ಮಾರುತಿ ವ್ಯಾಗನ್ಆರ್‌ಗೆ ವಿರುದ್ಧವಾಗಿ ಈ ಕಾರು 4.95 ಲಕ್ಷ ರೂಪಾಯಿಗೆ ಸಿಗುತ್ತೆ.. 28 Km ಮೈಲೇಜ್.. 5-ಸೀಟರ್!
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಪ್ರಮುಖ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ರೂ.4.99 ಲಕ್ಷದಿಂದ ರೂ.6.95 ಲಕ್ಷ ದರವನ್ನು ಪಡೆದಿದೆ. ಇದಕ್ಕೆ ಸಿಟ್ರನ್ ಸಿ3 (Citroen C3) ಪ್ರಬಲವಾದ ಪ್ರತಿಸ್ಪರ್ಧಿಯಾಗಿದ್ದು, ಮಧ್ಯಮ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಸಿ3' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಹ್ಯಾಚ್‌ಬ್ಯಾಕ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಇದು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಕನಿಷ್ಠ ರೂ.4.95 ಲಕ್ಷ ಹಾಗೂ ಗರಿಷ್ಠ ರೂ.10.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಲೈವ್ (Live), ಫೀಲ್ (Feel) ಹಾಗೂ ಶೈನ್ (Shine) ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ವಿಷನ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ 15-ಇಂಚಿನ ಡೈಮಂಡ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಪೋಲಾರ್ ವೈಟ್, ಸ್ಟೀಲ್ ಗ್ರೇ, ಪ್ಲಾಟಿನಂ ಗ್ರೇ ಹಾಗೂ ಕಾಸ್ಮೊ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimension):
ನೂತನ 'ಸಿಟ್ರನ್ ಸಿ3' ಹ್ಯಾಚ್‌ಬ್ಯಾಕ್ 3,981 ಮಿ.ಮೀ ಉದ್ದ, 1,733 ಮಿ.ಮೀ ಅಗಲ ಮತ್ತು 1,586 ಮಿ.ಮೀ ಎತ್ತರವಿದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,540 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 1,358 ಕೆಜಿ ತೂಕವಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ಕಾರ್ಯಕ್ಷಮತೆ (Performance):
ಈ ಕಾರು ಬೆಲೆಗೆ ತಕ್ಕಂತೆ 3 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 110 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 205 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಇನ್ನೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19.3 ರಿಂದ 28.1 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.
ವೈಶಿಷ್ಟ್ಯಗಳು (Features):
ಹೊಸ 'ಸಿಟ್ರನ್ ಸಿ3' ಹ್ಯಾಚ್‌ಬ್ಯಾಕ್ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.


Click it and Unblock the Notifications








