ಟಾಟಾ ಕರ್ವ್ ವಿರುದ್ಧವಾಗಿ ಈ ಕಾರು ಸಿಗುತ್ತೆ.. 8.15 ಲಕ್ಷ ರೂಪಾಯಿ, 19.5 Km ಮೈಲೇಜ್.. 5-ಸೀಟರ್!
ಟಾಟಾ ಕರ್ವ್ (Tata Curvv) ಜನಪ್ರಿಯ ಕೂಪೆ ಎಸ್‌ಯುವಿಯಾಗಿದೆ. ರೂ.9.66 ಲಕ್ಷದಿಂದ ರೂ.18.85 ಲಕ್ಷ ಬೆಲೆಯನ್ನು ಹೊಂದಿದೆ. ಇದಕ್ಕೆ ಸಿಟ್ರನ್ ಬಸಾಲ್ಟ್ ಎಕ್ಸ್ (Citroen Basalt X) ನೇರವಾದ ಎದುರಾಳಿಯಾಗಿದೆ. ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಇದೇ 'ಬಸಾಲ್ಟ್ ಎಕ್ಸ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ.. ಈ ನೂತನ ಎಸ್‌ಯುವಿಯ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಇದು ಸ್ಪರ್ಧಾತ್ಮಕ ದರದಲ್ಲೂ ಲಭ್ಯವಿದೆ. ಕನಿಷ್ಠ ರೂ.8.15 ಲಕ್ಷ ಹಾಗೂ ಗರಿಷ್ಠ ರೂ.13.56 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಪ್ಲಸ್ (Plus) ಮತ್ತು ಮ್ಯಾಕ್ಸ್ (Max) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 16-ಇಂಚಿರುವ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪೋಲಾರ್ ವೈಟ್, ಸ್ಟೀಲ್ ಗ್ರೇ, ಕಾಸ್ಮೊ ಬ್ಲೂ ಮತ್ತು ಗಾರ್ನೆಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.
ಸುತ್ತಳತೆ (Dimension):
ಹೊಸ 'ಸಿಟ್ರನ್ ಬಸಾಲ್ಟ್ ಎಕ್ಸ್' ಸಾಕಷ್ಟು ವಿಶಾಲವಾಗಿದೆ. 4,371 ಮಿ.ಮೀ ಉದ್ದ, 1,907 ಮಿ.ಮೀ ಅಗಲ ಹಾಗೂ 1,627 ಮಿ.ಮೀ ಎತ್ತರವಿದೆ. ಜೊತೆಗೆ 207 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,775 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 1,233 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವೀಕೆಂಡ್‌ಗಳಲ್ಲಿ ಲಾಂಗ್ ಡ್ರೈವ್ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಬೃಹದಾಕಾರದ 470 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಕಾರ್ಯಕ್ಷಮತೆ (Performance):
ಈ ಕಾರು ಶಕ್ತಿಶಾಲಿಯಾದ ಎರಡು ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 110 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 190 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ನೂತನ 'ಬಸಾಲ್ಟ್ ಎಕ್ಸ್' ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 18 ರಿಂದ 19.5 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 190 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 11.99 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ವೈಶಿಷ್ಟ್ಯಗಳು (Features):
ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್-ಬಟನ್ ಸ್ಟಾರ್ಟ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು, ರೇರ್ ಸೆಂಟರ್ ಆರ್ಮ್‌ರೆಸ್ಟ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಹೊಸ 'ಸಿಟ್ರನ್ ಬಸಾಲ್ಟ್ ಎಕ್ಸ್' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ರೇರ್-ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








