ಅಗ್ಗದ ಬೆಲೆಗೆ ನಿಸ್ಸಾನ್ ಗ್ರಾವೈಟ್ ಎಂಪಿವಿ ಬಿಡುಗಡೆ.. ರೂ.5.65 ಲಕ್ಷ, 7-ಸೀಟರ್.. 5 ಜನಪ್ರಿಯ ಪರ್ಯಾಯ ಕಾರುಗಳಿವು!

ಹೊಚ್ಚ ಹೊಸ ನಿಸ್ಸಾನ್ ಗ್ರಾವೈಟ್ (Nissan Gravite) ಎಂಪಿವಿ ಮಂಗಳವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದು ಕನಿಷ್ಠ ರೂ.5.65 ಲಕ್ಷ ಹಾಗೂ ಗರಿಷ್ಠ ರೂ.8.93 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಫಾರೆಸ್ಟ್ ಗ್ರೀನ್, ಓನಿಕ್ಸ್ ಬ್ಯ್ಲಾಕ್, ಮೆಟಾಲಿಕ್ ಗ್ರೇ, ಬ್ಲೇಡ್ ಸಿಲ್ವರ್ ಹಾಗೂ ಸ್ಟಾರ್ಮ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

ನೂತನ 'ಗ್ರಾವೈಟ್' 1-ಲೀ. 3-ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 19.6 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಮ್ಯಾನುವಲ್ ಎಸಿ, ಪುಶ್ ಬಟನ್ ಸ್ಟಾರ್ಟ್‌, ಕ್ರೂಸ್ ಕಂಟ್ರೋಲ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Alternative Cars For Nissan Gravite Mpv Triber Ertiga Rumion Bolero And XL6

ನೀವು ಇದೇ 'ನಿಸ್ಸಾನ್ ಗ್ರಾವೈಟ್'ಗೆ ಬದಲಾಗಿ ಈ 5 ಜನಪ್ರಿಯ ಕಾರುಗಳಾದ ರೆನಾಲ್ಟ್ ಟ್ರೈಬರ್, ಮಾರುತಿ ಸುಜುಕಿ ಎರ್ಟಿಗಾ, ಟೊಯೊಟಾ ರೂಮಿಯಾನ್, ಮಹೀಂದ್ರಾ ಬೊಲೆರೊ ಹಾಗೂ ಮಾರುತಿ ಸುಜುಕಿ ಎಕ್ಸ್ಎಲ್6ಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ರೆನಾಲ್ಟ್ ಟ್ರೈಬರ್ (Renault Triber):

ಇದೊಂದು ಪ್ರಮುಖ ಎಂಪಿವಿಯಾಗಿದೆ. ರೂ.5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 20 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 7-ಆಸನಗಳನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಮ್ಯಾನುವಲ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 5 Alternative Cars For Nissan Gravite Mpv Triber Ertiga Rumion Bolero And XL6

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga):

ಈ ಎಂಪಿವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.8.80 ಲಕ್ಷದಿಂದ ರೂ.12.94 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1.5-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.3 ರಿಂದ 26.11 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಕ್ರೂಸ್ ಕಂಟ್ರೋಲ್ ಹಾಗೂ ಆಟೋ ಎಸಿ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಟೊಯೊಟಾ ರೂಮಿಯನ್ (Toyota Rumion):

ಇದು ಜನಪ್ರಿಯ ಎಂಪಿವಿಯಾಗಿ ಹೊರಹೊಮ್ಮಿದೆ. ರೂ.10.51 ಲಕ್ಷದಿಂದ ರೂ.13.86 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.5-ಲೀ. ಪೆಟ್ರೋಲ್ ಮತ್ತು 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20 ರಿಂದ 26 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 7 ಆಸನಗಳನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಪುಶ್ ಬಟನ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಕೀಲೆಸ್ ಎಂಟ್ರಿ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 5 Alternative Cars For Nissan Gravite Mpv Triber Ertiga Rumion Bolero And XL6

ಮಹೀಂದ್ರಾ ಬೊಲೆರೊ (Mahindra Bolero):

ಈ ಎಸ್‌ಯುವಿಯು ರೂ.7.99 ಲಕ್ಷದಿಂದ ರೂ.9.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 14 ರಿಂದ 16 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಮ್ಯಾನುಯಲ್ ಎಸಿ ಮತ್ತು ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 5 Alternative Cars For Nissan Gravite Mpv Triber Ertiga Rumion Bolero And XL6

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6):

ಇದೊಂದು ಪ್ರಖ್ಯಾತ ಎಂಪಿವಿಯಾಗಿದೆ. ರೂ.11.52 ಲಕ್ಷದಿಂದ ರೂ.14.48 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5-ಲೀ. ಪೆಟ್ರೋಲ್ ಮತ್ತು 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20.97 ರಿಂದ 26.32 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 7 ಆಸನಗಳನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Wednesday, February 18, 2026, 13:30 [IST]
English summary
Best 5 alternative cars for nissan gravite mpv triber ertiga rumion bolero and xl6
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+