ಭಾರತದಲ್ಲಿ ಕಾಣಿಸಿಕೊಂಡ ವಿಶ್ವದ ಮೊದಲ ಟೊಯೊಟಾ ಇನ್ನೋವಾ ಹೈಕ್ರಾಸ್ ಸಿಎನ್‌ಜಿ ಕಾರು.. ವಿಡಿಯೋ ನೋಡಿ!

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಜನಪ್ರಿಯ ಎಂಪಿವಿಯಾಗಿದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇದು ಪೆಟ್ರೋಲ್ ಮತ್ತು ಹೈಬ್ರಿಡ್ ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಸದ್ಯ, ಗರಿಷ್ಠ ಮೈಲೇಜ್ ನೀಡಲು ಸಾಧ್ಯವಾಗುವಂತೆ ಇದೇ ಇನ್ನೋವಾ ಹೈಕ್ರಾಸ್ ಎಂಪಿವಿಯಲ್ಲಿ ಸಿಎನ್‌ಜಿ ಕಿಟ್ ಅಳವಡಿಕೆ ಮಾಡಲಾಗಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಎಲ್ಲರೂ ಅಂದುಕೊಂಡ ರೀತಿಯಲ್ಲಿ ಟೊಯೊಟಾ ಕಂಪನಿಯು ಈ ಇನ್ನೋವಾ ಹೈಕ್ರಾಸ್ ಎಂಪಿವಿಯಲ್ಲಿ ಸಿಎನ್‌ಜಿ ಕಿಟ್‌ನ್ನು ಫಿಟ್ ಮಾಡಿ ಬಿಡುಗಡೆಗೊಳಿಸಿಲ್ಲ. ಬದಲಾಗಿ ಗುಜರಾತ್‌ನ ವಡೋದರಾದ ಗ್ಯಾರೇಜ್‌ವೊಂದರಲ್ಲಿ ಗ್ರಾಹಕರೊಬ್ಬರು ಇನ್ನೋವಾಗೆ ಸಿಎನ್‌ಜಿ ಟ್ಯಾಂಕ್‌ನ್ನು ಹಾಕಿಸಿದ್ದಾರೆ. ಆ ನಂತರದಲ್ಲಿ ಇನ್ನೋವಾ ಹೈಕ್ರಾಸ್ ಎಂಪಿವಿಯನ್ನು ಓಡಿಸಿ ಟೆಸ್ಟ್ ಮಾಡಿರುವುದನ್ನು ವಿಡಿಯೋದಲ್ಲಿ ನೋಡಬಹುದು.

World s First Toyota Innova Hycross CNG Arrives In India Details

ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ ವಿಶೇಷತೆಗಳೇನು: ಇದು ರೂ.19.94 ಲಕ್ಷದಿಂದ ರೂ.31.34 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಜಿಎಕ್ಸ್, ಜಿಎಕ್ಸ್ (ಒ), ವಿಎಕ್ಸ್, ವಿಎಕ್ಸ್ (ಒ), ಝಡ್ಎಕ್ಸ್ ಮತ್ತು ಝಡ್ಎಕ್ಸ್ (ಒ) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ.

ನೂತನ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟೋಲ್ ಎಂಜಿನ್ 175 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 209 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

World s First Toyota Innova Hycross CNG Arrives In India Details

ಮತ್ತೊಂದು 2-ಲೀಟರ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) 186 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 188 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ ಸಿವಿಟಿ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16.13 ರಿಂದ 23.24 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ನೂತನ ಇನ್ನೋವಾ ಹೈಕ್ರಾಸ್ ಕಾರು ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಪರ್ಲ್ ಮತ್ತು ಕ್ರಿಸ್ಟಲ್ ಶೈನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ನೂತನ ಇನ್ನೋವಾಗೆ ಕಿಯಾ ಕ್ಯಾರೆನ್ಸ್‌ ಎಂಪಿವಿ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, February 21, 2025, 22:42 [IST]
English summary
Worlds first toyota innova hycross cng arrives in india details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+