ರಸ್ತೆಯ ಮೇಲೆ ಅರಮನೆಯಂತಿರುವ ನೂತನ ಕಾರು ಬಿಡುಗಡೆ.. ಬೆಲೆ ಎಷ್ಟು.. ವಿಶೇಷತೆಗಳೇನು?
ಬಹುನಿರೀಕ್ಷಿತ ಆಡಿ ಎಸ್‍ಕ್ಯೂ8 (Audi SQ8) ಎಸ್‌ಯುವಿಯು ಬಿಡುಗಡೆಗೊಂಡಿದೆ. ತುಸು ದುಬಾರಿ ದರವನ್ನು ಪಡೆದಿದ್ದು, ರೂ.1.78 ಕೋಟಿ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈಗಾಗಲೇ ಬುಕ್ಕಿಂಗ್ ಶುರುವಾಗಿದೆ. ಆಸಕ್ತ ಖರೀದಿದಾರರು ಆಡಿ ಇಂಡಿಯಾದ ವೆಬ್‌ಸೈಟ್ ಅಥವಾ ಮೇಆಡಿ ಕನೆಕ್ಟ್ ಅಪ್ಲಿಕೇಶನ್‌ಗೆ ಭೇಟಿ ನೀಡಿ, ರೂ.5 ಲಕ್ಷ ಮುಂಗಡ ಹಣ ಪಾವತಿಸಿ, ಆರ್ಡರ್ ಮಾಡಬಹುದಾಗಿದೆ. ಬನ್ನಿ, ಈ ನೂತನ ಕಾರಿನ ವಿನ್ಯಾಸ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೊಸ 'ಆಡಿ ಎಸ್‍ಕ್ಯೂ8' ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಮುಂಭಾಗದಲ್ಲಿ ಸಿಲ್ವರ್ ಇನ್ಸರ್ಟ್‌ಗಳೊಂದಿಗೆ ಸ್ಪೋರ್ಟಿ ಬಂಪರ್, ಸಿಗ್ನೇಚರ್ ಸಿಂಗಲ್ ಫ್ರೇಮ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್ಇಡಿ ಡಿಆರ್‌ಎಲ್‌ಗಳನ್ನು ಒಳಗೊಂಡಿದೆ. ಸ್ಲೋಪಿಂಗ್ ರೂಫ್‌ಲೈನ್ & ದೊಡ್ಡದಾದ 22-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಹಿಂಭಾಗ (ರೇರ್) ಅತ್ಯುತ್ತಮವಾದ ಎಲ್ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ.

ಈ ಕಾರು ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 5,004 ಎಂಎಂ ಉದ್ದ, 1,995 ಎಂಎಂ ಅಗಲ ಹಾಗೂ 1,708 ಎಂಎಂ ಎತ್ತರವಿದೆ. ಜೊತೆಗೆ 254 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,998 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಮೈಥೋಸ್ ಬ್ಲ್ಯಾಕ್, ಡೇಟೋನಾ ಗ್ರೇ, ಗ್ಲೇಸಿಯರ್ ವೈಟ್, ಆಸ್ಕರಿ ಬ್ಲೂ, ಚಿಲ್ಲಿ ರೆಡ್, ಸಖಿರ್ ಗೋಲ್ಡ್, ಸ್ಯಾಟಲೈಟ್ ಸಿಲ್ವರ್ ಮತ್ತು ವೈಟೊಮೊ ಬ್ಲೂ.ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಇದು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ & ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ ಬರೋಬ್ಬರಿ 605 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ನೂತನ 'ಆಡಿ ಎಸ್‍ಕ್ಯೂ8' ಎಸ್‌ಯುವಿಯು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 4.0-ಲೀ. ಟ್ವಿನ್-ಟರ್ಬೊ ವಿ8 ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ, 500 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 770 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 8 ರಿಂದ 9 ಕಿ.ಮೀ ವರೆಗೆ ಮೈಲೇಜ್‌ನ್ನು ನೀಡಬಹುದು ಎಂದು ಅಂದಾಜಿಸಲಾಗಿದೆ. ಬರೀ 4 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 12.3-ಇಂಚಿನ ಡಿಸ್‌ಪ್ಲೇಗಳು, ಕನೆಕ್ಟ್ಡ್ ಕಾರ್ ಟೆಕ್, ಆಂಬಿಯೆಂಟ್ ಲೈಟಿಂಗ್, ಬ್ಯಾಂಗ್ & ಒಲುಫ್ಸೆನ್ ಆಡಿಯೋ ಸೆಟಪ್, ಮಲ್ಟಿ-ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, ಫ್ಲಾಟ್-ಬಾಟಮ್ ಲೆದರ್ ಸ್ಟೀರಿಂಗ್ ವೀಲ್ ಮತ್ತು ಪ್ಯಾಡಲ್ ಶಿಫ್ಟರ್‌ಗಳಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಎಡಬ್ಲ್ಯೂಡಿ (ಆಲ್-ವೀಲ್ ಡ್ರೈವ್) ಎಂಬ ಟೆಕ್ನಾಲಜಿಯನ್ನು ಒಳಗೊಂಡಿದೆ.
ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಬಲ್ಲದು. ಸುರಕ್ಷತೆಯ ಹಿತದೃಷ್ಟಿಯಿಂದ 8-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟ್ರಾಕ್ಷನ್ ಕಂಟ್ರೋಲ್ & 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಒಟ್ಟಾರೆಯಾಗಿ 'ಆಡಿ ಎಸ್‍ಕ್ಯೂ8' ಎಸ್‌ಯುವಿ ಮಾರಾಟಕ್ಕೆ ಬಂದಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚು ಖುಷಿ ನೀಡಿದೆ. ಈ ಕಾರಿಗೆ ಹಲವು ಪ್ರತಿಸ್ಪರ್ಧಿಗಳಿವೆ. ಪೋರ್ಷೆ ಕಯೆನ್ನೆ ಕೂಪೆ, ಬಿಎಂಡಬ್ಲ್ಯೂ ಎಕ್ಸ್5, ಮರ್ಸಿಡಿಸ್ ಬೆನ್ಜ್ ಜಿಎಲ್ಇ 53 ಎಎಂಜಿ ಕೂಪೆ, ಲ್ಯಾಂಡ್ ರೋವರ್ ಡಿಫೆಂಡರ್ 110 ಹಾಗೂ ಲ್ಯಾಂಡ್ ರೋವರ್ ರೇಂಜ್ ರೋವರ್ ಸ್ಪೋರ್ಟ್ ಮಾಡೆಲ್‌ಗಳು ಪ್ರಬಲವಾದ ಎದುರಾಳಿಯಾಗಿವೆ.


Click it and Unblock the Notifications








