285 Km ಓಡುತ್ತೆ: 13.89 ಲಕ್ಷ.. ನಿನ್ನೆ ಬಿಡುಗಡೆ, ಹೊಸ 'ಮಹೀಂದ್ರಾ XUV 3XO' ಇವಿಗೆ 3 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು?

ನಿನ್ನೆಯಷ್ಟೇ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO EV) ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಕನಿಷ್ಠ ರೂ.13.89 ಲಕ್ಷ ಹಾಗೂ ಗರಿಷ್ಠ ರೂ.14.96 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ಗ್ಯಾಲಕ್ಸಿ ಗ್ರೇ, ನೆಬುಲಾ ಬ್ಲ್ಯೂ, ಸ್ಟೆಲ್ತ್ ಬ್ಲ್ಯಾಕ್ ಹಾಗೂ ಟ್ಯಾಂಗೋ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಕಾರು 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 39.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. 285 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 7-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ ಡುಯಲ್ ಜೋನ್ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 3 Alternative Cars For New Mahindra XUV 3XO EV Nexon EV Windsor EV And VF6

ನೀವು ಇದೇ 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇವಿ'ಗೆ ಬದಲಾಗಿ ಈ 3 ಎಲೆಕ್ಟ್ರಿಕ್ ಎಸ್‌ಯುವಿಗಳಾದ ಟಾಟಾ ನೆಕ್ಸಾನ್ ಇವಿ, ಎಂಜಿ ವಿಂಡ್ಸರ್ ಇವಿ ಹಾಗೂ ವಿನ್‌ಫಾಸ್ಟ್ ವಿಎಫ್6ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಾಟಾ ನೆಕ್ಸಾನ್ ಇವಿ (Tata Nexon EV):

ಇದು ಪ್ರಮುಖ ಇವಿಯಾಗಿದೆ. 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇವಿ'ಗೆ ಪರ್ಯಾಯ ಕಾರಾಗಿಯೂ ಹೊರಹೊಮ್ಮಿದೆ. ಅದಕ್ಕೆ ತಕ್ಕಂತೆ ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಫ್ಲೇಮ್ ರೆಡ್, ಎಂಪವರ್ಡ್ ಆಕ್ಸೈಡ್, ಕ್ರಿಯೇಟಿವ್ ಓಷನ್ ಮತ್ತು ಎಂಪವರ್ಡ್ ಡಾರ್ಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,498 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Best 3 Alternative Cars For New Mahindra XUV 3XO EV Nexon EV Windsor EV And VF6

ಹೊಸ 'ನೆಕ್ಸಾನ್' ಎಲೆಕ್ಟ್ರಿಕ್ ಕಾರು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 30 ಮತ್ತು 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 275 ರಿಂದ 489 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 9 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಎಂಜಿ ವಿಂಡ್ಸರ್ ಇವಿ (MG Windsor EV):

ಈ ಎಲೆಕ್ಟ್ರಿಕ್ ಎಸ್‌ಯುವಿಯು 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇವಿ'ಗೆ ಬದಲಿ ಆಯ್ಕೆಯಾಗಲಿದೆ. ರೂ.12.65 ಲಕ್ಷದಿಂದ ರೂ.18.39 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ವೈಟ್, ಸ್ಟಾರ್‌ಬರ್ಸ್ಟ್ ಬ್ಲ್ಯಾಕ್, ಟರ್ಕೋಯಿಸ್ ಗ್ರೀನ್, ಅರೋರಾ ಸಿಲ್ವರ್, ಗ್ಲೇಜ್ ರೆಡ್ ಹಾಗೂ ಸೆಲಾಡಾನ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 186 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Best 3 Alternative Cars For New Mahindra XUV 3XO EV Nexon EV Windsor EV And VF6

ನೂತನ 'ವಿಂಡ್ಸರ್ ಇವಿ' 5 ಆಸನಗಳನ್ನು ಒಳಗೊಂಡಿದೆ. 38 ರಿಂದ 52.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. 332 ರಿಂದ 449 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ವಿನ್‌ಫಾಸ್ಟ್ ವಿಎಫ್6 (VinFast VF6):

ಇದನ್ನು ಕೂಡ 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇವಿ'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು.ರೂ.16.49 ಲಕ್ಷದಿಂದ ರೂ.18.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಕ್ರಿಮ್ಸನ್ ರೆಡ್, ಜೆನಿತ್ ಗ್ರೇ, ಅರ್ಬನ್ ಮಿಂಟ್, ಜೆಟ್ ಬ್ಲ್ಯಾಕ್ ಮತ್ತು ಡೆಸ್ಯಾಟ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,730 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Best 3 Alternative Cars For New Mahindra XUV 3XO EV Nexon EV Windsor EV And VF6

ಹೊಸ 'ವಿಎಫ್6' ಕಾರು 5 ಆಸನಗಳನ್ನು ಪಡೆದಿದೆ. 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. 470 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 8-ಸ್ಪೀಕರ್ ಸೌಂಡ್ ಸಿಸ್ಟಮ್ ಮತ್ತು ಪನೋರಮಿಕ್ ಸನ್‌ರೂಫ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Wednesday, January 7, 2026, 11:10 [IST]
English summary
Best 3 alternative cars for new mahindra xuv 3xo ev nexon ev windsor ev and vf6
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+