Tata: ರೂ.12.89 ಲಕ್ಷ.. 5-ಸೀಟರ್, ಗಟ್ಟಿಮುಟ್ಟಾದ 'ಟಾಟಾ ಹ್ಯಾರಿಯರ್ ಪೆಟ್ರೋಲ್'ಗೆ 5 ಬದಲಿ ಕಾರುಗಳಿವು.. ಬೆಲೆ ಎಷ್ಟು?

ನಿನ್ನೆಯಷ್ಟೇ ಹೊಸ ಟಾಟಾ ಹ್ಯಾರಿಯರ್ ಪೆಟ್ರೋಲ್ (Tata Harrier Petrol) ಎಸ್‌ಯುವಿ ಬಿಡುಗಡೆಗೊಂಡಿದೆ. ಇದು ಕನಿಷ್ಠ ರೂ.12.89 ಲಕ್ಷ ಮತ್ತು ಗರಿಷ್ಠ ರೂ.24.68 ಲಕ್ಷ ( ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಡೇಟೋನಾ ಗ್ರೇ, ಪ್ಯೂರ್ ಗ್ರೇ, ಪ್ರಿಸ್ಟೈನ್ ವೈಟ್, ಕಾರ್ಬನ್ ಬ್ಲ್ಯಾಕ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2741 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು.

ಈ ಕಾರು 1.5-ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 16.8 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಪನೊರೊಮಿಕ್ ಸನ್‌ರೂಫ್‌ನಂತಹ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಸರೌಂಡ್-ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.

Best 5 Replacement Cars For Tata Harrier Petrol Suv Creta Hyryder Victoris Hector And Grand Vitara

ನೀವು ಇದೇ 'ಟಾಟಾ ಹ್ಯಾರಿಯರ್ ಪೆಟ್ರೋಲ್'ಗೆ ಪರ್ಯಾಯವಾಗಿ ಈ 5 ಕಾರುಗಳಾದ ಹ್ಯುಂಡೈ ಕ್ರೆಟಾ, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಮಾರುತಿ ಸುಜುಕಿ ವಿಕ್ಟೋರಿಸ್, ಎಂಜಿ ಹೆಕ್ಟರ್ ಹಾಗೂ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಹ್ಯುಂಡೈ ಕ್ರೆಟಾ (Hyundai Creta):

ಇದೊಂದು ವಿಶ್ವಾಸಾರ್ಹ ಎಸ್‌ಯುವಿಯಾಗಿದ್ದು, 'ಟಾಟಾ ಹ್ಯಾರಿಯರ್ ಪೆಟ್ರೋಲ್'ಗೆ ಬದಲಿ ಕಾರಾಗಿ ಹೊರಹೊಮ್ಮಿದೆ. ಅದಕ್ಕೆ ತಕ್ಕಂತೆ ರೂ.10.73 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 21.8 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಡುಯಲ್ ಡಿಸ್‌ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 5 Replacement Cars For Tata Harrier Petrol Suv Creta Hyryder Victoris Hector And Grand Vitara

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder):

ಈ ಕಾರನ್ನು 'ಟಾಟಾ ಹ್ಯಾರಿಯರ್ ಪೆಟ್ರೋಲ್'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದಾಗಿದೆ. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):

ಇದು ಪ್ರಖ್ಯಾತ ಎಸ್‌ಯುವಿಯಾಗಿದ್ದು, 'ಟಾಟಾ ಹ್ಯಾರಿಯರ್ ಪೆಟ್ರೋಲ್'ಗೆ ಬದಲಿ ಆಯ್ಕೆಯಾಗಿದೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 21 ರಿಂದ 28.65 ಕಿಲೋಮೀಟರ್‌ವರೆಗೆ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Replacement Cars For Tata Harrier Petrol Suv Creta Hyryder Victoris Hector And Grand Vitara

ಎಂಜಿ ಹೆಕ್ಟರ್ (MG Hector):

ಈ ಎಸ್‌ಯುವಿಯನ್ನು 'ಟಾಟಾ ಹ್ಯಾರಿಯರ್ ಪೆಟ್ರೋಲ್'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದಾಗಿದೆ. ರೂ.11.99 ಲಕ್ಷದಿಂದ ರೂ.19.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 12 ರಿಂದ 16 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 14-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 5 Replacement Cars For Tata Harrier Petrol Suv Creta Hyryder Victoris Hector And Grand Vitara

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara):

ಇದೊಂದು ಜನಪ್ರಿಯ ಎಸ್‌ಯುವಿಯಾಗಿದ್ದು, 'ಟಾಟಾ ಹ್ಯಾರಿಯರ್ ಪೆಟ್ರೋಲ್'ಗೆ ಬದಲಾಗಿಯೂ ಮನೆಗೆ ತರಬಹುದು. ರೂ.10.77 ಲಕ್ಷದಿಂದ ರೂ.19.72 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 21 ರಿಂದ 27.97 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Thursday, January 8, 2026, 13:22 [IST]
English summary
Best 5 replacement cars for tata harrier petrol suv creta hyryder victoris hector and grand vitara
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+