ಇವೇ 5 ಬೆಸ್ಟ್ ಎಂಪಿವಿಗಳು.. 8-ಸೀಟರ್, ದೊಡ್ಡ ಕುಟಂಬಕ್ಕೆ ಪರ್ಫೆಕ್ಟ್.. ಬೆಲೆ ಎಷ್ಟು, ಏನೆಲ್ಲ ವಿಶೇಷತೆಗಳಿವೆ?

ಹೊಸ ಕಾರು ಖರೀದಿಸುವವರು ಬೃಹದಾಕಾರದ ಎಂಪಿವಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಆದರೆ, ಯಾವ ಮಾಡೆಲ್‌ನ್ನು ತೆಗೆದುಕೊಂಡರೆ, ತಮ್ಮ ದೊಡ್ಡ ಕುಟುಂಬಕ್ಕೆ ಪರ್ಫೆಕ್ಟ್ ಆಯ್ಕೆಯಾಗಲಿದೆ ಎಂಬ ಗೊಂದಲದಲ್ಲಿರುತ್ತಾರೆ. ನೀವು ಹೊಚ್ಚ ಹೊಸ ಎಂಪಿವಿಯೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಇನ್ವಿಕ್ಟೋ, ಟೊಯೊಟಾ ಇನ್ನೋವಾ ಹೈಕ್ರಾಸ್, ಮಾರುತಿ ಸುಜುಕಿ ಎರ್ಟಿಗಾ, ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಹಾಗೂ ಮಾರುತಿ ಸುಜುಕಿ ಎಕ್ಸ್ಎಲ್6ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto):

ಇದೊಂದು ಪ್ರಮುಖ ಎಂಪಿವಿಯಾಗಿದೆ. ರೂ.24.97 ಲಕ್ಷದಿಂದ ರೂ.28.61 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಮಿಸ್ಟಿಕ್ ವೈಟ್, ಮ್ಯಾಗ್ನಿಫಿಸೆಂಟ್ ಬ್ಲ್ಯಾಕ್, ಮೆಜೆಸ್ಟಿಕ್ ಸಿಲ್ವರ್, ಸ್ಟೆಲ್ಲಾರ್ ಬ್ರೊನ್ ಹಾಗೂ ನೆಕ್ಸಾ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,850 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

Best 5 Mpvs In India Invicto Innova Hycross Ertiga Carens Clavis And XL6

ನೂತನ 'ಇನ್ವಿಕ್ಟೋ' 7 ಅಥವಾ 8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. 2-ಲೀ. ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದೆ. 23 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross):

ಈ ಕಾರು ಜನಪ್ರಿಯ ಎಂಪಿವಿಯಾಗಿದೆ. ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಪ್ಲಾಟಿನಂ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸಿಲ್ವರ್ ಮೆಟಾಲಿಕ್ ಹಾಗೂ ಸೂಪರ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2850 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Best 5 Mpvs In India Invicto Innova Hycross Ertiga Carens Clavis And XL6

ಹೊಸ 'ಇನ್ನೋವಾ ಹೈಕ್ರಾಸ್' 7/ 8 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. 2-ಲೀ. ಪೆಟ್ರೋಲ್ ಮತ್ತು 2-ಲೀ. ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. 23 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga):

ಇದು ವಿಶ್ವಾಸಾರ್ಹ ಎಂಪಿವಿಯಾಗಿದೆ. ರೂ.8.80 ಲಕ್ಷದಿಂದ ರೂ.12.94 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಪೆಟ್ರೋಲ್ ಹಾಗೂ 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20 ರಿಂದ 26 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

Best 5 Mpvs In India Invicto Innova Hycross Ertiga Carens Clavis And XL6

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):

ಈ ಎಂಪಿವಿಯು ರೂ.11.08 ಲಕ್ಷದಿಂದ ರೂ.20.71 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀ. ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 15 ರಿಂದ 19 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 6/ 7 ಆಸನಗಳನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ ಮತ್ತು 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 5 Mpvs In India Invicto Innova Hycross Ertiga Carens Clavis And XL6

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6):

ಇದೊಂದು ಎಂಪಿವಿಯಾಗಿದೆ. ರೂ.11.52 ಲಕ್ಷದಿಂದ ರೂ.14.48 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20 ರಿಂದ 26 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 6 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 7-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Wednesday, January 14, 2026, 22:52 [IST]
English summary
Best 5 mpvs in india invicto innova hycross ertiga carens clavis and xl6
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+