ನೂತನ 'ಮಹೀಂದ್ರಾ XUV 7XO' ರಗಡ್ ಎಸ್‌ಯುವಿಗೆ 3 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?

ನಿನ್ನೆ ಹೊಸ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿದೆ. ಇದು ರೂ.13.66 ಲಕ್ಷದಿಂದ ರೂ.24.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎವರೆಸ್ಟ್ ವೈಟ್, ನೆಬುಲಾ ಬ್ಲ್ಯೂ, ಡಸರ್ಟ್ ಮಿಸ್ಟ್, ಮಿಡ್‌ನೈಟ್ ಬ್ಲ್ಯಾಕ್ ಹಾಗೂ ರೂಬಿ ವೆಲ್ವೆಟ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. 4,695 ಎಂಎಂ ಉದ್ದ, 1,890 ಎಂಎಂ ಅಗಲ ಹಾಗೂ 1755 ಮಿ.ಮೀ ಎತ್ತರವಿದೆ. ಜೊತೆಗೆ 6/ 7 ಆಸನಗಳನ್ನು ಹೊಂದಿದ್ದು, ಆರಾಮದಾಯಕವಾದ ಪ್ರಯಾಣವನ್ನು ಒದಗಿಸಬಲ್ಲದು.

ಈ ಕಾರು 2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಮಲ್ಟಿ-ಕಲರ್ ಆಂಬಿಯೆಂಟ್ ಲೈಟಿಂಗ್, ಪನೋರಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ರೇರ್ ಸೀಟ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

Best 3 Alternative Cars For Mahindra XUV 7XO Suv Safari Innova Hycross And Carens Clavis

ನೀವು ಇದೇ 'ಎಕ್ಸ್‌ಯುವಿ 7ಎಕ್ಸ್ಒ' ಬದಲಾಗಿ ಈ 3 ಕಾರುಗಳಾದ ಟಾಟಾ ಸಫಾರಿ, ಟೊಯೊಟಾ ಇನ್ನೋವಾ ಹೈಕ್ರಾಸ್ ಹಾಗೂ ಕಿಯಾ ಕ್ಯಾರೆನ್ಸ್ ಕ್ಲಾವಿಸ್‌ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಾಟಾ ಸಫಾರಿ (Tata Safari):

ಇದೊಂದು ಎಸ್‌ಯುವಿಯಾಗಿದ್ದು, 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ'ಗೆ ಪರ್ಯಾಯ ಕಾರಾಗಿಯೂ ಹೊರಹೊಮ್ಮಿದೆ. ರೂ.14.66 ಲಕ್ಷದಿಂದ ರೂ.25.96 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಕಾಸ್ಮಿಕ್ ಗೋಲ್ಡ್, ಒಬೆರಾನ್ ಬ್ಲ್ಯಾಕ್, ಸ್ಟಾರ್‌ಡಸ್ಟ್ ಆಶ್ ಮತ್ತು ಸ್ಟೆಲ್ಲರ್ ಫ್ರಾಸ್ಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 4,668 ಎಂಎಂ ಉದ್ದ, 1,922 ಎಂಎಂ ಅಗಲ & 1,795 ಎಂಎಂ ಎತ್ತರವಿದೆ. 6/ 7 ಆಸನಗಳನ್ನು ಒಳಗೊಂಡಿದೆ.

ನೂತನ 'ಸಫಾರಿ' 2-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್ ಹಾಗೂ ಆಟೋಮೆಟಿಕ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 3 Alternative Cars For Mahindra XUV 7XO Suv Safari Innova Hycross And Carens Clavis

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross):

ಈ ಎಂಪಿವಿಯು 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ'ಗೆ ಅತ್ಯುತ್ತಮವಾದ ಬದಲಿ ಕಾರಾಗಿದೆ. ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸಿಲ್ವರ್ ಮೆಟಾಲಿಕ್ ಹಾಗೂ ಸೂಪರ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 4,755 ಎಂಎಂ ಉದ್ದ, 1845 ಮಿ.ಮೀ ಅಗಲ ಮತ್ತು 1795 ಮಿ.ಮೀ ಎತ್ತರವಿದೆ. 7/ 8 ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

ಹೊಸ 'ಇನ್ನೋವಾ ಹೈಕ್ರಾಸ್' 2-ಲೀಟರ್ ಪೆಟ್ರೋಲ್ ಮತ್ತು 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ನ್ನು ಹೊಂದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಆಟೋ ಎಸಿ, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 3 Alternative Cars For Mahindra XUV 7XO Suv Safari Innova Hycross And Carens Clavis

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):

ಇದು ಎಂಪಿವಿಯಾಗಿದ್ದು, 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ'ಗೆ ಪರ್ಯಾಯವಾಗಿಯೂ ಕೊಂಡುಕೊಳ್ಳಬಹುದಾಗಿದೆ. ರೂ.11.08 ಲಕ್ಷದಿಂದ ರೂ.20.71 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಒಳಗೊಂಡಿದೆ. ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ ಹಾಗೂ ಸ್ಪಾರ್ಕ್ಲಿಂಗ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 4,550 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,708 ಎಂಎಂ ಎತ್ತರವಿದೆ. 6/ 7 ಆಸನಗಳನ್ನು ಹೊಂದಿದೆ.

Best 3 Alternative Cars For Mahindra XUV 7XO Suv Safari Innova Hycross And Carens Clavis

ನೂತನ 'ಕ್ಯಾರೆನ್ಸ್ ಕ್ಲಾವಿಸ್' 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ 9-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Tuesday, January 6, 2026, 13:31 [IST]
English summary
Best 3 alternative cars for mahindra xuv 7xo suv safari innova hycross and carens clavis
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+