ಬರೀ 30 ಗ್ರಾಂ ಚಿನ್ನದ ಬೆಲೆಗೆ ಈ ಜನಪ್ರಿಯ ಕಾರನ್ನು ಖರೀದಿಸಬಹುದು.. 33 Km ಮೈಲೇಜ್, 5-ಸೀಟರ್.. ದರವೆಷ್ಟು?
ಇತ್ತೀಚಿನ ದಿನಗಳಲ್ಲಿ ಬಂಗಾರದ ಬೆಲೆ ಗಗನ ಕುಸುಮವಾಗಿದೆ. ಆದರೂ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಸದ್ಯ, ಬೆಂಗಳೂರಿನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1.42 ಲಕ್ಷವಿದೆ. 22 ಕ್ಯಾರೆಟ್‌ನ 10 ಗ್ರಾಂ ಬಂಗಾರದ ಬೆಲೆ ರೂ.1.30 ಲಕ್ಷ ಇದೆ. ಹಾಗೆಯೇ 18 ಗ್ರಾಂ ಚಿನ್ನದ ದರ 1.06 ಲಕ್ಷವಿದೆ. ಬೆಳ್ಳಿಯೂ ದುಬಾರಿಯಾಗಿದೆ. 1 ಕೆಜಿಗೆ ರೂ.2.70 ಲಕ್ಷ ಆಗಿದೆ.
ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಅಗ್ಗದ ದರದಲ್ಲಿ ಸಿಗುವ ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಬೆಸ್ಟ್ ಚಾಯ್ಸ್ ಆಗಲಿದೆ. ಇದು ರೂ.3.50 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ದರವನ್ನು ಪಡೆದಿದೆ. ರೂ.4.15 ಲಕ್ಷವರೆಗೆ ಆನ್-ರೋಡ್ ದರವಿದೆ. ಅದೇ ರೀತಿಯಲ್ಲಿ 24 ಕ್ಯಾರೆಟ್‌ನ 30 ಗ್ರಾಂ ಚಿನ್ನಕ್ಕೆ ಸರಿ ಸುಮಾರು ರೂ.4.26 ಲಕ್ಷ ಆಗುತ್ತದೆ. ಹೀಗಾಗಿ, ಅಷ್ಟು ಪ್ರಮಾಣದ ಬಂಗಾರ ಅಥವಾ ಹಣವಿದ್ದರೆ, ಈ ಕಾರನ್ನು ಸುಲಭವಾಗಿ ಖರೀದಿಸಬಹುದು.

'ಮಾರುತಿ ಎಸ್-ಪ್ರೆಸ್ಸೊ' ವಿಶೇಷತೆಗಳೇನು:
ಇದು ಸ್ಟ್ಯಾಂಡರ್ಡ್, ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ವಿಎಕ್ಸ್ಐ ಪ್ಲಸ್ ರೂಪಾಂತರಗಳೊಂದಿಗೂ ಸಿಗುತ್ತದೆ. ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಬ್ಲೂಯಿಶ್ ಬ್ಲ್ಯಾಕ್, ಸಾಲಿಡ್ ಫೈರ್ ರೆಡ್, ಮೆಟಾಲಿಕ್ ಗ್ರಾನೈಟ್ ಗ್ರೇ & ಮೆಟಾಲಿಕ್ ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ ಕಾರು ಪುಟ್ಟ ಹ್ಯಾಚ್‌ಬ್ಯಾಕ್ ಆಗಿದೆ. ಆದರೂ ನೋಡಲು ಎಸ್‌ಯುವಿಯಂತೆ ಭಾಸವಾಗುತ್ತದೆ. 3,565 ಎಂಎಂ ಉದ್ದ, 1,520 ಎಂಎಂ ಅಗಲ ಹಾಗೂ 1,553 ಎಂಎಂ ಎತ್ತರವಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,380 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 854 ಕೆಜಿ ತೂಕವಿದೆ.

ಹೊಸ 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ' ಶಕ್ತಿಶಾಲಿಯಾದ 2 ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1-ಲೀ. ಪೆಟ್ರೋಲ್ ಎಂಜಿನ್, 66 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1-ಲೀ. ಸಿಎನ್‌ಜಿ ಎಂಜಿನ್, 56 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24 ರಿಂದ 33 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 27 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 148 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 15 ಸೆಕೆಂಡುಗಳನ್ನು 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 270 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪವರ್ ವಿಂಡೋಗಳು, ಯುಎಸ್‌ಬಿ ಕನೆಕ್ಟಿವಿಟಿ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ನೂತನ 'ಮಾರುತಿ ಎಸ್-ಪ್ರೆಸ್ಸೊ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ ಡುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಸೆಂಟ್ರಲ್-ಲಾಕಿಂಗ್, ಆಟೋ-ಡೋರ್ ಲಾಕ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.


Click it and Unblock the Notifications








