ಹೊಸ 5-ಸ್ಟಾರ್ ಕಾರಿದು.. ಮುಗಿಬಿದ್ದ ಗ್ರಾಹಕರು.. 28.65 ಕಿ.ಮೀ ಮೈಲೇಜ್.. 10.50 ಲಕ್ಷ ರೂಪಾಯಿ!
ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ವಿಶ್ವಾಸಾರ್ಹ ಎಸ್‌ಯುವಿಯಾಗಿ ಹೊರಹೊಮ್ಮುತ್ತಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಸಹ ನಾ ಮುಂದು - ತಾ ಮುಂದು ಎಂಬಂತೆ ಮುಗಿಬಿದ್ದು ಕೊಂಡುಕೊಳ್ಳತ್ತಿದ್ದಾರೆ. ಈ 2026ರ ಫೆಬ್ರವರಿ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 13,021 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ, ಪ್ರತಿದಿನ 465 ಯುನಿಟ್‌ಗಳು ಮಾರಾಟವಾಗಿವೆ. ಇದೇ ಜನವರಿಯಲ್ಲಿ 15,240 ಯುನಿಟ್‌ಗಳನ್ನು ಮಾರಲಾಗಿದೆ.
2025ರ ಸೆಪ್ಟೆಂಬರ್ 16 ರಂದು ನೂತನ 'ಮಾರುತಿ ವಿಕ್ಟೋರಿಸ್'ನ್ನು ಬಿಡುಗಡೆಗೊಳಿಸಲಾಗಿತ್ತು. ಆ ತಿಂಗಳೇ 4,261 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಅಕ್ಟೋಬರ್‌ನಲ್ಲಿ 13,496 ಯುನಿಟ್‌ಗಳು, ನವೆಂಬರ್‌ನಲ್ಲಿ 12,300 ಯುನಿಟ್‌ಗಳು ಹಾಗೂ ಡಿಸೆಂಬರ್‌ನಲ್ಲಿ 6,210 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

'ಮಾರುತಿ ಸುಜುಕಿ ವಿಕ್ಟೋರಿಸ್' ವಿಶೇಷತೆಗಳೇನು:
ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮಧ್ಯಮ ಹಾಗೂ ಶ್ರೀಮಂತ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಎಲ್ಎಕ್ಸ್ಐ (LXi), ವಿಎಕ್ಸ್ಐ (VXi), ಜಡ್ಎಕ್ಸ್ಐ (ZXi) ಹಾಗೂ ಜಡ್ಎಕ್ಸ್ಐ ಪ್ಲಸ್ ( ZXi Plus) ಸೇರಿದಂತೆ ವಿವಿಧ ರೂಪಾಂತರಗಳೊಂದಿಗೂ ಸಿಗುತ್ತದೆ.
ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಪ್ರತಿಯೊಬ್ಬರ ಕಣ್ಣು ಕುಕ್ಕುವಂತಿದೆ. ಬಹುತೇಕ 'ಗ್ರ್ಯಾಂಡ್ ವಿಟಾರಾ'ಕ್ಕೂ ಹೋಲಿಕೆಯಾಗುತ್ತದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸಾಕಷ್ಟು ವಿಶಾಲವಾಗಿದೆ. 4,360 ಮಿ.ಮೀ ಉದ್ದ, 1,655 ಮಿ.ಮೀ ಅಗಲ ಮತ್ತು 1,795 ಮಿ.ಮೀ ಎತ್ತರವಿದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ವಿಕ್ಟೋರಿಸ್' ಬಲಿಷ್ಠವಾದ ಮೂರು ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್, 6,000 ಆರ್‌ಪಿಎಂನಲ್ಲಿ 101.65 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,300 ಆರ್‌ಪಿಎಂನಲ್ಲಿ 139 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಮತ್ತೊಂದು 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 5,500 ಆರ್‌ಪಿಎಂನಲ್ಲಿ 91 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 3,800 ಆರ್‌ಪಿಎಂನಲ್ಲಿ 122 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.

ಇನ್ನೊಂದು 1.5-ಲೀಟರ್ ಸಿಎನ್‌ಜಿ ಎಂಜಿನ್, 5,500 ಆರ್‌ಪಿಎಂನಲ್ಲಿ 87.8 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,200 ಆರ್‌ಪಿಎಂನಲ್ಲಿ 121 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 21.06 ರಿಂದ 28.65 ಕಿ.ಮೀ ವರಗೆ ಮೈಲೇಜ್ ನೀಡುತ್ತದೆ.
ನೂತನ 'ಮಾರುತಿ ವಿಕ್ಟೋರಿಸ್' ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಮತ್ತು ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನಗಳನ್ನು ಹೊಂದಿದೆ. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಈ ಕಾರು 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ಕಪ್ ಹೋಲ್ಡರ್‌ಗಳು, 64-ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








