ಒಂದು ರಗಡ್.. ಮತ್ತೊಂದು ಸ್ಟೈಲಿಶ್.. ಅದ್ಭುತ ಎಸ್‌ಯುವಿಗಳಿವು.. ಯಾವುದು ಬೆಸ್ಟ್?
ಈಚೆಗೆ 2026ರ ಹೊಸ ತಲೆಮಾರಿನ ರೆನಾಲ್ಟ್ ಡಸ್ಟರ್ (Renault Duster) ಎಸ್‌ಯುವಿಯನ್ನು ಅನಾವರಣಗೊಳಿಸಲಾಯಿತು. ಇದಕ್ಕೆ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ನೇರವಾದ ಎದುರಾಳಿಯಾಗಿದೆ. ಇವೆರೆಡು ಕಾರುಗಳು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿವೆ. ನಾವಿಲ್ಲಿ ಈ ಎಸ್‌ಯುವಿಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಬೆಲೆ & (Price):
ನೂತನ 'ರೆನಾಲ್ಟ್ ಡಸ್ಟರ್' ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಾಗುವ ನೀರಿಕ್ಷೆಯಿದೆ. ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ರೂ.9.50 ಲಕ್ಷದಿಂದ ರೂ.19 ಲಕ್ಷ ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಅದೇ ರೀತಿಯಲ್ಲಿ 'ಮಾರುತಿ ವಿಕ್ಟೋರಿಸ್' ರೂ.10.50 ಲಕ್ಷದಿಂದ ರೂ.19.99 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ದರದ ವಿಚಾರದಲ್ಲಿ 'ವಿಕ್ಟೋರಿಸ್'ಗಿಂತ 'ಡಸ್ಟರ್' ಅಗ್ಗವಾಗಿರಲಿದೆ ಎನ್ನಲಾಗಿದೆ.

ವಿನ್ಯಾಸ (Design):
ಈ ಕಾರುಗಳು ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿವೆ. 'ರೆನಾಲ್ಟ್ ಡಸ್ಟರ್' ಎಸ್‌ಯುವಿಯು ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು & 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಪರ್ಲ್ ವೈಟ್, ಮೂನ್‌ಲೈಟ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್, ರಿವರ್ ಬ್ಲೂ ಮತ್ತು ಸನ್‌ಸೆಟ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
'ವಿಕ್ಟೋರಿಸ್' ಎಸ್‌ಯುವಿಯು ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ & ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಕಾರ್ಯಕ್ಷಮತೆ (Performance):
ಇವೆರೆಡು ಕಾರುಗಳು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿವೆ. 'ರೆನಾಲ್ಟ್ ಡಸ್ಟರ್' 1.8-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್), 1.3-ಲೀ. ಟರ್ಬೊ ಪೆಟ್ರೋಲ್ ಹಾಗೂ 1.0-ಲೀ. ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, 8-ಸ್ಪೀಡ್ ಡಿಹೆಚ್‌ಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 18 ರಿಂದ 22 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ ಎಂದು ಹೇಳಲಾಗಿದೆ.
'ವಿಕ್ಟೋರಿಸ್' 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 21.06 ರಿಂದ 28.65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
'ರೆನಾಲ್ಟ್ ಡಸ್ಟರ್' ಹಾಗೂ 'ಮಾರುತಿ ವಿಕ್ಟೋರಿಸ್' ಎಸ್‌ಯುವಿಗಳೆರಡು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿವೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 'ಡಸ್ಟರ್' ದೊಡ್ಡದಾಗಿರುವ 700 ಲೀಟರ್ ಮತ್ತು 'ವಿಕ್ಟೋರಿಸ್' ಸಣ್ಣದಾಗಿರುವ 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ವೈಶಿಷ್ಟ್ಯಗಳು (Features):
ಈ ಎಸ್‌ಯುವಿಗಳು ಅತ್ಯಾಧುನಿಕವಾದ ವೈಶಿಷ್ಟ್ಯಗಳನ್ನು ಒಳಗೊಂಡಿವೆ. 'ಡಸ್ಟರ್' 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸನ್‌ರೂಫ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್‌ನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
'ವಿಕ್ಟೋರಿಸ್' 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, ಕಪ್ ಹೋಲ್ಡರ್‌ಗಳು ಹಾಗೂ 64-ಕಲರ್ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








