ಯುಗಾದಿ, ರಂಜಾನ್‌ಗೆ ಈ ಮಾರ್ಗಗಳಲ್ಲಿ 2000 ಹೆಚ್ಚುವರಿ ಬಸ್ಸುಗಳು: 115 ಹೊಸ ಬಸ್ಸುಗಳಿಗೂ ಚಾಲನೆ

ನಮ್ಮ ಕೆಎಸ್‌ಆರ್‌ಟಿಸಿ ಬಸ್‌ಗಳು ದಕ್ಷಿಣ ಭಾರತದಲ್ಲಿ ತುಂಬಾ ಜನಪ್ರಿಯತೆ ಪಡೆದಿವೆ. ನಿತ್ಯ ಸಾವಿರಾರು ಮಂದಿಗೆ ಆರಾಮದಾಯಕ ಪ್ರಯಾಣವನ್ನು ಒದಗಿಸುವುದರ ಜೊತೆಗೆ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವನ್ನು ನಿಡುತ್ತಿದೆ. ರಾಜ್ಯದಲ್ಲಿ ವಿವಿಧ ಜಿಲ್ಲೆಗಳ ನಡೆವೆ ಹಾಗೂ ವಿವಿಧ ರಾಜ್ಯಗಳಿಗೂ ಸೌಕರ್ಯಯುತ ಪ್ರಯಾಣ ಅನುಭವ ನೀಡುವಲ್ಲಿ ಯಶಸ್ವಿಯಾಗಿದೆ. ಈಗ ಮತ್ತಷ್ಟು ಹೊಸ ಬಸ್‌ಗಳ ಸೇರ್ಪಡೆ ಮಾಡುವ ಮೂಲಕ ಹೆಚ್ಚಿನ ಪ್ರದೇಶಗಳಿಗೆ ಹೆಚ್ಚಿನ ಬಸ್‌ಗಳನ್ನು ಒದಗಿಸಲಾಗಿದೆ. ಮೊನ್ನೆಯಷ್ಟೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೂತನ 45 ಕರ್ನಾಟಕ ಸಾರಿಗೆ ಹಾಗೂ 70 ಪಲ್ಲಕ್ಕಿ ಬಸ್ಸುಗಳಿಗೆ ಚಾಲನೆ ನೀಡಿದ್ದಾರೆ.

70 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್ಸು ಹಾಗೂ 45 ಕರ್ನಾಟಕ ಸಾರಿಗೆ ಬಸ್ಸುಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ನಿಗಮಕ್ಕೆ ಒಟ್ಟು 805 ಸಂಖ್ಯೆಯ ಹೊಸ ಕರ್ನಾಟಕ ಸಾರಿಗೆ ಹಾಗೂ ನಗರ / ಗ್ರಾಮಾಂತರ ಸಾರಿಗೆ ವಾಹನಗಳು ಏಪ್ರಿಲ್, ಮೇ ಮತ್ತು ಜೂನ್ - 2026 ಮಾಹೆಗಳಲ್ಲಿ ಸೇರ್ಪಡೆಗೊಳ್ಳಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

115-new-ksrtc-buses-launched-2000-additional-buses-for-ugadi-ramjan

ಮಾರ್ಗಗಳು: ಪಲ್ಲಕ್ಕಿ ಬಸ್ಸುಗಳನ್ನು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಕಾರ್ಯಾಚರಣೆ ಮಾಡಲಾಗುತ್ತದೆ.

ಯುಗಾದಿ ಹಾಗೂ ರಂಜಾನ್ ಹಬ್ಬಕ್ಕೆ 2000 ಹೆಚ್ಚುವರಿ ಬಸ್ಸುಗಳು

ದಿನಾಂಕ 19.03.2026 ರಂದು ಯುಗಾದಿ ಹಾಗೂ ದಿನಾಂಕ 21.03.2026 ರಂದು ರಂಜಾನ್ ಹಬ್ಬದ ಪ್ರಯುಕ್ತ ಕೆಎಸ್ಆರ್‌ಟಿಸಿ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಾರ್ಚ್ 18, 19, 20 ದಿನಾಂಕಗಳಂದು ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ 22-03-2026 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

115-new-ksrtc-buses-launched-2000-additional-buses-for-ugadi-ramjan

ಕೆಂಪೇಗೌಡ ಬಸ್ ನಿಲ್ದಾಣದಿಂದ: ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಇರಲಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
ಮುಂಗಡ ಕಾಯ್ದಿರಿಸುವಿಕೆ: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಪ್ರಯಾಣಿಕರ ಗಮನಕ್ಕೆ: ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್-ಅಪ್ ಪಾಯಿಂಟ್ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
ಇ-ಟಿಕೆಟ್ ಬುಕಿಂಗ್: www.ksrtc.karnataka.gov.in ವೆಬ್‌ಸೈಟ್ ಮೂಲಕ ಮಾಡಬಹುದಾಗಿದೆ.

115-new-ksrtc-buses-launched-2000-additional-buses-for-ugadi-ramjan

ರಿಯಾಯಿತಿ ದರಗಳು: ನಾಲ್ಕು ಅಥವಾ ಹೆಚ್ಚಿನ ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ನೀಡಲಾಗುವುದು.

ಅಂತರರಾಜ್ಯ ಸೌಲಭ್ಯ: ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿರುವ ನಿಗಮದ ಮುಂಗಡ ಆಸನ ಕಾಯ್ದಿರಿಸುವ ಕೌಂಟರ್‌ಗಳ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದು. ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ಕೆಎಸ್‌ಆರ್‌ಟಿಸಿ ತಿಳಿಸಿದೆ.

More from DriveSpark

Article Published On: Sunday, March 15, 2026, 16:35 [IST]
English summary
115 new ksrtc buses launched 2000 additional buses for ugadi ramjan
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+