Citroen: 320 ಕಿ.ಮೀ ರೇಂಜ್.. ಕೈಗೆಟುಕುವ ಬೆಲೆಯ ಈ ಸಿಟ್ರನ್ ಕಾರಿನ ಕುರಿತ ಪ್ರಮುಖಾಂಶಗಳು!
ಸಿಟ್ರನ್ ಇಸಿ3 (Citroen eC3) ಪ್ರಮುಖ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದೆ. ಪ್ರತಿ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯೂ ಮಾರಾಟವಾಗುತ್ತಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಇಸಿ3' ಬೆಸ್ಟ್ ಚಾಯ್ಸ್ ಆಗಲಿದೆ. ನಾವಿಲ್ಲಿ ಈ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಇದು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಕನಿಷ್ಠ ರೂ.12.90 ಲಕ್ಷ ಹಾಗೂ ಗರಿಷ್ಠ ರೂ.13.41 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ಲೈವ್ (Live), ಫೀಲ್ (Feel) ಹಾಗೂ ಶೈನ್ (Shine) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, 'ವೈ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ. ಪೋಲಾರ್ ವೈಟ್, ಝೆಸ್ಟಿ ಆರೆಂಜ್, ಪ್ಲಾಟಿನಂ ಗ್ರೇ, ಸ್ಟೀಲ್ ಗ್ರೇ ಹಾಗೂ ಕಾಸ್ಮೊ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimension):
ನೂತನ 'ಸಿಟ್ರನ್ ಇಸಿ3' ಹೆಚ್ಚು ವಿಶಾಲ ಗಾತ್ರದಲ್ಲಿದೆ. 3,981 ಎಂಎಂ ಉದ್ದ, 1,733 ಎಂಎಂ ಅಗಲ ಮತ್ತು 1,604 ಎಂಎಂ ಎತ್ತರವಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,540 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 1,329 ಕೆಜಿ ತೂಕವಿದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇದು 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 315 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಕಾರ್ಯಕ್ಷಮತೆ (Performance):
ಈ ಕಾರು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 29.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 320 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಹೊಸ 'ಸಿಟ್ರನ್ ಇಸಿ3'ಯಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 57 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 143 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಇದರಲ್ಲಿರುವ ಬ್ಯಾಟರಿಯು ಹೋಮ್ ಚಾರ್ಜರ್‌ನ್ನು ಉಪಯೋಗಿಸಿದಾಗ, ಭರ್ತಿಯಾಗಿ ಚಾರ್ಜ್ ಆಗುವುದಕ್ಕೆ 10.5 ಗಂಟೆ ತೆಗೆದುಕೊಳ್ಳುತ್ತದೆ. 107 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 6.8 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸ್ಟ್ಯಾಂಡರ್ಡ್ (Standard) ಮತ್ತು ಇಕೋ (Eco) ಎಂಬ ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ.
ವೈಶಿಷ್ಟ್ಯಗಳು (Features):
ನೂತನ 'ಸಿಟ್ರನ್ ಇಸಿ3' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 7-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, 4-ಸ್ಪೀಕರ್ ಸೌಂಡ್ ಸಿಸ್ಟಮ್, ಮೈಸಿಟ್ರನ್ ಕನೆಕ್ಟ್ ಅಪ್ಲಿಕೇಶನ್ ಹಾಗೂ ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಈ ಕಾರು ಸುರಕ್ಷತೆಗೂ ಮನೆ ಮಾತಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.


Click it and Unblock the Notifications








