Audi: ಹೊಸ ಆಡಿ ಎಸ್‍ಕ್ಯೂ8 ಬುಕ್ಕಿಂಗ್ ಶುರು.. ಮಾರ್ಚ್ 17 ರಂದು ಬಿಡುಗಡೆ!

ಜರ್ಮನಿ ಮೂಲದ ಆಡಿ (Audi) ಐಷಾರಾಮಿ ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಎಸ್‍ಕ್ಯೂ8 (SQ8) ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಇದೇ ಮಾರ್ಚ್ 17 ರಂದು ಅದ್ದೂರಿಯಾಗಿಯೂ ಮಾರಾಟಕ್ಕೆ ತರಲಾಗುತ್ತದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಬನ್ನಿ.. ಈ ನೂತನ ಎಸ್‌ಯುವಿಯ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಹೊಚ್ಚ ಹೊಸ ಆಡಿ ಎಸ್‍ಕ್ಯೂ8 (Audi SQ8) ಕಾರಿಗಾಗಿ ಬುಕ್ಕಿಂಗ್‌ನ್ನು ತೆರೆಯಲಾಗಿದೆ. ಆಸಕ್ತ ಗ್ರಾಹಕರು, ಆಡಿ ಇಂಡಿಯಾದ ಅಧಿಕೃತ ವೆಬ್‌ಸೈಟ್ ಅಥವಾ ಮೇಆಡಿ ಕನೆಕ್ಟ್ ಅಪ್ಲಿಕೇಶನ್‌ಗೆ ಭೇಟಿ ನೀಡಿ, ರೂ.5 ಲಕ್ಷ ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು. ರೂ.1.50 ಕೋಟಿಯಿಂದ ರೂ.1.90 ಕೋಟಿ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

Audi SQ8 Suv Bookings Open Launch on March 17 Details

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಮುಂಭಾಗ (ಫ್ರಂಟ್) ಸಿಲ್ವರ್ ಇನ್ಸರ್ಟ್‌ಗಳೊಂದಿಗೆ ಸ್ಪೋರ್ಟಿ ಬಂಪರ್, ಸಿಗ್ನೇಚರ್ ಸಿಂಗಲ್ ಫ್ರೇಮ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳನ್ನು ಪಡೆದಿದೆ. ಸ್ಲೋಪಿಂಗ್ ರೂಫ್‌ಲೈನ್ ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಹಿಂಭಾಗ (ರೇರ್) ಉತ್ತಮವಾದ ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ.

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 4.0-ಲೀಟರ್ ಟ್ವಿನ್-ಟರ್ಬೊ ವಿ8 ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 500 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 770 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಕೇವಲ 4 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ 'ಆಡಿ ಎಸ್‍ಕ್ಯೂ8' ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಒಳಗೊಂಡಿದೆ. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ಸರಿ ಸುಮಾರು 605 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 12.3-ಇಂಚಿನ ಡಿಸ್‌ಪ್ಲೇಗಳು, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಬ್ಯಾಂಗ್ & ಒಲುಫ್ಸೆನ್ ಆಡಿಯೋ ಸೆಟಪ್, ಕನೆಕ್ಟ್ಡ್ ಕಾರ್ ಟೆಕ್, ಆಂಬಿಯೆಂಟ್ ಲೈಟಿಂಗ್, ಮಲ್ಟಿ ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, ಫ್ಲಾಟ್-ಬಾಟಮ್ ಲೆದರ್ ಸ್ಟೀರಿಂಗ್ ವೀಲ್ ಹಾಗೂ ಪ್ಯಾಡಲ್ ಶಿಫ್ಟರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟ್ರಾಕ್ಷನ್ ಕಂಟ್ರೋಲ್, ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಹೊಸ 'ಆಡಿ ಎಸ್‍ಕ್ಯೂ8' ಎಸ್‌ಯುವಿಗೆ ಸಾಲು - ಸಾಲು ಎದುರಾಳಿಗಳಿರಲಿವೆ. ಪೋರ್ಷೆ ಕಯೆನ್ನೆ ಕೂಪೆ (Porsche Cayenne Coupe), ಬಿಎಂಡಬ್ಲ್ಯೂ ಎಕ್ಸ್5 (BMW X5), ಮರ್ಸಿಡಿಸ್-ಬೆನ್ಜ್ ಜಿಎಲ್ಇ 53 ಎಎಂಜಿ ಕೂಪೆ (Mercedes-Benz GLE 53 AMG Coupe), ಲ್ಯಾಂಡ್ ರೋವರ್ ಡಿಫೆಂಡರ್ 110 (Land Rover Defender 110) ಮತ್ತು ಲ್ಯಾಂಡ್ ರೋವರ್ ರೇಂಜ್ ರೋವರ್ ಸ್ಪೋರ್ಟ್ (Land Rover Range Rover Sport) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಬಲ್ಲವು.

More from DriveSpark

Article Published On: Thursday, March 12, 2026, 21:27 [IST]
English summary
Audi sq8 suv bookings open launch on march 17 details
Read more on audi india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+