ಇವೇ 3 ಬೆಸ್ಟ್ ಫ್ಯಾಮಿಲಿ ಎಲೆಕ್ಟ್ರಿಕ್ ಕಾರುಗಳು.. 7-ಸೀಟರ್, 679 Km ವರೆಗೆ ರೇಂಜ್.. ರೂ.17.99 ಲಕ್ಷದಿಂದ ಶುರು!

ದೇಶದಲ್ಲಿ ದಿನದಿಂದ ದಿನಕ್ಕೆ ಫ್ಯಾಮಿಲಿ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಅದಕ್ಕೆ ತಕ್ಕಂತೆ ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು 7-ಆಸನ ಹೊಂದಿರುವ ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ, ಮಹೀಂದ್ರಾ ಎಕ್ಸ್ಇವಿ 9ಎಸ್ ಹಾಗೂ ಬಿವೈಡಿ ಇ-ಮ್ಯಾಕ್ಸ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ (Kia Carens Clavis EV):

ಇದೊಂದು ಜನಪ್ರಿಯ ಎಲೆಕ್ಟ್ರಿಕ್ ಎಂಪಿವಿಯಾಗಿದೆ. ರೂ.17.99 ಲಕ್ಷದಿಂದ ರೂ.24.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಗ್ರಾವಿಟಿ ಗ್ರೇ, ಅರೋರಾ ಬ್ಲ್ಯಾಕ್ ಪರ್ಲ್, ಪ್ಯೂಟರ್ ಆಲಿವ್ ಹಾಗೂ ಇಂಪೀರಿಯಲ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,780 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Best Three 7-Seater Electric Cars In India Kia Carens Clavis EV Mahindra XEV 9S And BYD eMAX 7

ಈ ಕಾರು 42 ಹಾಗೂ 51.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 404 ರಿಂದ 490 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 7 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

ನೂತನ 'ಕ್ಯಾರೆನ್ಸ್ ಕ್ಲಾವಿಸ್ ಇವಿ' 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Best Three 7-Seater Electric Cars In India Kia Carens Clavis EV Mahindra XEV 9S And BYD eMAX 7

ಮಹೀಂದ್ರಾ ಎಕ್ಸ್ಇವಿ 9ಎಸ್ (Mahindra XEV 9S):

ಇದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.19.95 ರಿಂದ ರೂ.29.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಡಸರ್ಟ್ ಮಿಸ್ಟ್, ಎವರೆಸ್ಟ್ ವೈಟ್, ಮಿಡ್‌ನೈಟ್ ಬ್ಲ್ಯಾಕ್, ನೆಬ್ಯುಲಾ ಬ್ಲೂ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿವೆ. 201 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,762 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಎಕ್ಸ್ಇವಿ 9ಎಸ್' ಕಾರು 59, 70 ಮತ್ತು 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 521 ರಿಂದ 679 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಕೀಲೆಸ್ ಎಂಟ್ರಿ, ರೇರ್ ಎಸಿ ವೆಂಟ್‌ಗಳು ಹಾಗೂ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best Three 7-Seater Electric Cars In India Kia Carens Clavis EV Mahindra XEV 9S And BYD eMAX 7

ಬಿವೈಡಿ ಇ-ಮ್ಯಾಕ್ಸ್‌ 7 (BYD eMAX 7):

ಇದೊಂದು ಫ್ಯಾಮಿಲಿ ಎಂಪಿವಿಯಾಗಿದೆ. ರೂ.26.90 ಲಕ್ಷದಿಂದ ರೂ.29.90 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಕಾಸ್ಮೊಸ್ ಬ್ಲ್ಯಾಕ್, ಕ್ರಿಸ್ಟಲ್ ವೈಟ್, ಹಾರ್ಬರ್ ಗ್ರೇ ಹಾಗೂ ಕ್ವಾರ್ಟ್ಜ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,800 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಕಾರು 55.4 ಮತ್ತು 71.8 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. 420 ರಿಂದ 530 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 6 ಮತ್ತು 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 12.8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Friday, January 23, 2026, 8:30 [IST]
English summary
Best three 7 seater electric cars in india kia carens clavis ev mahindra xev 9s and byd emax 7
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+