Maruti Suzuki: ಬೆಸ್ಟ್ 5-ಸೀಟರ್ ಕಾರಿದು.. ಬರೀ 5.99 ಲಕ್ಷ ರೂಪಾಯಿ.. 30 ಕಿ.ಮೀ ಮೈಲೇಜ್!
ಮಾರುತಿ ಸುಜುಕಿ ಬಲೆನೊ (Maruti Suzuki Baleno) ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ದೇಶೀಯ ಮಾರುಕಟ್ಟೆಯಲ್ಲಿ 1999ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೆ ಹೆಚ್ಚಿನ ಬೇಡಿಕೆಯನ್ನು ಹೊಂದಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಬಲೆನೊ' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ನೂತನ ಹ್ಯಾಚ್‌ಬ್ಯಾಕ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಹೊಚ್ಚ ಹೊಸ 'ಮಾರುತಿ ಬಲೆನೊ' ನೆಕ್ಸಾ ಡೀಲರ್‌ಶಿಪ್ ಮೂಲಕ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.5.99 ಲಕ್ಷ ಹಾಗೂ ಗರಿಷ್ಠ ರೂ.9.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸಿಗ್ಮಾ (Sigma), ಡೆಲ್ಟಾ (Delta), ಜಿಟಾ (Zeta) ಮತ್ತು ಆಲ್ಫಾ (Alpha) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ಇದು ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಪಡೆದಿದೆ. 15-ಇಂಚಿನ ಸ್ಟೀಲ್ ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ, ಲಕ್ಸೆ ಬೀಜ್ ಹಾಗೂ ಬ್ಲ್ಯೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ಈ ಕಾರು ಹೆಚ್ಚು ವಿಶಾಲವಾಗಿದೆ. 3,990 ಮಿ.ಮೀ ಉದ್ದ, 1,745 ಮಿ.ಮೀ ಅಗಲ ಮತ್ತು 1,500 ಮಿ.ಮೀ ಎತ್ತರವಿದೆ. 170 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 955 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ನೂತನ 'ಮಾರುತಿ ಸುಜುಕಿ ಬಲೆನೊ' 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವೀಕೆಂಡ್‌ಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಕಾರ್ಯಕ್ಷಮತೆ (Performance):
ಇದು ಬೆಲೆಗೆ ತಕ್ಕಂತೆ ಶಕ್ತಿಯುತ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀ. ಸಿಎನ್‌ಜಿ ಎಂಜಿನ್ 77.5 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಹಾಗೂ 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 22 ರಿಂದ 30 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 37 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 12.1 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಒಳಾಂಗಣ & ವೈಶಿಷ್ಟ್ಯಗಳು (Interior & Features):
ಹೊಸ 'ಮಾರುತಿ ಬಲೆನೊ' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ರೇರ್ ಎಸಿ ವೆಂಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕೋಲ್ಡ್ ಗ್ಲೋವ್‌ಬಾಕ್ಸ್, ಪವರ್ ಸ್ಟೀರಿಂಗ್, ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್‌ಗಳು & ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಗರಿಷ್ಠ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಕ್ರೂಸ್ ಕಂಟ್ರೋಲ್, 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ರೇರ್-ಪಾರ್ಕಿಂಗ್ ಸೇನಾರ್ಸ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








