TATA: 5.59 ಲಕ್ಷ ರೂಪಾಯಿಗೆ ಸಿಗುತ್ತೆ! ಹೊಸ 'ಟಾಟಾ ಪಂಚ್'ಗೆ 3 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು, ಹೇಗಿವೆ?

ಇಂದು ಹೊಸ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಮೈಕ್ರೋ ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿದೆ. ಇದು ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗುವ ವಿನ್ಯಾಸವನ್ನು ಒಳಗೊಂಡಿದೆ. ಸೆಂಟಿಫಿಕ್ ಬ್ಲ್ಯೂ, ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಬೆಂಗಾಲ್ ರೂಜ್ (ರೆಡ್), ಕ್ಯಾರಮೆಲ್, ಡೇಟೋನಾ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 193 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,445 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಟಾಟಾ ಪಂಚ್' 5 ಆಸನಗಳನ್ನು ಪಡೆದಿದೆ. 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 3 Alternative Cars For Tata Punch Facelift Suv Hyundai Exter Nissan Magnite And Maruti Fronx

ನೀವು ಇದೇ 'ಟಾಟಾ ಪಂಚ್ ಫೇಸ್‌ಲಿಫ್ಟ್'ಗೆ ಬದಲಾಗಿ ಈ 3 ಎಸ್‌ಯುವಿಗಳಾದ ಹ್ಯುಂಡೈ ಎಕ್ಸ್‌ಟರ್, ನಿಸ್ಸಾನ್ ಮ್ಯಾಗ್ನೈಟ್ ಹಾಗೂ ಮಾರುತಿ ಸುಜುಕಿ ಫ್ರಾಂಕ್ಸ್ ಮಾಡೆಲ್‌ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಹ್ಯುಂಡೈ ಎಕ್ಸ್‌ಟರ್‌ (Hyundai Exter):

ಇದೊಂದು ಪ್ರಮುಖ ಮೈಕ್ರೋ ಎಸ್‌ಯುವಿಯಾಗಿದೆ. 'ಟಾಟಾ ಪಂಚ್ ಫೇಸ್‌ಲಿಫ್ಟ್'ಗೆ ಪರ್ಯಾಯ ಕಾರಾಗಿದೆ. ರೂ.5.74 ಲಕ್ಷದಿಂದ ರೂ.9.61 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಅಟ್ಲಾಸ್ ವೈಟ್, ಫೈರಿ ರೆಡ್, ರೇಂಜರ್ ಖಾಕಿ, ಸ್ಟಾರಿ ನೈಟ್ ಹಾಗೂ ಟೈಟಾನ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,450 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Best 3 Alternative Cars For Tata Punch Facelift Suv Hyundai Exter Nissan Magnite And Maruti Fronx

ಹೊಸ 'ಎಕ್ಸ್‌ಟರ್‌' 5 ಆಸನ ಆಯ್ಕೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ ರೇರ್-ಎಸಿ ವೆಂಟ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite):

ಈ ಕಾರನ್ನು 'ಟಾಟಾ ಪಂಚ್ ಫೇಸ್‌ಲಿಫ್ಟ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ರೂ.5.62 ಲಕ್ಷದಿಂದ ರೂ.10.76 ಲಕ್ಷ (ಎಕ್ಸ್-ಶೋರೂಂ) ದರವನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಓನಿಕ್ಸ್ ಬ್ಲ್ಯಾಕ್, ಸ್ಟಾರ್ಮ್ ವೈಟ್, ಪರ್ಲ್ ವೈಟ್, ಬ್ಲೇಡ್ ಸಿಲ್ವರ್, ಗ್ರೇ ಮೆಟಾಲಿಕ್, ಫ್ಲೇರ್ ಗಾರ್ನೆಟ್ ರೆಡ್, ಸನ್‌ರೈಸ್ ಕಾಪರ್ ಆರೆಂಜ್ ಮತ್ತು ವಿವಿಡ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 205 ಮಿ.ಮೀ ಗ್ರೌಂಡ್ ಕಿಯರೆನ್ಸ್ ಮತ್ತು 2,500 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Best 3 Alternative Cars For Tata Punch Facelift Suv Hyundai Exter Nissan Magnite And Maruti Fronx

ನೂತನ 'ಮ್ಯಾಗ್ನೈಟ್' 5 ಆಸನಗಳನ್ನು ಹೊಂದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 19.9 ಕಿಲೋಮೀಟರ್‌ವರೆಗೆ ಮೈಲೇಜ್‌ನ್ನು ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ರೇರ್-ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx):

ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದೆ. 'ಟಾಟಾ ಪಂಚ್ ಫೇಸ್‌ಲಿಫ್ಟ್'ಗೆ ಪರ್ಯಾಯ ಕಾರಾಗಿದೆ. ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ ಮತ್ತು ಅರ್ಥನ್ ಬ್ರೌನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2520 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Best 3 Alternative Cars For Tata Punch Facelift Suv Hyundai Exter Nissan Magnite And Maruti Fronx

ಹೊಸ 'ಫ್ರಾಂಕ್ಸ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20 ರಿಂದ 28.51 ಕಿಲೋಮೀಟರ್‌ವರೆಗೆ ಮೈಲೇಜ್‌ನ್ನು ಕೊಡುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ ಹಾಗೂ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Tuesday, January 13, 2026, 22:48 [IST]
English summary
Best 3 alternative cars for tata punch facelift suv hyundai exter nissan magnite and maruti fronx
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+