Volvo: 490 ಕಿ.ಮೀ ಓಡುತ್ತೆ.. ಹೊಸ ವೋಲ್ವೋ ಇಎಕ್ಸ್30 ಎಲೆಕ್ಟ್ರಿಕ್ ಎಸ್‌ಯುವಿ ಕುರಿತ ಪ್ರಮುಖಾಂಶಗಳಿವು, ಯಾರು ಹೇಳಲ್ಲ!
ಇತ್ತೀಚೆಗೆ ನೂತನ ವೋಲ್ವೋ ಇಎಕ್ಸ್30 (Volvo EX30) ಕಾರನ್ನು ಮಾರಾಟಕ್ಕೆ ತರಲಾಗಿದೆ. ಇದೊಂದು ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದೆ. ನೋಡುಗರ ಕಣ್ಣು ಕುಕ್ಕುವಂತಹ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ತುಂಬಾ ಚೆನ್ನಾಗಿರುವ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ನಾವಿಲ್ಲಿ ಈ ಹೊಚ್ಚ ಹೊಸ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ (Price):
ಈ ಕಾರು ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ರೂ.41 ಲಕ್ಷ ಎಕ್ಸ್-ಶೋರೂಂ ದರವನ್ನು ಹೊಂದಿದೆ. ನವೆಂಬರ್ ಮೊದಲ ವಾರದಿಂದ ಅಧಿಕೃತವಾದ ವಿತರಣೆಗಳು ಆರಂಭವಾಗಲಿದೆ. ಅ.19ರ ಮುನ್ನ ಬುಕ್ಕಿಂಗ್ ಮಾಡಿದ ಖರೀದಿದಾರರಿಗೆ ಇದೇ ಎಲೆಕ್ಟ್ರಿಕ್ ಎಸ್‌ಯುವಿ ರೂ.39.99 ಲಕ್ಷ ಬೆಲೆಯಲ್ಲಿ ಲಭ್ಯವಾಗಲಿದೆ.

ವಿನ್ಯಾಸ & ಬಣ್ಣಗಳು (Design & Colors):
ನೂತನ 'ವೋಲ್ವೋ ಇಎಕ್ಸ್30' ಎಲೆಕ್ಟ್ರಿಕ್ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಸ್ಪ್ಲಿಟ್ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಮಾಸ್ ಯೆಲ್ಲೋ, ಕ್ರಿಸ್ಟಲ್ ವೈಟ್ ಮತ್ತು ಓನಿಕ್ಸ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಸುತ್ತಳತೆ (Dimensions):
ಇದು ದೊಡ್ಡ ಗಾತ್ರದ ಕಾರಾಗಿದೆ. 4,233 ಎಂಎಂ ಉದ್ದ, 1,838 ಎಂಎಂ ಅಗಲ ಮತ್ತು 1,550 ಎಂಎಂ ಎತ್ತರವಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,650 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 1,900 ಕೆಜಿ ತೂಕ ಕೂಡ ಇದೆ.
ಆಸನ ಆಯ್ಕೆ (Seating Capacity & Boot Space):
ಹೊಸ ವೋಲ್ವೋ ಇಎಕ್ಸ್30 ಎಲೆಕ್ಟ್ರಿಕ್ ಎಸ್‌ಯುವಿ ಒಟ್ಟು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವಾಗುವ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.
ಕಾರ್ಯಕ್ಷಮತೆ (Performance):
ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 69 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 490 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ರೇರ್ ಮೌಂಟೆಡ್ ಎಲೆಕ್ಟ್ರಿಕ್ ಮೋಟಾರ್‌ನ್ನು ಒಳಗೊಂಡಿದ್ದು, 268 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 343 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ವೈಶಿಷ್ಟ್ಯಗಳು (Features):
ಇದರ ಕ್ಯಾಬಿನ್ ವಿನ್ಯಾಸವು ಸಾಕಷ್ಟು ಆಕರ್ಷಕವಾಗಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 5.3 ಸೆಕೆಂಡುಗಳಲ್ಲಿ 0 ರಿಂದ 100 ವೇಗವನ್ನು ಹೊಂದಲಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 2-ಜೋನ್ ಅಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆಂಬಿಯೆಂಟ್ ಲೈಟಿಂಗ್, ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಮತ್ತು ಡಿಜಿಟಲ್ ಕೀ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ನೂತನ ವೋಲ್ವೋ ಇಎಕ್ಸ್30 ಎಲೆಕ್ಟ್ರಿಕ್ ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಹತ್ತಾರು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಕ್ರೂಸ್ ಕಂಟ್ರೋಲ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಒಟ್ಟಾರೆಯಾಗಿ 'ವೋಲ್ವೋ ಇಎಕ್ಸ್30' ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಅತ್ಯುತ್ತಮವಾದ ವಿನ್ಯಾಸ ಹಾಗೂ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಈ ಕಾರಿನ ವಿತರಣೆಯು ಶುರುವಾದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications








