Kia: 10.99 ಲಕ್ಷ ರೂಪಾಯಿ.. 2026ರ ಹೊಸ ಕಿಯಾ SUVಗೆ 5 ಬದಲಿ ಕಾರಗಳಿವು.. ಬೆಲೆ ಎಷ್ಟು, ಹೇಗಿವೆ?
ಇತ್ತೀಚೆಗೆ ಹೊಸ ತಲೆಮಾರಿನ ಕಿಯಾ ಸೆಲ್ಟೋಸ್ (New Gen Kia Seltos) ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಯಿತು. ಇದು ರೂ.10,99 ಲಕ್ಷದಿಂದ ರೂ.19,99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಮಾರ್ನಿಂಗ್ ಹೇಸ್, ಮ್ಯಾಗ್ಮಾ ರೆಡ್, ಫ್ರಾಸ್ಟ್ ಬ್ಲೂ, ಐವರಿ ಸಿಲ್ವರ್ ಗ್ಲೋಸ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ ಹಾಗೂ ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,690 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಕಾರು 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್ ಸೆಟಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ನೀವು ಇದೇ 'ಕಿಯಾ ಸೆಲ್ಟೋಸ್'ಗೆ ಪರ್ಯಾಯವಾಗಿ ಈ 5 ಎಸ್‌ಯುವಿಗಳಾದ ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ವಿಕ್ಟೋರಿಸ್, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಟಾಟಾ ಸಿಯೆರಾ ಹಾಗೂ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಹ್ಯುಂಡೈ ಕ್ರೆಟಾ (Hyundai Creta):
ಇದು ಜನಮೆಚ್ಚಿದ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದ್ದು, 'ಕಿಯಾ ಸೆಲ್ಟೋಸ್'ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ರೂ.10.73 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ & 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 21 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಡುಯಲ್ ಡಿಸ್‌ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಇನ್ಸ್ಟ್ರುಮೆಂಟ್ ಕ್ಲಸ್ಟರ್) ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):
ಈ ಕಾರನ್ನು 'ಕಿಯಾ ಸೆಲ್ಟೋಸ್'ಗೆ ಬದಲಾಗಿ ಕೊಂಡುಕೊಳ್ಳಬಹುದಾಗಿದೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 21 ರಿಂದ 29 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder):
ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, 'ಕಿಯಾ ಸೆಲ್ಟೋಸ್'ಗೆ ಪರ್ಯಾಯ ಕಾರಾಗಿದೆ. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) & 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 19 ರಿಂದ 28 ಕಿಲೋಮೀಟರ್‌ವರೆಗೆ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟಾಟಾ ಸಿಯೆರಾ (Tata Sierra):
ಈ ಕಾರನ್ನು 'ಕಿಯಾ ಸೆಲ್ಟೋಸ್'ಗೆ ಬದಲಾಗಿ ಮನೆಗೆ ತರಬಹುದು ರೂ.11.49 ಲಕ್ಷದಿಂದ ರೂ.18.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ & 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್‌ಪ್ಲೇ) ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara):
ಇದು ನಂಬಿಕಾರ್ಹ ಎಸ್‌ಯುವಿಯಾಗಿದ್ದು, 'ಕಿಯಾ ಸೆಲ್ಟೋಸ್'ಗೆ ಪರ್ಯಾಯವಾಗಲಿದೆ. ರೂ.10.77 ಲಕ್ಷದಿಂದ ರೂ.19.72 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ಮೈಲ್ಡ್-ಹೈಬ್ರಿಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್-ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀ.ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 21 ರಿಂದ 27.97 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








