ಆಫೀಸ್‌ಗೆ ಹೋಗುವವರಿಗಾಗಿ 5 ಬೆಸ್ಟ್ ಕಾರುಗಳಿವು.. ಡಾಕ್ಟರ್ & ಎಂಜಿನಿಯರ್‌ಗಳಿಗೂ ಇಷ್ಟ.. ಸಾಟಿಯಿಲ್ಲದ ಮೈಲೇಜ್!

ಬೆಂಗಳೂರು, ನವದೆಹಲಿ ಹಾಗೂ ಮುಂಬೈನಂತಹ ಮಹಾನಗರಗಳಲ್ಲಿ ಪ್ರತಿನಿತ್ಯ ಆಫೀಸ್‌ಗೆ ತೆರಳುವವರಿಗೆ ಕಾರುಗಳು ತೀರಾ ಅನಿವಾರ್ಯವಾಗಿವೆ. ಇವು, ಚಳಿ, ಮಳೆ ಹಾಗೂ ಬಿಸಿಲಿನಿಂದ ರಕ್ಷಣೆ ಒದಗಿಸಬಲ್ಲವು. ನೀವು ದಿನನಿತ್ಯದ ಬಳಕೆಗಾಗಿ ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ವ್ಯಾಗನ್ಆರ್, ಟಾಟಾ ಪಂಚ್, ಮಾರುತಿ ಸುಜುಕಿ ಸೆಲೆರಿಯೊ, ಮಾರುತಿ ಸುಜುಕಿ ಸ್ವಿಫ್ಟ್ ಹಾಗೂ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಮಾಡೆಲ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಈ ಕಾರುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR):

ಇದೊಂದು ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ನೋಡಲು ಎಸ್‌ಯುವಿಯಂತೆ ಇದ್ದು, ಎಲ್ಲ ವರ್ಗದ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ ಹಾಗೂ ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

Best 5 Cars For Office Going Employees WagonR Punch Celerio Swift And Grand i10 Nios

ಹೊಸ 'ವ್ಯಾಗನ್ಆರ್' 1.2-ಲೀಟರ್ ಪೆಟ್ರೋಲ್, 1.0-ಲೀಟರ್ ಪೆಟ್ರೋಲ್ ಹಾಗೂ 1.0-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 23 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್‌ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್, ಸ್ಟೀರಿಂಗ್ ಮೌಂಟೆಡ್ ಕಂಟೋಲ್ & ಕೀಲೆಸ್ ಎಂಟ್ರಿಯಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಹಿಲ್-ಡಿಸೆಂಟ್ ಕಂಟ್ರೋಲ್ ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.

ಟಾಟಾ ಪಂಚ್ (Tata Punch):

ಈ ಮೈಕೋ ಎಸ್‌ಯುವಿಯು ನಗರ ಸಂಚಾರಕ್ಕೆ ಹೇಳಿ ಮಾಡಿಸಿದ ರೀತಿಯಲ್ಲಿದೆ. ಅದಕ್ಕೆ ತಕ್ಕಂತೆ ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಸೆಂಟಿಫಿಕ್ ಬ್ಲ್ಯೂ, ಸಿಲ್ವರ್, ರೆಡ್, ಕ್ಯಾರಮೆಲ್, ಡೇಟೋನಾ ಗ್ರೇ & ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು.

Best 5 Cars For Office Going Employees WagonR Punch Celerio Swift And Grand i10 Nios

ನೂತನ 'ಪಂಚ್' ಕಾರು 1.2-ಲೀಟರ್ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ ರೇರ್-ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio):

ಇದು ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ರೂ.4.70 ಲಕ್ಷದಿಂದ ರೂ.6.73 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.0-ಲೀಟರ್ ಪೆಟ್ರೋಲ್ ಮತ್ತು 1.0-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

Best 5 Cars For Office Going Employees WagonR Punch Celerio Swift And Grand i10 Nios

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift)

ಈ ಹ್ಯಾಚ್‌ಬ್ಯಾಕ್‌ನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24.8 ರಿಂದ 32.85 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 5 Cars For Office Going Employees WagonR Punch Celerio Swift And Grand i10 Nios

ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios):

ಇದೊಂದು ನಂಬಿಕಾರ್ಹ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ರೂ.5.55 ಲಕ್ಷದಿಂದ ರೂ.7.92 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 16 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 8-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Tuesday, February 24, 2026, 18:00 [IST]
English summary
Best 5 cars for office going employees wagonr punch celerio swift and grand i10 nios
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+