VinFast: 500+ ಕಿ.ಮೀ ಓಡುತ್ತೆ.. ಹೊಸ ಬ್ರ್ಯಾಂಡ್ ವಿನ್‌ಫಾಸ್ಟ್‌ನ VF7 ಕುರಿತ ಪ್ರಮುಖಾಂಶಗಳಿವು, ಬೆಲೆ ಎಷ್ಟು?
ವಿಯೆಟ್ನಾಂಗೆ ಸೇರಿರುವ ವಿನ್‌ಫಾಸ್ಟ್ (VinFast), ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ಈಚೆಗೆ ಹೊಚ್ಚ ಹೊಸ 'ವಿಎಫ್7' ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತ್ತು. ಈ ಕಾರನ್ನು ತಮಿಳುನಾಡಿನ ತೂತುಕುಡಿಯಲ್ಲಿರುವ ಕಂಪನಿಯ ಉತ್ಪಾದನಾ ಘಟಕದಲ್ಲಿ ತಯಾರಿಸಲಾಗುತ್ತದೆ. ಇದು ಆತ್ಯಾಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಸ್ಪರ್ಧಾತ್ಮಕ ದರಯಲ್ಲಿಯೂ ಸಿಗುತ್ತದೆ. ನಾವಿಲ್ಲಿ ಈ ನೂತನ 'ವಿಎಫ್7'ರ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ಸಂಪೂರ್ಣವಾಗಿ ವಿವರಿಸಿದ್ದೇವೆ.
ಬೆಲೆ (Price & Variants):
ಹೊಸ ವಿನ್‌ಫಾಸ್ಟ್ ವಿಎಫ್7 (VinFast VF7) ಎಲೆಕ್ಟ್ರಿಕ್ ಎಸ್‌ಯುವಿ, ಕನಿಷ್ಠ ರೂ.20.89 ಲಕ್ಷ ಮತ್ತು ಗರಿಷ್ಠ ರೂ.25,49 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅರ್ಥ್, ವಿಂಡ್, ವಿಂಡ್ ಇನ್ಫಿನಿಟಿ, ಸ್ಕೈ ಮತ್ತು ಸ್ಕೈ ಇನ್ಫಿನಿಟಿ ಎಂಬ 5 ರೂಪಾಂತರಗಳನ್ನು ಹೊಂದಿದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, 'ವಿ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್ ಡೋರ್ ಹ್ಯಾಂಡಲ್‌ಗಳು ಮತ್ತು 18 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಡೆಸಾಟ್ ಸಿಲ್ವರ್, ಇನ್ಫಿನಿಟಿ ಬ್ಲಾಂಕ್, ಕ್ರಿಮ್ಸನ್ ರೆಡ್, ಜೆನಿತ್ ಗ್ರೇ ಮತ್ತು ಅರ್ಬನ್ ಮಿಂಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ಈ ಕಾರು ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 4,545 ಎಂಎಂ ಉದ್ದ, 1,890 ಎಂಎಂ ಅಗಲ ಮತ್ತು 1,636 ಎಂಎಂ ಎತ್ತರವು ಇದೆ. ಜೊತೆಗೆ 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,840 ವೀಲ್‌ಬೇಸ್‌ನ್ನು ಒಳಗೊಂಡಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ನೂತನ ವಿನ್‌ಫಾಸ್ಟ್ ವಿಎಫ್7 ಎಲೆಕ್ಟ್ರಿಕ್ ಎಸ್‌ಯುವಿ, 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 537 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಕಾರ್ಯಕ್ಷಮತೆ (Performance):
ಹೊಸ ವಿನ್‌ಫಾಸ್ಟ್ ವಿಎಫ್7 ಶಕ್ತಿಯುತವಾದ 2 ಪವರ್‌ಟ್ರೇನ್‌ನ್ನು ಒಳಗೊಂಡಿದೆ. 59.6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿರುವ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 438 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿರುವ ಸಿಂಗಲ್-ಎಲೆಕ್ಟ್ರಿಕ್ ಮೋಟಾರ್, 175 ಪಿಎಸ್ ಅಶ್ವ ಶಕ್ತಿ & 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಇನ್ನೊಂದು 70.8 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್, ಭರ್ತಿ ಚಾರ್ಜ್‌ನಲ್ಲಿ 532 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಡುಯಲ್-ಎಲೆಕ್ಟ್ರಿಕ್ ಮೋಟಾರ್‌ನ್ನು ಪಡೆದಿದೆ. ಇದು 201 ಪಿಎಸ್ ಅಶ್ವ ಶಕ್ತಿ & 310 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.
ವೈಶಿಷ್ಟ್ಯಗಳು (Features):
ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 12.9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಗ್ಲಾಸ್ ರೂಫ್, ಕ್ರೂಸ್ ಕಂಟ್ರೋಲ್, ಕನೆಕ್ಟೆಡ್ ಕಾರ್ ಟೆಕ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 8 ವೇ ಪವರ್ ಅಡ್ಜಸ್ಟೇಬಲ್ ಡ್ರೈವರ್ ಸೀಟ್ ಮತ್ತು ಡುಯಲ್ ಜೋನ್ ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದಲ್ಲಿ ಸುರಕ್ಷತೆ ಒದಗಿಸುತ್ತದೆ. 7 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್ ಡಿಸ್ಕ್ ಬ್ರೇಕ್‌ಗಳು, ರೈನ್ ಸೆನ್ಸಿಂಗ್ ವೈಪರ್‌ಗಳು ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








