Duster: ನಿನ್ನೆ ಬಿಡುಗಡೆ.. 10.49 ಲಕ್ಷ ರೂ.. ಹೊಸ ರೆನಾಲ್ಟ್ ಡಸ್ಟರ್‌ಗೆ 5 ಪರ್ಯಾಯ ಎಸ್‌ಯುವಿಗಳಿವು.. ಬೆಲೆ ಎಷ್ಟು?

ನಿನ್ನೆಯಷ್ಟೇ ಹೊಸ ರೆನಾಲ್ಟ್ ಡಸ್ಟರ್ (Renault Duster) ಎಸ್‌ಯುವಿ ಬಿಡುಗಡೆಗೊಂಡಿದೆ. ರೂ.10.49 ಲಕ್ಷದಿಂದ ರೂ.18.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಜೇಡ್ ಮೌಂಟೇನ್ ಗ್ರೀನ್, ಪರ್ಲ್ ವೈಟ್, ಮೂನ್‌ಲೈಟ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್, ರಿವರ್ ಬ್ಲೂ & ಸನ್‌ಸೆಟ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಹೆಚ್ಚು ವಿಶಾಲವಾಗಿದ್ದು, 212 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,657 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಕಾರು 1.8-ಲೀಟರ್ ಸ್ಟ್ರಾಂಗ್ ಹೈಬ್ರಿಡ್, 1.3-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.0-ಲೀಟರ್ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 15 ರಿಂದ 24 ಕಿ.ಮೀ ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. 5 ಆಸನಗಳನ್ನು ಒಳಗೊಂಡಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ & ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Best 5 Alternative Suvs For Renault Duster Sierra Creta Grand Vitara Hyryder And Seltos

ನೀವು ಇದೇ 'ರೆನಾಲ್ಟ್ ಡಸ್ಟರ್'ಗೆ ಬದಲಾಗಿ ಈ 5 ಎಸ್‌ಯುವಿಗಳಾದ ಟಾಟಾ ಸಿಯೆರಾ, ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಹಾಗೂ ಕಿಯಾ ಸೆಲ್ಟೋಸ್ ಮಾಡೆಲ್‌ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಾಟಾ ಸಿಯೆರಾ (Tata Sierra):

ಇದೊಂದು ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ರೂ.11.49 ಲಕ್ಷದಿಂದ ರೂ.18.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ & 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 16.8 ರಿಂದ 20.5 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ & 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 5 Alternative Suvs For Renault Duster Sierra Creta Grand Vitara Hyryder And Seltos

ಹ್ಯುಂಡೈ ಕ್ರೆಟಾ (Hyundai Creta):

ಈ ಎಸ್‌ಯುವಿಯನ್ನು ಗ್ರಾಹಕರು ಮೆಚ್ಚಿದ್ದಾರೆ. ರೂ.10.79 ಲಕ್ಷದಿಂದ ರೂ.20.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 17 ರಿಂದ 21 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 10.25-ಇಂಚಿನ ಡುಯಲ್ ಸ್ಕ್ರೀನ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara):

ಇದು ಪ್ರಖ್ಯಾತ ಎಸ್‌ಯುವಿಯಾಗಿ ಎಂದೇ ಹೆಸರುವಾಸಿಯಾಗಿದೆ. ರೂ.10.77 ಲಕ್ಷದಿಂದ ರೂ.19.72 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 21.11 ರಿಂದ 27.97 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 5 Alternative Suvs For Renault Duster Sierra Creta Grand Vitara Hyryder And Seltos

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder):

ಈ ಎಸ್‌ಯುವಿಯನ್ನು ಜನ ಮೆಚ್ಚಿದ್ದಾರೆ. ರೂ.10.99 ಲಕ್ಷದಿಂದ ರೂ.20.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ & 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 28 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

Best 5 Alternative Suvs For Renault Duster Sierra Creta Grand Vitara Hyryder And Seltos

ಕಿಯಾ ಸೆಲ್ಟೋಸ್ (Kia Seltos):

ಇದೊಂದು ವಿಶ್ವಾಸಾರ್ಹ ಎಸ್‌ಯುವಿಯಾಗಿಯಾಗಿದೆ. ರೂ.10,99 ಲಕ್ಷದಿಂದ ರೂ.19,99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 20.7 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 12.3-ಇಂಚಿನ ಡುಯಲ್ ಸ್ಕ್ರೀನ್‌ & 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Wednesday, March 18, 2026, 8:51 [IST]
English summary
Best 5 alternative suvs for renault duster sierra creta grand vitara hyryder and seltos
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+