7-ಸೀಟರ್‌ನ ಜನಪ್ರಿಯ ಫ್ಯಾಮಿಲಿ ಕಾರುಗಳಿವು.. ಬರೀ ರೂ.5.65 ಲಕ್ಷದಿಂದ ಶುರು.. ಮಧ್ಯಮ ವರ್ಗದವರಿಗೆ ಪರ್ಫೆಕ್ಟ್!
ದೇಶೀಯ ಮಾರುಕಟ್ಟೆಯಲ್ಲಿ ಅಗ್ಗದ ಫ್ಯಾಮಿಲಿ ಕಾರುಗಳಿಗೆ ವಿಪರೀತವಾದ ಬೇಡಿಕೆಯಿದೆ. ಇವುಗಳನ್ನು ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ನಿಮ್ಮ ಕುಟುಂಬಕ್ಕಾಗಿ ಬರೀ ರೂ.10 ಲಕ್ಷದೊಳಗೆ ಸಿಗುವ ಹೊಚ್ಚ ಹೊಸ 7-ಸೀಟರ್‌ನ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ನಿಸ್ಸಾನ್ ಗ್ರಾವೈಟ್, ರೆನಾಲ್ಟ್ ಟ್ರೈಬರ್, ಮಾರುತಿ ಸುಜುಕಿ ಎರ್ಟಿಗಾ, ಮಹೀಂದ್ರಾ ಬೊಲೆರೊ ಹಾಗೂ ಮಹೀಂದ್ರಾ ಬೊಲೆರೊ ನಿಯೋ ಮಾಡೆಲ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಈ ಕಾರುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ನಿಸ್ಸಾನ್ ಗ್ರಾವೈಟ್ (Nissan Gravite):
ಇದೊಂದು ಎಂಪಿವಿಯಾಗಿದ್ದು, ಈಚೆಗೆ ಮಾರಾಟಕ್ಕೆ ತರಲಾಗಿದೆ. ರೂ.5.65 ಲಕ್ಷದಿಂದ ರೂ.8.93 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಫಾರೆಸ್ಟ್ ಗ್ರೀನ್, ಓನಿಕ್ಸ್ ಬ್ಯ್ಲಾಕ್, ಮೆಟಾಲಿಕ್ ಗ್ರೇ ಮತ್ತು ಸ್ಟಾರ್ಮ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 182 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,636 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 7 ಆಸನಗಳನ್ನು ತನ್ನದಾಸಿಕೊಂಡಿದೆ.

ನೂತನ 'ಗ್ರಾವೈಟ್' 1-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 19.3 ರಿಂದ 19.6 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಮ್ಯಾನುವಲ್ ಎಸಿ, ಪುಶ್ ಬಟನ್ ಸ್ಟಾರ್ಟ್, ಕ್ರೂಸ್ ಕಂಟ್ರೋಲ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ರೆನಾಲ್ಟ್ ಟ್ರೈಬರ್ (Renault Triber):
ಈ ಎಂಪಿವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ರೂ.5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಆಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ ಹಾಗೂ ಶ್ಯಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 182 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,636 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

ಹೊಸ 'ಟ್ರೈಬರ್' 1-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 20 ಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಮ್ಯಾನುವಲ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು 6-ಸ್ಪೀಕರ್ ಸೌಂಡ್ ಸಿಸ್ಟಮ್‌ನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga):
ಇದು ಫ್ಯಾಮಿಲಿ ಎಂಪಿವಿಯಾಗಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ರೂ.8.80 ಲಕ್ಷದಿಂದ ರೂ.12.94 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.5-ಲೀಟರ್ ಪೆಟ್ರೋಲ್ & 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.3 ರಿಂದ 26.11 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 7 ಆಸನಗಳನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಮಹೀಂದ್ರಾ ಬೊಲೆರೊ (Mahindra Bolero):
ಈ ಫ್ಯಾಮಿಲಿ ಎಸ್‌ಯುವಿಯನ್ನು ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.7.99 ಲಕ್ಷದಿಂದ ರೂ.9.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 14 ರಿಂದ 16 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo):
ಇದೊಂದು ನಂಬಿಕಾರ್ಹ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಒಂದು ಇಡೀ ಕುಟುಂಬ ಆರಾಮದಾಯಕವಾಗಿ ಪ್ರಯಾಣಿಸಬಹುದು. ರೂ.8.49 ಲಕ್ಷದಿಂದ ರೂ.10.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದ್ದು, 17 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 7 ಆಸನಗಳನ್ನು ಒಳಗೊಂಡಿದೆ. ದೊಡ್ಡದಾಗಿರುವ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications








