Hero Splendor: 70 Km ಮೈಲೇಜ್.. ಬಡವರ ಬಂಡಿ ಅಗ್ಗದ ಹೀರೋ ಸ್ಪ್ಲೆಂಡರ್‌ಗೆ ಫುಲ್ ಡಿಮ್ಯಾಂಡ್, ಮುಗಿಬಿದ್ದ ಗ್ರಾಹಕರು!

ಹೀರೋ ಸ್ಪ್ಲೆಂಡರ್‌ (Hero Splendor) ಜಗಮೆಚ್ಚಿದ ಬೈಕ್ ಎಂದೇ ಹೆಸರುವಾಸಿಯಾಗಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದ್ದು, ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್-2025) ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 2,80,760 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 1,92,438 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 40.90% ಬೆಳವಣಿಗೆಯಾಗಿದೆ.

ಡಿಸೆಂಬರ್‌ನಲ್ಲಿ 'ಹೀರೋ ಸ್ಪ್ಲೆಂಡರ್‌' ಮಾರಾಟವು ಉತ್ತಮವಾಗಿರಲು ಹಲವು ಕಾರಣಗಳಿವೆ. ಈ ಮೋಟಾರ್‌ಸೈಕಲ್‌ ದಿನಬಳಕೆಗೆ ಬೆಸ್ಟ್ ಚಾಯ್ಸ್ ಆಗಿದೆ. ಹಳ್ಳಿ ಹಾಗೂ ನಗರ ಪ್ರದೇಶಗಳಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಗಿದೆ. ಹೀಗಾಗಿ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

Hero Splendor December 2025 Sales Details

ನೂತನ 'ಹೀರೋ ಸ್ಪ್ಲೆಂಡರ್‌' 3 ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅವುಗಳೆಂದರೆ ಸ್ಪ್ಲೆಂಡರ್ ಪ್ಲಸ್, ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಹಾಗೂ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಎಂದು. ಇವುಗಳು ನೋಡಲು ತುಂಬಾ ಸರಳವಾಗಿದ್ದು, ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿವೆ.

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus):

ಇದು ರೂ.73,946 ರಿಂದ ರೂ.76,353 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಬ್ಲೂ-ಬ್ಲ್ಯಾಕ್, ಬ್ಲ್ಯಾಕ್ ಹೆವಿ ಗ್ರೇ, ಫೋರ್ಸ್ ಸಿಲ್ವರ್, ಬ್ಲ್ಯಾಕ್-ರೆಡ್ ಪರ್ಪಲ್ ಮತ್ತು ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,236 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Hero Splendor December 2025 Sales Details

ನೂತನ 'ಸ್ಪ್ಲೆಂಡರ್ ಪ್ಲಸ್' 97.2-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 70 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 87 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಟ್ವಿನ್-ಪ್ರಿಲೋಡ್ ಅಡ್ಜಸ್ಟಬಲ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ ಇದ್ದು, ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ (Hero Splendor Plus Xtec):

ಈ ಬೈಕ್ ರೂ.77,678 ರಿಂದ 80,721 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಬ್ಲ್ಯಾಕ್ ಸ್ಪಾರ್ಕಿಂಗ್ ಬ್ಲೂ, ಬ್ಲ್ಯಾಕ್ ಟೊರ್ನಾಡೊ ಗ್ರೇ, ಮ್ಯಾಟ್ ಗ್ರೇ, ನೊಬೆಲ್ ರೆಡ್, ರೆಡ್ ಬ್ಲ್ಯಾಕ್ ಹಾಗೂ ಬ್ಲ್ಯಾಕ್ ಹೆವಿ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,236 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Hero Splendor December 2025 Sales Details

ಹೊಸ 'ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್' 97.2-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 70 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 87 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಇಂಟಿಗ್ರೇಟೆಡ್ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC):

ಇದೊಂದು ಪ್ರಮುಖ ಮೋಟಾರ್‌ಸೈಕಲ್‌ ಆಗಿದೆ. ರೂ.82,248 ರಿಂದ ರೂ.85,844 (ಎಕ್ಸ್-ಶೋರೂಂ) ದರವನ್ನು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಮ್ಯಾಟ್ ನೆಕ್ಸಸ್ ಬ್ಲೂ, ಮ್ಯಾಟ್ ಗ್ರೇ, ಬ್ಲಾಕ್ ಮತ್ತು ಕ್ಯಾಂಡಿ ಬ್ಲೇಜಿಂಗ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 180 ಎಂಎಂ ಗ್ರೌಂಡ್ ಕಿಯರೆನ್ಸ್ ಹಾಗೂ 1,267 ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 69 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Monday, January 26, 2026, 14:02 [IST]
English summary
Hero splendor december 2025 sales details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+