ಪೆಟ್ರೋಲ್ ಬೇಕಿಲ್ಲ.. ಬೆಚ್ಚಿಬಿದ್ದ ಎದುರಾಳಿಗಳು.. ಮುಗಿಬಿದ್ದ ಜನ.. 449 Km ರೇಂಜ್.. 9.99 ಲಕ್ಷ ರೂ!

ಎಂಜಿ ವಿಂಡ್ಸರ್ (MG Windsor) ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿ ಎಂದೇ ಹೆಸರುವಾಗಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ 2026 ಫೆಬ್ರವರಿ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 2,599 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 2,431 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 6.91% ಪ್ರಗತಿಯಾಗಿದೆ.

'ಎಂಜಿ ವಿಂಡ್ಸರ್ ಇವಿ' ವಿಶೇಷತೆಗಳೇನು:

ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಸ್ಟ್ಯಾಂಡರ್ಡ್ ಆಗಿ ರೂ.14 ಲಕ್ಷದಿಂದ ರೂ.18.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಬಾಸ್ (ಬ್ಯಾಟರಿ-ಆಸ್-ಎ-ಸರ್ವಿಸ್) ಯೋಜನೆಯಡಿಯೂ ಲಭ್ಯವಿದೆ ಆ ಮಾಡೆಲ್ ಬೆಲೆ ರೂ.9.99 ಲಕ್ಷ ಆರಂಭಿಕ ದರವನ್ನು ಪಡೆದಿದೆ. ಪ್ರತಿ ಕಿ.ಮೀ ಸಂಚಾರಕ್ಕೆ ರೂ.3.50 ಬಾಡಿಗೆ ಪಾವತಿಸಬೇಕು. ಎಕ್ಸೈಟ್, ಎಕ್ಸ್‌ಕ್ಲೂಸಿವ್, ಎಸೆನ್ಸ್, ಎಕ್ಸ್‌ಕ್ಲೂಸಿವ್ ಪ್ರೊ ಹಾಗೂ ಎಸೆನ್ಸ್ ಪ್ರೊ ಎಂಬ ರೂಪಾಂತರಗಳಿಗೂ ಸಿಗುತ್ತದೆ.

Best 5 Seater Electric Suv MG Windsor February 2026 Sales Details

ಈ ಎಲೆಕ್ಟ್ರಿಕ್ ಎಸ್‌ಯುವಿಯು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು, ರೈನ್ ಸೆನ್ಸಿಂಗ್ ವೈಪರ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪರ್ಲ್ ವೈಟ್, ಟರ್ಕೋಯಿಸ್ ಗ್ರೀನ್, ಕ್ಲೇ ಬೀಜ್, ಅರೋರಾ ಸಿಲ್ವರ್, ಸೆಲಾಡಾನ್ ಬ್ಲೂ ಮತ್ತು ಗ್ಲೇಜ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಎಂಜಿ ವಿಂಡ್ಸರ್' ಸಾಕಷ್ಟು ವಿಶಾಲವಾಗಿದೆ. 4,295 ಎಂಎಂ ಉದ್ದ, 2,126 ಎಂಎಂ ಅಗಲ ಮತ್ತು 1,677 ಎಂಎಂ ಎತ್ತರವಿದೆ. 186 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,659 ಕೆಜಿ ತೂಕವಿದೆ.

ಇದು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಊರುಗಳಿಗೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ ಬೃಹದಾಕಾರದ 604 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಎಲೆಕ್ಟ್ರಿಕ್ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 38 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 52.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 332 ರಿಂದ 449 ರೇಂಜ್ (ಮೈಲೇಜ್) ರೇಂಜ್ (ಮೈಲೇಜ್) ಕೊಡುತ್ತದೆ. 157 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 10 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ 'ವಿಂಡ್ಸರ್' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೊರೊಮಿಕ್ ಗ್ಲಾಸ್ ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇಕೋ ಪ್ಲಸ್, ಇಕೋ, ನಾರ್ಮಲ್ ಮತ್ತು ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.

ಇದು ಸುರಕ್ಷತೆಯಿಂದಲೂ ಖ್ಯಾತಿ ಗಳಿಸಿದೆ. ಪ್ರಯಾಣಿಕರ ರಕ್ಷಣೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಸ್ಟಾರ್ಟ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಆಟೋ ಹೋಲ್ಡ್, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Friday, March 20, 2026, 8:21 [IST]
English summary
Best 5 seater electric suv mg windsor february 2026 sales details
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+