Hyundai: ಮುಗಿಬಿದ್ದ ಜನ.. ಅಬ್ಬರಿಸಿದ ಹ್ಯುಂಡೈ ಎಸ್‌ಯುವಿ.. ಪ್ರತಿದಿನ 640 ಕಾರುಗಳು ಸೇಲ್ಸ್!
ಹ್ಯುಂಡೈ ಕ್ರೆಟಾ (Hyundai Creta) ನಂಬಿಕಾರ್ಹ ಮಿಡ್-ಸೈಜ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಗ್ರಾಹಕರು ಸಹ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಈ 2026ರ ಫೆಬ್ರವರಿ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 17,938 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 16,317 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ-ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 9.93% ಪ್ರಗತಿಯಾಗಿದೆ.
ನೂತನ 'ಹ್ಯುಂಡೈ ಕ್ರೆಟಾ' ಎಸ್‌ಯುವಿ ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ, ಇದು ಉತ್ತಮ ಇಂಧನ ದಕ್ಷತೆಗೆ ಹೆಸರುವಾಸಿಯಾಗಿದ್ದು, ನೋಡುಗರ ಕಣ್ಮನ ಸೆಳೆಯುವಂತಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿದೆ. ಹೀಗಾಗಿ 'ಕ್ರೆಟಾ' ಮಾರಾಟ ಸಂಖ್ಯೆಯೂ ಏರಿಕೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸ್ಟ್ಯಾಂಡರ್ಡ್ 'ಹ್ಯುಂಡೈ ಕ್ರೆಟಾ' ವಿಶೇಷತೆಗಳೇನು:
ಇದು ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ಕನಿಷ್ಠ ರೂ.10.79 ಲಕ್ಷ ಮತ್ತು ಗರಿಷ್ಠ ರೂ.20.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಇ, ಇಎಕ್ಸ್, ಎಸ್ ಮತ್ತು ಎಸ್ಎಕ್ಸ್ ಟೆಕ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.
ಈ ಕಾರು ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು & 18-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್, ರೇಂಜರ್ ಖಾಕಿ, ಟೈಟಾನ್ ಗ್ರೇ, ಸ್ಟಾರಿ ನೈಟ್, ಬ್ಲ್ಯಾಕ್ ಮ್ಯಾಟ್ ಮತ್ತು ಟೈಟಾನ್ ಗ್ರೇ ಮ್ಯಾಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಸಾಕಷ್ಟು ವಿಶಾಲವಾಗಿದ್ದು, 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,610 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಕ್ರೆಟಾ' ಎಸ್‌ಯುವಿಯು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 17.4 ರಿಂದ 21.8 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 195 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 8.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇದು 5 ಆಸನ ಆಯ್ಕೆ ವ್ಯವಸ್ಥೆ ಒಳಗೊಂಡಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 433 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 10.25-ಇಂಚಿನ ಡುಯಲ್ ಸ್ಕ್ರೀನ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್ ಹಾಗೂ ಡುಯಲ್-ಝೋನ್ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಹೊಂದಿದೆ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಸಹ ಗ್ರಾಹಕರ ಖರೀದಿಗೆ ಲಭ್ಯ:
ಈ ಎಲೆಕ್ಟ್ರಿಕ್ ಎಸ್‌ಯುವಿಯು ರೂ.18.02 ಲಕ್ಷದಿಂದ ರೂ.23.96 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅಬಿಸ್ ಬ್ಲ್ಯಾಕ್ ಪರ್ಲ್ ಮೆಟಾಲಿಕ್, ಅಟ್ಲಾಸ್ ವೈಟ್ ಮೆಟಾಲಿಕ್, ಸ್ಟಾರಿ ನೈಟ್, ಓಷನ್ ಬ್ಲೂ ಮೆಟಾಲಿಕ್ ಹಾಗೂ ಷಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,610 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಹೊಸ 'ಕ್ರೆಟಾ ಇವಿ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) & 51.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 10.25-ಇಂಚಿನ ಡುಯಲ್ ಸ್ಕ್ರೀನ್, ಸನ್‌ರೂಫ್ ಮತ್ತು ಡುಯಲ್ ಜೋನ್ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


Click it and Unblock the Notifications








