Tata: 468 ಕಿ.ಮೀ ಓಡುತ್ತೆ.. ಹೊಸ ಟಾಟಾ SUVಗೆ 3 ಪರ್ಯಾಯ ಕಾರುಗಳಿವು, ಬೆಲೆ ಎಷ್ಟು.. ವಿಶೇಷತೆಗಳೇನು?
ಇತ್ತೀಚೆಗೆ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಇದು ಕನಿಷ್ಠ ರೂ.9.69 ಲಕ್ಷ ಹಾಗೂ ಗರಿಷ್ಠ ರೂ.12.59 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಬೆಂಗಾಲ್ ರೂಜ್, ಕ್ಯಾರಮೆಲ್, ಫಿಯರ್‌ಲೆಸ್ ಯೆಲ್ಲೋ, ಎಂಪವರ್ಡ್ ಆಕ್ಸೈಡ್, ಪ್ರಿಸ್ಟೈನ್ ವೈಟ್ ಮತ್ತು ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 195 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ಈ ಕಾರು 30 ಮತ್ತು 40 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 365 ರಿಂದ 468 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 2-ಸ್ಪೋಕ್ ಸ್ಟೀರಿಂಗ್ ವೀಲ್ ಮತ್ತು ಸಿಂಗಲ್-ಪೇನ್ ಸನ್‌ರೂಫ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ನೀವು ಇದೇ 'ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್'ಗೆ ಬದಲಾಗಿ ಈ 3 ಕಾರುಗಳಾದ ಎಂಜಿ ವಿಂಡ್ಸರ್ ಇವಿ, ಸಿಟ್ರನ್ ಇಸಿ3 ಹಾಗೂ ವಿನ್‌ಫಾಸ್ಟ್ ವಿಎಫ್6ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಎಂಜಿ ವಿಂಡ್ಸರ್ ಇವಿ (MG Windsor EV):
ಇದೊಂದು ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.14 ಲಕ್ಷದಿಂದ ರೂ.18.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಸ್ಟಾರಿ ಬ್ಲ್ಯಾಕ್, ಟರ್ಕೋಯಿಸ್ ಗ್ರೀನ್, ಅರೋರಾ ಸಿಲ್ವರ್, ಸೆಲಾಡಾನ್ ಬ್ಲೂ ಮತ್ತು ಗ್ಲೇಜ್ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 195 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,445 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ವಿಂಡ್ಸರ್ ಇವಿ'ಯು 38 ಹಾಗೂ 52.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 331 ರಿಂದ 449 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಕೀಲೆಸ್ ಎಂಟ್ರಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಸಿಟ್ರನ್ ಇಸಿ3 (Citroen eC3):
ಈ ಕಾರು ಪ್ರಮುಖ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದೆ. ರೂ.12.90 ಲಕ್ಷದಿಂದ ರೂ.13.41 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಪೋಲಾರ್ ವೈಟ್, ಝೆಸ್ಟಿ ಆರೆಂಜ್, ಪ್ಲಾಟಿನಂ ಗ್ರೇ, ಸ್ಟೀಲ್ ಗ್ರೇ ಮತ್ತು ಕಾಸ್ಮೊ ಬ್ಲೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,540 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ 'ಸಿಟ್ರನ್ ಇಸಿ3' ಕಾರು 29.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 320 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈಮೆಂಟ್ ಸಿಸ್ಟಮ್, ಆಟೋ ಕ್ಲೇಮೇಟ್ ಕಂಟ್ರೋಲ್, 4-ಸ್ಪೀಕರ್ ಸೌಂಡ್ ಸಿಸ್ಟಮ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.
ವಿನ್‌ಫಾಸ್ಟ್ ವಿಎಫ್6 (VinFast VF6):
ಇದು ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.16.49 ಲಕ್ಷದಿಂದ ರೂ.18.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಕ್ರಿಮ್ಸನ್ ರೆಡ್, ಜೆನಿತ್ ಗ್ರೇ, ಅರ್ಬನ್ ಮಿಂಟ್, ಜೆಟ್ ಬ್ಲ್ಯಾಕ್ ಹಾಗೂ ಡೆಸ್ಯಾಟ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,730 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ವಿಎಫ್6' ಕಾರು 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 470 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 8-ಸ್ಪೀಕರ್ ಸೌಂಡ್ ಸಿಸ್ಟಮ್ ಮತ್ತು ಪನೋರಮಿಕ್ ಸನ್‌ರೂಫ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








