Tata: ನೂತನ ಟಾಟಾ ಎಸ್‌ಯುವಿಗೆ ಜೈಕಾರ ಹಾಕಿದ ಜನ.. ರೂ.6.49 ಲಕ್ಷ.. 468 Km ರೇಂಜ್!

ಇತ್ತೀಚೆಗೆ ಹೊಸ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತು. ಈ ಕಾರು ನೋಡಲು ತುಂಬಾ ಚೆನ್ನಾಗಿದ್ದು, ನಾನಾ ಬಗೆಯ ನವೀನತೆಗಳಿಗೂ ಸಾಕ್ಷಿಯಾಗಿದೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಸದ್ಯ ಇದೇ 'ಪಂಚ್ ಇವಿ'ಗಾಗಿ ಗ್ರಾಹಕರು ಮುಗಿಬಿದ್ದಿದ್ದು, ಕಾಯುವಿಕೆ ಅವಧಿ (Waiting Period) ಕುರಿತಂತೆ ಪ್ರಮುಖ ವಿವರಗಳು ಬಹಿರಂಗಗೊಂಡಿವೆ. ದೇಶಾದ್ಯಂತ ಈ ಕಾರು ರೂಪಾಂತರಗಳನ್ನು ಅವಲಂಭಿಸಿ ವಿತರಣೆಯಾಗಲು 7 ರಿಂದ 10 ವಾರಗಳು ಸಮಯಾವಕಾಶ ಬೇಕಾಗುತ್ತದೆ ಎಂದು ವರದಿಯಾಗಿದೆ.

'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ವಿಶೇಷತೆಗಳೇನು:

ನೂತನ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್' ಕಾರು, ಕನಿಷ್ಠ ರೂ.9.69 ಲಕ್ಷ ಹಾಗೂ ಗರಿಷ್ಠ ರೂ.12.59 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಬಾಸ್ (ಬ್ಯಾಟರಿ ಆಸ್-ಎ-ಸರ್ವಿಸ್) ಯೋಜನೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಆ ಮಾಡೆಲ್‌ನ ಆರಂಭಿಕ ದರವು ರೂ.6.49 ಲಕ್ಷ ಇದೆ. ಪ್ರತಿ ಕಿ.ಮೀ ಚಾಲನೆಗೆ ರೂ.2.60 ಬಾಡಿಗೆಯನ್ನು ಕಟ್ಟಬೇಕು. ಈಗಲೂ ಬುಕ್ಕಿಂಗ್‌ ಓಪನ್ ಇದ್ದು, ಆಸಕ್ತರು ಸಮೀಪದ ಶೋರೂಂ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.21,000 ಮುಂಗಡ ಹಣ ಪಾವತಿಸಿ ಆರ್ಡರ್ ಮಾಡಬಹುದು.

2026 Tata Punch EV Facelift Waiting Period Revealed Details

ಈ ಎಸ್‌ಯುವಿಯು ಸ್ಮಾರ್ಟ್ (Smart), ಸ್ಮಾರ್ಟ್ ಪ್ಲಸ್ (Smart Plus), ಅಡ್ವೆಂಚರ್ (Adventure), ಎಂಪವರ್ಡ್ (Empowered) ಮತ್ತು ಎಂಪವರ್ಡ್ ಪ್ಲಸ್ (Empowered Plus) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್‌ ವೀಲ್‌ಗಳನ್ನು ಹೊಂದಿದೆ.

ಇದು ಹೆಚ್ಚು ವಿಶಾಲವಾಗಿದೆ. 3827 ಮಿ.ಮೀ ಉದ್ದ, 1742 ಮಿ.ಮೀ ಅಗಲ ಹಾಗೂ 1,615 ಮಿ.ಮೀ ಎತ್ತರವಿದೆ. 195 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಫಿಯರ್‌ಲೆಸ್ ಯೆಲ್ಲೋ, ಎಂಪವರ್ಡ್ ಆಕ್ಸೈಡ್, ಪ್ರಿಸ್ಟೈನ್ ವೈಟ್, ಸೂಪರ್‌ನೋವಾ ಕಾಪರ್ ಮತ್ತು ಪ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

2026 Tata Punch EV Facelift Waiting Period Revealed Details

ಹೊಸ 'ಪಂಚ್ ಇವಿ' 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವೀಕೆಂಡ್‌ಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ, ಕೊಂಚ ಮಟ್ಟಿಗೆ ದೊಡ್ಡದಾದ 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಎಸ್‌ಯುವಿಯು ಶಕ್ತಿಶಾಲಿಯಾದ ಎರಡು ಪವರ್‌ಟ್ರೇನ್‌ನ್ನು ಹೊಂದಿದೆ. 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 40 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 365 ರಿಂದ 468 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 13.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 2-ಸ್ಪೋಕ್ ಸ್ಟೀರಿಂಗ್ ವೀಲ್, ಪ್ಯಾಡಲ್ ಶಿಫ್ಟರ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್‌ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಐ-ಹೈ ಬೀಮ್ ಅಲರ್ಟ್, ಹಿಲ್-ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Wednesday, March 18, 2026, 11:25 [IST]
English summary
2026 tata punch ev facelift waiting period revealed details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+