Tata: ಬಲಿಷ್ಠ ಕಾರಿದು.. 13.29 ಲಕ್ಷ, ಹೊಸ ಟಾಟಾ ಸಫಾರಿಗೆ 5 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟಿದೆ?

ಇತ್ತೀಚೆಗೆ ಹೊಸ ಟಾಟಾ ಸಫಾರಿ ಪೆಟ್ರೋಲ್ (Tata Safari Petrol) ಎಸ್‌ಯುವಿಯನ್ನು ಪರಿಚಯಿಸಲಾಗಿದೆ. ಈ ಕಾರು ರೂ.13.29 ಲಕ್ಷದಿಂದ ರೂ.25.19 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಕಾಸ್ಮಿಕ್ ಗೋಲ್ಡ್, ಫ್ರಾಸ್ಟ್ ವೈಟ್, ರಾಯಲ್ ಬ್ಲೂ, ಡೇಟೋನಾ ಗ್ರೇ, ಕಾರ್ಬನ್ ಬ್ಲ್ಯಾಕ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,741 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. 6/ 7 ಆಸನಗಳನ್ನು ಹೊಂದಿದ್ದು, ಎರಡು ಕುಟುಂಬ ಆರಾಮದಾಯಕವಾಗಿ ಪ್ರಯಾಣ ಮಾಡಬಹುದು.

ನೂತನ 'ಸಫಾರಿ' 1.5-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 16 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ ಎಂದು ಅಂದಾಜಿಸಲಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಸ್ಟೀರಿಂಗ್ ವೀಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Replacement Cars For Tata Safari Petrol Invicto Hycross 7XO Scorpio N And Carens Clavis

ನೀವು ಇದೇ 'ಟಾಟಾ ಸಫಾರಿ ಪೆಟ್ರೋಲ್'ಗೆ ಬದಲಾಗಿ ಈ 5 ಕಾರುಗಳಾದ ಮಾರುತಿ ಸುಜುಕಿ ಇನ್ವಿಕ್ಟೊ, ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ, ಟೊಯೊಟಾ ಇನ್ನೋವಾ ಹೈಕ್ರಾಸ್, ಮಹೀಂದ್ರಾ ಸ್ಕಾರ್ಪಿಯೋ ಎನ್ ಹಾಗೂ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮಾಡೆಲ್‌ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto):

ಇದೊಂದು ಪ್ರಮುಖ ಎಂಪಿವಿಯಾಗಿದ್ದು, 'ಟಾಟಾ ಸಫಾರಿ ಪೆಟ್ರೋಲ್'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ರೂ.24.97 ಲಕ್ಷದಿಂದ ರೂ.28.61 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 2-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ನ್ನು ಹೊಂದಿದೆ. 23 ಕಿಲೋಮೀಟರ್‌ಗೆ ಮೈಲೇಜ್ ನೀಡುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 5 Replacement Cars For Tata Safari Petrol Invicto Hycross 7XO Scorpio N And Carens Clavis

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross):

ಈ ಕಾರನ್ನು 'ಟಾಟಾ ಸಫಾರಿ ಪೆಟ್ರೋಲ್'ಗೆ ಬದಲಾಗಿ ತೆಗೆದುಕೊಳ್ಳಬಹುದಾಗಿದೆ. ರೂ.18.48 ಲಕ್ಷದಿಂದ ರೂ.31.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 7/ 8 ಆಸನಗಳನ್ನು ಒಳಗೊಂಡಿದೆ. 2-ಲೀ. ಪೆಟ್ರೋಲ್ & 2-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. 23 ಕಿಲೋಮೀಟರ್‌ಗೆ ಮೈಲೇಜ್ ಕೊಡುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO):

ಇದು ಹೊಸ ಎಸ್‌ಯುವಿಯಾಗಿದ್ದು, 'ಟಾಟಾ ಸಫಾರಿ ಪೆಟ್ರೋಲ್'ಗೆ ಪರ್ಯಾಯವಾಗಿ ಮನೆಗೆ ತರಬಹುದು. ರೂ.13.66 ಲಕ್ಷದಿಂದ ರೂ.24.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 2-ಲೀ. ಟರ್ಬೊ ಪೆಟ್ರೋಲ್ ಹಾಗೂ 2.2-ಲೀ. ಡೀಸೆಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 17 ಕಿಲೋಮೀಟರ್‌ಗೆ ಮೈಲೇಜ್ ನೀಡುತ್ತದೆ. ಟ್ರಿಪಲ್ ಸ್ಕ್ರೀನ್ ಸೆಟಪ್ ಹಾಗೂ 7-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Replacement Cars For Tata Safari Petrol Invicto Hycross 7XO Scorpio N And Carens Clavis

ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N):

ಈ ಕಾರನ್ನು 'ಟಾಟಾ ಸಫಾರಿ ಪೆಟ್ರೋಲ್'ಗೆ ಬದಲಾಗಿ ತೆಗೆದುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.13.20 ಲಕ್ಷದಿಂದ ರೂ.24.17 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 6/ 7 ಆಸನಗಳನ್ನು ಪಡೆದಿದೆ. 2.0-ಲೀ. ಪೆಟ್ರೋಲ್ ಮತ್ತು 2.0-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 12 ರಿಂದ 16 ಕಿಲೋಮೀಟರ್‌ಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

Best 5 Replacement Cars For Tata Safari Petrol Invicto Hycross 7XO Scorpio N And Carens Clavis

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):

ಇದೊಂದು ವಿಶ್ವಾಸಾರ್ಹ ಎಂಪಿವಿಯಾಗಿದೆ. 'ಟಾಟಾ ಸಫಾರಿ ಪೆಟ್ರೋಲ್'ಗೆ ಪರ್ಯಾಯವಾಗಿ ಖರೀದಿಸಬಹುದು. ರೂ.11.08 ಲಕ್ಷದಿಂದ ರೂ.20.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 6/ 7 ಆಸನಗಳನ್ನು ಒಳಗೊಂಡಿದೆ. 1.5-ಲೀ. ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Friday, January 9, 2026, 17:11 [IST]
English summary
Best 5 replacement cars for tata safari petrol invicto hycross 7xo scorpio n and carens clavis
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+