Volkswagen: ಸೂಪರ್ ಫೀಚರ್ಸ್.. ಅರಮನೆಯಂತಿರುವ ಹೊಸ ಪೋಕ್ಸ್‌ವ್ಯಾಗನ್ ಎಸ್‌ಯುವಿ ಕುರಿತ ಪ್ರಮುಖಾಂಶಗಳಿವು!
ಜರ್ಮನಿ ದೇಶಕ್ಕೆ ಸೇರಿರುವ ಪೋಕ್ಸ್‌ವ್ಯಾಗನ್ (Volkswagen) ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯವಾಗಿ ಕಂಪನಿಯ ಕಾರುಗಳು ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ಇತ್ತೀಚೆಗೆ, ನೂತನ ಟಿಗುವಾನ್ ಆರ್-ಲೈನ್ (Tiguan R-Line) ಎಸ್‌ಯುವಿಯನ್ನು ಪರಿಚಯಿಸಲಾಗಿದೆ. ಈ ಕಾರು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದೆ. ಬನ್ನಿ.. ಈ ಎಸ್‌ಯುವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳನ್ನು ತಿಳಿಯೋಣ.
ಬೆಲೆ, ಆಸನ ಆಯ್ಕೆ & ಬೂಟ್ ಸ್ಪೇಸ್ (Price, Seating Capacity & Boot Space): ಹೊಚ್ಚ ಹೊಸ ಪೋಕ್ಸ್‌ವ್ಯಾಗನ್ ಟಿಗುವಾನ್ ಆರ್-ಲೈನ್ ಕಾರು, ರೂ.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 652 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ವಿನ್ಯಾಸ (Design & Colors): ಈ ಎಸ್‌ಯುವಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಬಹುಮುಖ್ಯವಾಗಿ ಅಗ್ರೆಸ್ಸಿವ್ ಬಂಪರ್‌ಗಳು, ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು, ಅಲಾಯ್ ವೀಲ್‌ಗಳು ಮತ್ತು ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ. ಸಿಪ್ರೆಸ್ಸಿನೊ ಗ್ರೀನ್ ಮೆಟಾಲಿಕ್, ನೈಟ್‌ಶೇಡ್ ಬ್ಲೂ ಮೆಟಾಲಿಕ್ ಹಾಗೂ ಗ್ರೆನಡಿಲ್ಲಾ ಬ್ಲ್ಯಾಕ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಕಾರ್ಯಕ್ಷಮತೆ (Performance): ನೂತನ ಪೋಕ್ಸ್‌ವ್ಯಾಗನ್ ಟಿಗುವಾನ್ ಆರ್-ಲೈನ್ ಕಾರು, 2.0-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 201 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 320 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 12.58 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ವೈಶಿಷ್ಟ್ಯಗಳು (Features): ಹೊಸ ಪೋಕ್ಸ್‌ವ್ಯಾಗನ್ ಟಿಗುವಾನ್ ಆರ್-ಲೈನ್ ಎಸ್‌ಯುವಿ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.9 - ಇಂಚು), ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ (10.3 - ಇಂಚು), ಆಂಡ್ರಾಯ್ಡ್ ಆಟೋ, ವೈರ್‌ಲೆಸ್ ಆಪಲ್ ಕಾರ್‌ಪ್ಲೇ, 3-ಜೋನ್ ಆಟೋ ಎಸಿ ಹಾಗೂ ಡುಯಲ್ ವೈರ್‌ಲೆಸ್ ಫೋನ್ ಚಾರ್ಜರ್‌ನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 9-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಸ್ಟಾರ್ಟ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಇನ್ನು, ಹೊಚ್ಚ ಹೊಸ ಪೋಕ್ಸ್‌ವ್ಯಾಗನ್ ಟಿಗುವಾನ್ ಆರ್-ಲೈನ್ ಎಸ್‌ಯುವಿ ಬಿಡುಗಡೆಯಾಗಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಹೆಚ್ಚು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಆದರೆ, ಈ ಕಾರು ಕೊಂಚ ದುಬಾರಿ ಬೆಲೆಯನ್ನು ಹೊಂದಿದ್ದು, ಸಾಮಾನ್ಯ ಮಧ್ಯಮ ವರ್ಗದ ಖರೀದಿದಾರರು ಕೊಂಡುಕೊಳ್ಳಲು ಹಿಂದೇಟು ಹಾಕಬಹುದು. ಅದರ ಹೊರತಾಗಿ ಬಹುತೇಕ ಶ್ರೀಮಂತ ಗ್ರಾಹಕರ ಆಯ್ಕೆಯ ವಾಹನವಾಗುವುದರಲ್ಲಿ ಎರಡು ಮಾತಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








