TATA: 5-ಸೀಟರ್‌ನ ಕಲ್ಲು ಬಂಡೆಯಂತಹ ಟಾಟಾ ಕಾರಿದು.. ಬಿಸಿ ಜಿಲೇಬಿಯಂತೆ ಸೇಲ್ಸ್.. 12.8 ಲಕ್ಷ ರೂಪಾಯಿ!
ಟಾಟಾ ಹ್ಯಾರಿಯರ್ (Tata Harrier) ಪ್ರಮುಖ ಎಸ್‌ಯುವಿಯಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) ಅದು ಮುಂದುವರಿದಿದೆ. ಒಟ್ಟು 3,711 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 1,488 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 149% ಬೆಳವಣಿಗೆಯಾಗಿದೆ.
ಸ್ಟ್ಯಾಂಡರ್ಡ್ 'ಟಾಟಾ ಹ್ಯಾರಿಯರ್' ವಿಶೇಷತೆಗಳೇನು:
ಈ ಎಸ್‌ಯುವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ರೂ.12.89 ಲಕ್ಷದಿಂದ ರೂ.25.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಮಾರ್ಟ್ (Smart), ಪ್ಯೂರ್ ಎಕ್ಸ್ (Pure X), ಅಡ್ವೆಂಚರ್ ಎಕ್ಸ್ (Adventure X) ಹಾಗೂ ಫಿಯರ್‌ಲೆಸ್ ಎಕ್ಸ್ (Fearless X) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸನ್‌ಲೈಟ್ ಯೆಲ್ಲೋ, ಸೀವೀಡ್ ಗ್ರೀನ್, ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ ಹಾಗೂ ನೈಟ್ರೋ ಕ್ರಿಮ್ಸನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ 'ಹ್ಯಾರಿಯರ್' ಹೆಚ್ಚು ವಿಶಾಲವಾಗಿದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2741 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವೀಕೆಂಡ್‌ಗಳಲ್ಲಿ ಲಾಂಗ್ ಡ್ರೈವ್ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಬರೋಬ್ಬರಿ 445 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಕಾರು ಬೆಲೆಗೆ ತಕ್ಕಂತೆ ಎರಡು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 2-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 15 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 195 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 11 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇದು 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಡುಯಲ್-ಜೋನ್ ಆಟೋಮೆಟಿಕ್ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಪನೊರೊಮಿಕ್ ಸನ್‌ರೂಫ್‌ನಂತಹ ನಾನಾ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಟಾಟಾ ಹ್ಯಾರಿಯರ್ ಇವಿಯೂ ಖರೀದಿಗೆ ಲಭ್ಯ:
ಈ ಎಲೆಕ್ಟ್ರಿಕ್ ಎಸ್‌ಯುವಿ ದುಬಾರಿ ದರವನ್ನು ಪಡೆದಿದೆ. ರೂ.21.49 ಲಕ್ಷದಿಂದ ರೂ.30.23 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ & ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಸಾಕಷ್ಟು ವಿಶಾಲ ಗಾತ್ರದಲಿದ್ದು, 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2741 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಹೊಸ 'ಹ್ಯಾರಿಯರ್ ಇವಿ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. 538 ರಿಂದ 627 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ.


Click it and Unblock the Notifications








