Volkswagen: ಲಕ್ಷುರಿ ಫೀಚರ್ಸ್‌ನ ಪೋಕ್ಸ್‌ವ್ಯಾಗನ್ ಟಿಗುವಾನ್ ಆರ್-ಲೈನ್ ಕಾರು ಬಿಡುಗಡೆ.. ಬೆಲೆ ಎಷ್ಟು?

ಜರ್ಮನಿ ಮೂಲದ ಪೋಕ್ಸ್‌ವ್ಯಾಗನ್ (Volkswagen) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿಯೂ ಕಂಪನಿಯ ಕಾರುಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಳ್ಳುತ್ತಿವೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಹೊಚ್ಚ ಹೊಸ ಟಿಗುವಾನ್ ಆರ್-ಲೈನ್ ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿದೆ. ಬನ್ನಿ.. ಈ ಕಾರಿನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ನೂತನ ಪೋಕ್ಸ್‌ವ್ಯಾಗನ್ ಟಿಗುವಾನ್ ಆರ್-ಲೈನ್ (Volkswagen Tiguan R-Line) ಎಸ್‌ಯುವಿ, ಹೆಚ್ಚು ಸ್ಪೋರ್ಟಿಯರ್ ವಿನ್ಯಾಸವನ್ನು ಹೊಂದಿದೆ. ಅಗ್ರೆಸ್ಸಿವ್ ಬಂಪರ್‌ಗಳು, ಮುಂಭಾಗ (ಫ್ರಂಟ್) ದೊಡ್ಡದಾದ ಗ್ರಿಲ್, ಉತ್ತಮವಾಗಿರುವ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು, 19-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಜೊತೆಗೆ ಹಿಂಭಾಗ (ರೇರ್) ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 'ಆರ್-ಲೈನ್' ಬ್ಯಾಡ್ಜಿಂಗ್‌ನ್ನು ಒಳಗೊಂಡಿದೆ.

Volkswagen Tiguan R-Line Launched In India Price Mileage And Features Details

ಈ ಕಾರು ಪರ್ಸಿಮನ್ ರೆಡ್ ಮೆಟಾಲಿಕ್, ಸಿಪ್ರೆಸ್ಸಿನೊ ಗ್ರೀನ್ ಮೆಟಾಲಿಕ್, ನೈಟ್‌ಶೇಡ್ ಬ್ಲೂ ಮೆಟಾಲಿಕ್ ಮತ್ತು ಗ್ರೆನಡಿಲ್ಲಾ ಬ್ಲ್ಯಾಕ್ ಮೆಟಾಲಿಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ. ಇದು 4,539 ಎಂಎಂ ಉದ್ದ, 1,859 ಎಂಎಂ ಅಗಲ ಹಾಗೂ 1,656 ಎಂಎಂ ಎತ್ತರವೂ ಇದ್ದು, 2,680 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ ಪೋಕ್ಸ್‌ವ್ಯಾಗನ್ ಟಿಗುವಾನ್ ಆರ್-ಲೈನ್ ಎಸ್‌ಯುವಿ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 2.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 201 ಬಿ‌ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 320 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 7-ಸ್ಪೀಡ್ ಡಿಸಿಟಿ (ಡುಯಲ್-ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. 12.58 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Volkswagen Tiguan R-Line Launched In India Price Mileage And Features Details

ನೂತನ ಟಿಗುವಾನ್ ಆರ್-ಲೈನ್ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.3-ಇಂಚಿನ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ವೈರ್‌ಲೆಸ್ ಆಪಲ್ ಕಾರ್‌ಪ್ಲೇ, 3-ಜೋನ್ ಆಟೋ ಎಸಿ, ಆಂಬಿಯೆಂಟ್ ಲೈಟಿಂಗ್ ಮತ್ತು ಡುಯಲ್ ವೈರ್‌ಲೆಸ್ ಫೋನ್ ಚಾರ್ಜರ್‌ಗಳನ್ನು ಪಡೆದಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. 9 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಸ್ಟಾರ್ಟ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಡಿಸ್ಕ್ ಬ್ರೇಕ್‌ಗಳು ಮತ್ತು ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ನಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Volkswagen Tiguan R-Line Launched In India Price Mileage And Features Details

ಹೊಸ ಪೋಕ್ಸ್‌ವ್ಯಾಗನ್ ಟಿಗುವಾನ್ ಆರ್-ಲೈನ್ ಎಸ್‌ಯುವಿ ದುಬಾರಿ ಬೆಲೆಯನ್ನು ಹೊಂದಿದೆ. ಇದು ರೂ.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 652 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, April 14, 2025, 18:25 [IST]
English summary
Volkswagen tiguan r line launched in india price mileage and features details
Read more on volkswagen india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+