Tata: ಪವರ್‌ಫುಲ್ ಟಾಟಾ ಕಾರುಗಳಿವು.. 5-ಸ್ಟಾರ್ ರೇಟಿಂಗ್.. ಬರೀ ರೂ.10 ಲಕ್ಷದೊಳಗೆ ಲಭ್ಯ!
ಟಾಟಾ ಮೋಟಾರ್ಸ್ (Tata Motors) ಗಟ್ಟಿಮುಟ್ಟಾದ ಕಾರು ತಯಾರಿಕೆಗೆ ಹೆಸರುವಾಸಿಯಾಗಿದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) ಕಂಪನಿಯ ವಿವಿಧ ಕಾರುಗಳಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ಅದರಲ್ಲೂ ನಾನಾ ಪರೀಕ್ಷೆಗೆ ಒಳಪಡಿಸಿದ ನಂತರ, ರೂ.10 ಲಕ್ಷದೊಳಗೆ ಸಿಗುವ ಪಂಚ್, ಆಲ್ಟ್ರೋಜ್ ಹಾಗೂ ನೆಕ್ಸಾನ್‌ಗಳನ್ನು ಅತ್ಯಂತ ಸುರಕ್ಷಿತ ಕಾರುಗಳೆಂದು ತೀರ್ಮಾನಿಸಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಟಾಟಾ ಪಂಚ್ (Tata Punch):
ಇದೊಂದು ಪ್ರಮುಖ ಮೈಕ್ರೋ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಖರೀದಿದಾರರು ಕೂಡ ಮೆಚ್ಚಿಕೊಂಡಿದ್ದಾರೆ. ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ವಿಶೇಷವಾಗಿ ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.58 ಅಂಕಗಳನ್ನು ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಗಳಿಸಿದೆ.

ಈ ಕಾರಿನ ಸುರಕ್ಷತೆಯಲ್ಲೂ ಯಾವುದೇ ರಾಜಿ ಮಾಡಿಕೊಂಡಿಲ್ಲ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರಿವರ್ಸ್ ಕ್ಯಾಮೆರಾ, ಕ್ರೂಸ್ ಕಂಟ್ರೋಲ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.
ನೂತನ 'ಪಂಚ್' ರೂ.5.59 ಲಕ್ಷದಿಂದ ರೂ.9.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 27 ಕಿಲೋಮೀಟರ್‌ವರೆಗೂ ಮೈಲೇಜ್‌ನ್ನು ಕೊಡುತ್ತದೆ. 5-ಆಸನಗಳನ್ನು ಒಳಗೊಂಡಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್ ಹಾಗೂ ಸನ್‌ರೂಫ್‌ನ್ನು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ಆಲ್ಟ್ರೋಜ್ (Tata Altroz):
ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಸಹ ಸುರಕ್ಷತೆಯಿಂದಲೇ ಹೆಚ್ಚು ಮನೆ ಮಾತಾಗಿದೆ. ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದಿದೆ. ಬಹುಮುಖ್ಯವಾಗಿ ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 29.65 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.90 ಅಂಕಗಳನ್ನು ಪಡೆದಿದೆ.
ಹೊಸ 'ಆಲ್ಟ್ರೋಜ್' ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ರೂ.6.30 ಲಕ್ಷದಿಂದ ರೂ.10.51ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲೂ ಗ್ರಾಹಕರ ಖರೀದಿಗೆ ಲಭ್ಯವಿದೆ.

ಟಾಟಾ ನೆಕ್ಸಾನ್ (Tata Nexon):
ಇದು ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಎಸ್‌ಯುವಿಯಾಗಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 29.41 ಅಂಕಗಳನ್ನು ಪಡೆದಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 43.83 ಅಂಕಗಳನ್ನು ಗಳಿಸಿದೆ.
ನೂತನ 'ನೆಕ್ಸಾನ್' ಸುರಕ್ಷತೆಯಲ್ಲೂ ಹಿಂದೆ ಬಿದ್ದಿಲ್ಲ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಲ್ ಸೀಟ್ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ಸೀಟ್‌ಬೆಲ್ಟ್ ರಿಮೆಂಡರ್, ಹಿಲ್ ಹೋಲ್ಡ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾನ್ನು ಒಳಗೊಂಡಿದೆ. ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.


Click it and Unblock the Notifications








