682 Km ರೇಂಜ್.. ಜಬರ್ದಸ್ತ್ ಮಹೀಂದ್ರಾ SUV ಡೆಲಿವರಿ ಪಡೆದ ಖ್ಯಾತ ನಟ ಅಜಿತ್‌!

ತಮಿಳಿನ ಸ್ಟಾರ್‌ ನಟನಾಗಿ ಅಜಿತ್ ಕುಮಾರ್ (Ajith Kumar) ಖ್ಯಾತಿ ಗಳಿಸಿದ್ದಾರೆ. ಅಭಿನಯದ ಜೊತೆಗೆ ವೃತ್ತಿಪರ ರೇಸರ್ ಸಹ ಆಗಿದ್ದಾರೆ. ತಮ್ಮದೇ ರೇಸಿಂಗ್' ತಂಡ'ವನ್ನು ಹೊಂದಿದ್ದು, ಪ್ರತಿಭಾವಂತ ಯುವಕರನ್ನು ಪ್ರೋತ್ಸಹಿಸುತ್ತಿದ್ದಾರೆ. ನಿನ್ನೆ ಹೊಚ್ಚ ಹೊಸ ಮಹೀಂದ್ರಾ ಬಿಇ 6 ಫಾರ್ಮುಲಾ ಇ ಎಡಿಷನ್ (Mahindra BE 6 Formula E Edition) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಖರೀದಿಸಿದ್ದಾರೆ. ನೂತನ ಕಾರನ್ನು ಮಹೀಂದ್ರಾ ಕಂಪನಿಯ ಆಟೋಮೋಟಿವ್ ಟೆಕ್ನಾಲಜಿ & ಪ್ರಾಡಕ್ಟ್ ಡೆವಲಪ್‌ಮೆಂಟ್ ವಿಭಾಗದ ಮುಖ್ಯಸ್ಥರಾದ ಆರ್.ವೇಲುಸಾಮಿ ಅವರಿಂದ ಡೆಲಿವರಿ ತೆಗೆದುಕೊಂಡಿದ್ದಾರೆ.

ಮಹೀಂದ್ರಾ ಬಿಇ 6 ಫಾರ್ಮುಲಾ ಇ ಎಡಿಷನ್ ವಿಶೇಷತೆಗಳೇನು:

ಇದು ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ಕನಿಷ್ಠ ರೂ.23.69 ಲಕ್ಷ ಹಾಗೂ ಗರಿಷ್ಠ ರೂ.24.49 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಫ್ಇ2 (FE2) ಮತ್ತು ಎಫ್ಇ3 (FE3) ಎಂಬ 2 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Ajith Kumar Buys Mahindra BE 6 Formula E Edition Details

ಈ ಎಲೆಕ್ಟ್ರಿಕ್ ಎಸ್‌ಯುವಿಯು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ನೋಡುಗರ ಕಣ್ಣು ಕುಕ್ಕುವಂತಿದ್ದು, ಫ್ಯೂಚರಿಸ್ಟಿಕ್ ಲುಕ್‌ನ್ನು ಒಳಗೊಂಡಿದೆ. ಪರಿಷ್ಕರಣೆಗೊಂಡ ಬಂಪರ್‌ಗಳು, ಸರ್ಕ್ಯುಲರ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ನವೀನವಾದ ಎಲ್ಇಡಿ ಡಿಆರ್‌ಎಲ್‌ಗಳು, ಸ್ಪೋರ್ಟ್ ರೂಫ್ ಸ್ಪಾಯ್ಲರ್, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 20-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.

ಹೊಸ 'ಮಹೀಂದ್ರಾ ಬಿಇ 6 ಫಾರ್ಮುಲಾ ಇ ಎಡಿಷನ್' ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 4,371 ಎಂಎಂ ಉದ್ದ, 1,907 ಎಂಎಂ ಅಗಲ ಹಾಗೂ 1,627 ಎಂಎಂ ಎತ್ತರವಿದೆ. 207 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,775 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಟ್ಯಾಂಗೋ ರೆಡ್, ಸ್ಟೆಲ್ತ್ ಬ್ಲ್ಯಾಕ್, ಫೈರ್‌ಸ್ಟಾರ್ಮ್ ಆರೆಂಜ್ ಮತ್ತು ಎವರೆಸ್ಟ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Ajith Kumar Buys Mahindra BE 6 Formula E Edition Details

ಇದು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವೀಕೆಂಡ್‌ಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳಿವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ದೊಡ್ಡದಾದ 455 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ 'ಬಿಇ 6 ಫಾರ್ಮುಲಾ ಇ ಎಡಿಷನ್' ಎಲೆಕ್ಟ್ರಿಕ್ ಎಸ್‌ಯುವಿಯು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 682 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಈ ಕಾರಿನಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 285 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಆರ್‌ಡಬ್ಲ್ಯೂಡಿ (ರೇರ್-ವೀಲ್ ಡ್ರೈವ್) ಟೆಕ್ನಾಲಜಿಯನ್ನು ಬೆಂಬಲಿಸುತ್ತದೆ.

Ajith Kumar Buys Mahindra BE 6 Formula E Edition Details

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 12.3-ಇಂಚಿನ ಸ್ಕ್ರೀನ್‌ಗಳು, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಟೂ ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಚಾರ್ಜರ್‌ಗಳು, ಕೀಲೆಸ್ ಎಂಟ್ರಿ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 16-ಸ್ಪೀಕರ್ ಹರ್ಮನ್ ಮ್ಯೂಸಿಕ್ ಸಿಸ್ಟಮ್ ಹಾಗೂ ರೇರ್ ಎಸಿ ವೆಂಟ್‌ಗಳಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ಹಿತದೃಷ್ಟಿಯಿಂದ 7-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಟೋ ಪಾರ್ಕಿಂಗ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Saturday, March 14, 2026, 17:54 [IST]
English summary
Ajith kumar buys mahindra be 6 formula e edition details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+