TATA: ಅತಿ ಶೀಘ್ರದಲ್ಲೇ ಹೊಸ ಟಾಟಾ ಎಸ್‌ಯುವಿ ಬಿಡುಗಡೆ.. ಬೆಲೆ ಇಷ್ಟೇನಾ, ವಿಶೇಷತೆಗಳೇನು?

ಟಾಟಾ ಮೋಟಾರ್ಸ್ (Tata Motors) 'ಪಂಚ್ ಇವಿ ಫೇಸ್‌ಲಿಫ್ಟ್' ಬಿಡುಗಡೆಯೊಂದಿಗೆ ಹೊಸ ಹುಮ್ಮಸ್ಸಿನಲ್ಲಿದ್ದು, ಮತ್ತೊಂದು ನೂತನ ಎಲೆಕ್ಟ್ರಿಕ್ ಎಸ್‌ಯುವಿವೊಂದನ್ನು ಮಾರಾಟಕ್ಕೆ ತರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲೇ ಟಾಟಾ ಸಿಯೆರಾ ಇವಿ (Tata Sierra EV) ಸಹ ಪರಿಚಯಗೊಳ್ಳಲಿದೆ. ಬನ್ನಿ, ಈ ಕಾರಿನ ನಿರೀಕ್ಷಿತ ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

2027ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಹೊಚ್ಚ ಹೊಸ 'ಟಾಟಾ ಸಿಯೆರಾ ಇವಿ' ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಅಂದರೆ, ಇದೇ 2026ರ ಏಪ್ರಿಲ್‌ನಿಂದ ಜೂನ್ ಅವಧಿಯಲ್ಲಿ ಮಾರಾಟಕ್ಕೆ ಬರುವ ಎಲ್ಲ ಸಾಧ್ಯತೆಗಳಿವೆ. ಈ ನೂತನ ಕಾರು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಾಗಲಿದ್ದು, ರೂ.15 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

All New Tata Sierra EV Launch In India FY2027 Q1 Details

ಟಾಟಾ ಸಿಯೆರಾ ಎಲೆಕ್ಟ್ರಿಕ್ ಎಸ್‌ಯುವಿಯು ಸ್ಟ್ಯಾಂಡರ್ಡ್ 'ಸಿಯೆರಾ'ದಂತೆಯೇ ವಿನ್ಯಾಸವನ್ನು ಹೊಂದಿರಲಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿರಲಿದೆ. ಜೊತೆಗೆ ಆಕರ್ಷಕವಾದ ಬಣ್ಣಗಳ ಆಯ್ಕೆಯಲ್ಲಿಯೂ ಸಿಗಲಿದೆ.

ಈ ಕಾರು ಹೆಚ್ಚು ವಿಶಾಲ ಗಾತ್ರದಲ್ಲಿರಲಿದೆ. 4,340 ಎಂಎಂ ಉದ್ದ, 1,841 ಎಂಎಂ ಅಗಲ ಮತ್ತು 1715 ಎಂಎಂ ಎತ್ತರವಿರಲಿದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2730 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿರಲಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

All New Tata Sierra EV Launch In India FY2027 Q1 Details

ಇದು ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿರಲಿದೆ. 'ಟಾಟಾ ಹ್ಯಾರಿಯರ್ ಇವಿ'ಯಂತೆ 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.

ಹೊಸ 'ಟಾಟಾ ಸಿಯೆರಾ ಇವಿ' ಕ್ಯಾಬಿನ್ ವಿನ್ಯಾಸವು ಚೆನ್ನಾಗಿರಲಿದೆ. ಅದು ಈಗಿರುವ 'ಸಿಯೆರಾ'ಗೆ ಹೋಲಿಕೆಯಾಗಲಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ವೈಪರ್‌ಗಳು, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ರೇರ್-ಎಸಿ ವೆಂಟ್‌ಗಳಂತಹ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ನೀರಿಕ್ಷೆಯಿದೆ.

All New Tata Sierra EV Launch In India FY2027 Q1 Details

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಸದ್ಯ ಖರೀದಿಗೆ ಲಭ್ಯವಿರುವ ಸ್ಟ್ಯಾಂಡರ್ಡ್ 'ಟಾಟಾ ಸಿಯೆರಾ' ವಿಶೇಷತೆಗಳೇನು:

ಇದು ರೂ.11.49 ಲಕ್ಷದಿಂದ ರೂ.21.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ & 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 15.5 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಎಸ್‌ಯುವಿಯು 5 ಆಸನಗಳನ್ನು ಹೊಂದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Tuesday, February 24, 2026, 11:30 [IST]
English summary
All new tata sierra ev launch in india fy2027 q1 details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+