ಕ್ಯೂ ನಿಂತ ಜನ.. ಬೆಚ್ಚಿಬಿದ್ದ ಎದುರಾಳಿಗಳು.. 6 ಲಕ್ಷ ರೂ.. 33.73 Km ಮೈಲೇಜ್.. 30 ಲಕ್ಷ ಡಿಜೈರ್‌ ಕಾರುಗಳು ಸೇಲ್ಸ್!

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಪ್ರಮುಖ ಸೆಡಾನ್ ಆಗಿ ಹೊರಹೊಮ್ಮಿದ್ದು, ಮಧ್ಯಮ ವರ್ಗದ ಜನರಿಗೆ ಫರ್ಫೆಕ್ಟ್ ಕಾರಾಗಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಸಹ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಅದಕ್ಕೆ ತಕ್ಕಂತೆ ಭಾರೀ ಸಂಖ್ಯೆಯಲ್ಲಿಯೇ ಮಾರಾಟವಾಗುತ್ತಿದ್ದು, ಕಂಪನಿಗೆ ಗರಿಷ್ಠ ಲಾಭ ತಂದುಕೊಡುತ್ತಿದೆ. ಸದ್ಯ, ಇದೇ ಕಾರಿನ ಮಾರಾಟದಲ್ಲಿ ಹೊಸದೊಂದು ಇತಿಹಾಸ ನಿರ್ಮಾಣಗೊಂಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟ ಮೊದಲ 'ಮಾರುತಿ ಡಿಜೈರ್' ಕಾರು 2008ರ ಮಾರ್ಚ್ 26ರಂದು ಬಿಡುಗಡೆಗೊಂಡಿತ್ತು. ಅಂದೇ ಗ್ರಾಹಕರಿಗೂ ಇಷ್ಟವಾಗಿತ್ತು. ಈಗಾಗಲೇ ಹಲವು ಬಾರಿ ನವೀಕರಣಗೊಂಡಿದೆ. ಸದ್ಯ, ಈ ಸೆಡಾನ್ ಮಾರಾಟಕ್ಕೆ ಬಂದು 18 ವರ್ಷ ಕಳೆದಿದ್ದು, 30 ಲಕ್ಷ ಯುನಿಟ್ ಮಾರಾಟ ಮೈಲಿಗಲ್ಲನ್ನು ಮುಟ್ಟಲಾಗಿದೆ. 2025ರಲ್ಲಿ ಭಾರತದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾದ ಕಾರು ಎಂಬ ಹಿರಿಮೆಗೂ 'ಡಿಜೈರ್' ಪಾತ್ರವಾಗಿತ್ತು. ಭರ್ತಿ 2,14,488 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

Best Sedan In India Maruti Suzuki Dzire 30 Lakh Cars Sold Details

ಈ 2026ರ ಫೆಬ್ರವರಿಯಲ್ಲಿಯೂ ನೂತನ 'ಮಾರುತಿ ಡಿಜೈರ್' ದಾಖಲೆ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 19,326 ಯುನಿಟ್‌ಗಳನ್ನು ಮಾರಾಟ ಮಾರಾಟ ಮಾಡಲಾಗಿದೆ. 2025ರ ಇದೇ ಅವಧಿಯಲ್ಲಿ 14,694 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 31.52% ಪ್ರಗತಿಯಾಗಿದೆ. ಜನವರಿ ತಿಂಗಳಲ್ಲೂ ಮಾರಾಟವು ಉತ್ತಮವಾಗಿದ್ದು, 19,629 ಯುನಿಟ್‌ಗಳು ಮಾರಾಟವಾಗಿವೆ.

2025ರ ಕಡೆಯ 5 ತಿಂಗಳಲ್ಲೂ 'ಡಿಜೈರ್' ಸೆಡಾನ್ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿದೆ. ಡಿಸೆಂಬರ್‌ನಲ್ಲಿ 19,072 ಯುನಿಟ್‌ಗಳು, ನವೆಂಬರ್‌ನಲ್ಲಿ 21,082 ಯುನಿಟ್‌ಗಳು, ಅಕ್ಟೋಬರ್‌ನಲ್ಲಿ 20,791 ಯುನಿಟ್‌ಗಳು ಹಾಗೂ ಸೆಪ್ಟೆಂಬರ್‌ನಲ್ಲಿ 20,038 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

Best Sedan In India Maruti Suzuki Dzire 30 Lakh Cars Sold Details

'ಮಾರುತಿ ಸುಜುಕಿ ಡಿಜೈರ್' ವಿಶೇಷತೆಗಳೇನು:

ಇದು ಅಗ್ಗದ ದರದಲ್ಲೂ ಗ್ರಾಹಕರಿಗೆ ಖರೀದಿಗೆ ದೊರೆಯುತ್ತದೆ. ರೂ.6.26 ಲಕ್ಷದಿಂದ ರೂ.9.31 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಈ ಸೆಡಾನ್ ಸಾಕಷ್ಟು ವಿಶಾಲವಾಗಿದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,450 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 960 ಕೆಜಿ ತೂಕವಿದೆ. ಸ್ಪ್ಲೆಂಡಿಡ್ ಸಿಲ್ವರ್, ಬ್ಲ್ಯೂಯಿಶ್ ಬ್ಲ್ಯಾಕ್, ಆರ್ಕ್ಟಿಕ್ ವೈಟ್ ಮತ್ತು ಮ್ಯಾಗ್ಮಾ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗುವುದಕ್ಕೆ 382 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ತನ್ನದಾಗಿಸಿಕೊಂಡಿದೆ.

ಹೊಸ 'ಮಾರುತಿ ಡಿಜೈರ್' ಬೆಲೆಗೆ ತಕ್ಕಂತೆ ಎರಡು ಪವರ್‌ಟ್ರೇನ್‌ ಆಯ್ಕೆಯನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಯಾವುದೇ ಬೈಕ್‌ಗೂ ಕಮ್ಮಿಯಿಲ್ಲದಂತೆ 24.79 ರಿಂದ 33.73 ಕಿ.ಮೀ ವರೆಗೆ ಮೈಲೇಜ್‌ ಕೊಡುತ್ತದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಅರ್ಕಾಮಿಸ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್‌ ಹಾಗೂ ರೇರ್-ಎಸಿ ವೆಂಟ್‌ಗಳಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಗ್ಲೋಬಲ್ ಎನ್‌ಸಿಎಪಿ & ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Friday, March 13, 2026, 17:53 [IST]
English summary
Best sedan in india maruti suzuki dzire 30 lakh cars sold details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+