ಲಿ ಸಿಗುತ್ತದೆ. ಇದರ ಅರ್ಥ್ (Earth) ರೂಪಾಂತರ, ರೂ.21.95 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿರಲಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.16.95 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.34,000 ವರೆಗೆ ಇಎಂಐ ಕಟ್ಟಬೇಕು.

ಮತ್ತೊಂದು ವಿಂಡ್ (Wind) ರೂಪಾಂತರ, ರೂ.24.85 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿರಲಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.19.85 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.40,000 ವರೆಗೆ ಇಎಂಐ ಪಾವತಿ ಮಾಡಬೇಕು.
ಇನ್ನೊಂದು ವಿಂಡ್ ಇನ್ಫಿನಿಟಿ (Wind Infinity) ರೂಪಾಂತರ, ರೂ.25.38 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿರಲಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.20.38 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.41,000 ವರೆಗೆ ಇಎಂಐ ಕಟ್ಟಬೇಕು.
ಇದೇ ಕಾರಿನ ಸ್ಕೈ (Sky) ರೂಪಾಂತರ, ರೂ.26.43 ಆನ್-ರೋಡ್ ಬೆಲೆಯನ್ನು ಹೊಂದಿರಲಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.21.43 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.43,000 ವರೆಗೆ ಇಎಂಐ ಪಾವತಿಸಬೇಕು.
ಮಗದೊಂದು ಸ್ಕೈ ಇನ್ಫಿನಿಟಿ (Sky Infinity) ರೂಪಾಂತರ, ರೂ.26.95 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿರಲಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.20.38 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.44,000 ವರೆಗೆ ಇಎಂಐ ಕಟ್ಟಬೇಕು.
ವಿನ್‌ಫಾಸ್ಟ್ ವಿಎಫ್7 ವಿಶೇಷತೆಗಳೇನು:
ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಡೆಸಾಟ್ ಸಿಲ್ವರ್, ಇನ್ಫಿನಿಟಿ ಬ್ಲಾಂಕ್, ಕ್ರಿಮ್ಸನ್ ರೆಡ್, ಜೆನಿತ್ ಗ್ರೇ ಮತ್ತು ಅರ್ಬನ್ ಮಿಂಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 4,545 ಎಂಎಂ ಉದ್ದ, 1,890 ಎಂಎಂ ಅಗಲ ಹಾಗೂ 1,636 ಎಂಎಂ ಎತ್ತರ ಕೂಡ ಇದೆ.
ನೂತನ ವಿಎಫ್7 ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 70.8 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 438 ರಿಂದ 532 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 537 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.
ಇದು 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಗ್ಲಾಸ್ ರೂಫ್, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಹಾಗೂ ಡುಯಲ್ ಜೋನ್ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ನಿಮ್ಮ ಗಮನಕ್ಕೆ.. ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಿರಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








