Maruti: 543 ಕಿ.ಮೀ ರೇಂಜ್.. ಹೊಸ ಮಾರುತಿ Suvಗೆ 5 ಪರ್ಯಾಯ ಕಾರುಗಳಿವು, ಬೆಲೆ ಎಷ್ಟು.. ವಿಶೇಷತೆಗಳೇನು?
ಈಚೆಗೆ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗೊಂಡಿತ್ತು. ಇದು ರೂ.15.99 ಲಕ್ಷದಿಂದ ರೂ.20.01 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಗ್ರ್ಯಾಂಡಿಯರ್ ಗ್ರೇ, ನೆಕ್ಸಾ ಬ್ಲ್ಯೂ, ಆಪುಲೆಂಟ್ ರೆಡ್ ಮತ್ತು ಬ್ಲ್ಯೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ನೂತನ 'ಇ-ವಿಟಾರಾ' 5 ಆಸನಗಳನ್ನು ಪಡೆದಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 440 ರಿಂದ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫಿಕ್ಸೆಡ್ ಗ್ಲಾಸ್ ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) & 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ನೀವು ಇದೇ 'ಮಾರುತಿ ಸುಜುಕಿ ಇ-ವಿಟಾರಾ'ಗೆ ಬದಲಾಗಿ ಈ 5 ಎಲೆಕ್ಟ್ರಿಕ್ ಎಸ್‌ಯುವಿಗಳಾದ ಟಾಟಾ ಕರ್ವ್ ಇವಿ, ಮಹೀಂದ್ರಾ ಬಿಇ 6, ಎಂಜಿ ವಿಂಡ್ಸರ್ ಇವಿ, ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಹಾಗೂ ಟಾಟಾ ನೆಕ್ಸಾನ್ ಇವಿಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಟಾಟಾ ಕರ್ವ್ ಇವಿ (Tata Curvv EV):
ಇದು ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.17.49 ಲಕ್ಷದಿಂದ ರೂ.22.24 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 55 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 502 ರಿಂದ 585 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಹೀಂದ್ರಾ ಬಿಇ 6 (Mahindra BE 6):
ಈ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.18.90 ಲಕ್ಷದಿಂದ ರೂ.27.65 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 556 ರಿಂದ 682 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 12.3-ಇಂಚಿನ ಡುಯಲ್ ಸ್ಕ್ರೀನ್ ಮತ್ತು 7-ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಎಂಜಿ ವಿಂಡ್ಸರ್ ಇವಿ (MG Windsor EV):
ಇದೊಂದು ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ರೂ.14 ಲಕ್ಷದಿಂದ ರೂ.18.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 38 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 52.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 331 ರಿಂದ 449 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric):
ಈ ಎಲೆಕ್ಟ್ರಿಕ್ ಎಸ್‌ಯುವಿಯು ರೂ.18.02 ಲಕ್ಷದಿಂದ ರೂ.24.70 ಲಕ್ಷ ಬೆಲೆಯನ್ನು ಒಳಗೊಂಡಿದೆ. 42 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. 10.25-ಇಂಚಿನ ಡುಯಲ್ ಸ್ಕ್ರೀನ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟಾಟಾ ನೆಕ್ಸಾನ್ ಇವಿ (Tata Nexon EV):
ಇದು ಪ್ರಖ್ಯಾತ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 275 ರಿಂದ 489 ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications








