5-ಸ್ಟಾರ್ ಕಾರಿದು.. ಬಿಸಿ ದೋಸೆಯಂತೆ ಸೇಲ್ಸ್.. 6 ಲಕ್ಷ ರೂಪಾಯಿ.. 33.73 Km ಮೈಲೇಜ್!
ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಜನಮೆಚ್ಚಿದ ಸೆಡಾನ್ ಎಂದೇ ಮನೆ ಮಾತಾಗಿದೆ. ಗ್ರಾಹಕರು ಸಹ ನಾ ಮುಂದು - ಮುಂದು ಎಂಬಂತೆ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ 2026ರ ಫೆಬ್ರವರಿಯಲ್ಲಿಯೂ ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಸರಿ ಸುಮಾರು 19,326 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 14,694 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 31.52% ಬೆಳವಣಿಗೆಯಾಗಿದೆ.
ನೂತನ 'ಮಾರುತಿ ಡಿಜೈರ್' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಇದು ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ದೀರ್ಘಕಾಲ ಬಾಳಿಕೆಯೂ ಬರುತ್ತದೆ. ಜೊತೆಗೆ ಸುರಕ್ಷತೆಯಿಂದಲೂ ಖ್ಯಾತಿ ಗಳಿಸಿದ್ದು, ಗ್ಲೋಬಲ್ ಎನ್‌ಸಿಎಪಿ ಮತ್ತು ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಹೀಗಾಗಿ 'ಡಿಜೈರ್' ಮಾರಾಟ ಸಂಖ್ಯೆಯೂ ಅಧಿಕಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

'ಮಾರುತಿ ಸುಜುಕಿ ಡಿಜೈರ್' ವಿಶೇಷತೆಗಳೇನು:
ಈ ಸೆಡಾನ್ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ಕನಿಷ್ಠ ರೂ.6.26 ಲಕ್ಷ ಮತ್ತು ಗರಿಷ್ಠ ರೂ.9.31 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.
ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಪ್ಲೆಂಡಿಡ್ ಸಿಲ್ವರ್, ಬ್ಲ್ಯೂಯಿಶ್ ಬ್ಲ್ಯಾಕ್, ಆರ್ಕ್ಟಿಕ್ ವೈಟ್ ಹಾಗೂ ಮ್ಯಾಗ್ಮಾ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಹೊಸ 'ಡಿಜೈರ್' ಸಾಕಷ್ಟು ವಿಶಾಲವಾಗಿದೆ. 3,995 ಮಿ.ಮೀ ಉದ್ದ, 1,735 ಮಿ.ಮೀ ಅಗಲ ಹಾಗೂ 1,515 ಮಿ.ಮೀ ಎತ್ತರವಿದೆ. 63 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 960 ಕೆಜಿ ತೂಕವಿದೆ.
ಈ ಕಾರು ಶಕ್ತಿಶಾಲಿಯಾದ 2 ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್, 82 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 70 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಇದು ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24 ರಿಂದ 33.73 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ನೂತನ 'ಮಾರುತಿ ಡಿಜೈರ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 382 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಅರ್ಕಾಮಿಸ್ ಸೌಂಡ್ ಸಿಸ್ಟಮ್, ಕನೆಕ್ಟ್ಡ್ ಕಾರ್ ಟೆಕ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು ರೇರ್-ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಬಲ್ಲದು. ಸುರಕ್ಷತೆಯ ಹಿತದೃಷ್ಟಿಯಿಂದ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಹೋಲ್ಡ್ ಅಸಿಸ್ಟ್, 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








