ಬಡವರಿಗೆ ಬೆಸ್ಟ್ ಬೈಕ್‌ಗಳು.. 73 Km ಮೈಲೇಜ್.. ಕೇವಲ ರೂ.69,000 ದಿಂದ ಆರಂಭ.. ಯಾವುದು ಬೆಸ್ಟ್?

ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ (Hero Splendor Plus Xtec) ಜನಮೆಚ್ಚಿದ ಮೋಟಾರ್‌ಸೈಕಲ್‌ ಎಂದೇ ಹೆಸರುವಾಸಿಯಾಗಿದೆ. ಇದಕ್ಕೆ ಬಜಾಜ್ ಪ್ಲಾಟಿನಾ 110 (Bajaj Platina 110) ನೇರವಾದ ಎದುರಾಳಿಯಾಗಿದೆ. ಈ ಬೈಕ್‌ಗಳು ಒಂದಕ್ಕಿಂತ ಒಂದು ಅದ್ಭುತವಾಗಿವೆ. ಜೊತೆಗೆ ಕೈಗೆಟುಕುವ ದರದಲ್ಲೂ ಲಭ್ಯವಿದ್ದು, ದಿನಬಳಕೆಗೆ ಹೆಚ್ಚು ಸೂಕ್ತವಾಗಿವೆ. ನಾವಿಲ್ಲಿ ಇವುಗಳ ಬೆಲೆ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬೆಲೆ (Price):

ನೂತನ 'ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್' ಕನಿಷ್ಠ ರೂ.78,426 ಹಾಗೂ ಗರಿಷ್ಠ ರೂ.81,469 ದರವನ್ನು ಪಡೆದಿದೆ. ಅದೇ ರೀತಿಯಲ್ಲಿ ಹೊಸ 'ಬಜಾಜ್ ಪ್ಲಾಟಿನಾ 110' ರೂ 69 832 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರದ ವಿಚಾರದಲ್ಲಿ 'ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್'ಗೆ ಹೋಲಿಕೆ ಮಾಡಿದರೆ 'ಪ್ಲಾಟಿನಾ 110' ತುಸು ಅಗ್ಗವಾಗಿದೆ.

Hero Splendor Plus Xtec Vs Bajaj Platina 110 Which Bike Best Comparison

ವಿನ್ಯಾಸ (Design):

ಇವೆರೆಡು ಮೋಟಾರ್‌ಸೈಕಲ್‌ಗಳು ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿವೆ. 'ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್' ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್, ಇಂಡಿಕೇಟರ್‌ಗಳು ಮತ್ತು ಟೈಲ್ ಲ್ಯಾಂಪ್‌ನ್ನು ಪಡೆದಿದೆ. 18-ಇಂಚಿನ ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ. ಮ್ಯಾಟ್ ರೆಡ್, ಗ್ಲಾಸ್ ಬ್ಲ್ಯಾಕ್, ಗ್ಲಾಸ್ ರೆಡ್, ಬ್ಲ್ಯಾಕ್ ಟೊರ್ನಾಡೊ ಗ್ರೇ ಮತ್ತು ಬ್ಲ್ಯಾಕ್ ಸ್ಪಾರ್ಕಿಂಗ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಹೆಚ್ಚು ವಿಶಾಲವಾಗಿದ್ದು, 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,236 ಮಿ.ಮೀ ವೀಲ್‌ಬೇಸ್‌ನ್ನು ತನ್ನದಾಗಿಸಿಕೊಂಡಿದೆ.

'ಪ್ಲಾಟಿನಾ 110' ಸಹ ಚೆನ್ನಾಗಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಹೊಂದಿದೆ. 17-ಇಂಚಿನ ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. ಎಬೊನಿ ಬ್ಲ್ಯಾಕ್-ಬ್ಲ್ಯೂ, ಎಬೊನಿ ಬ್ಲ್ಯಾಕ್-ರೆಡ್, ಕಾಕ್‌ಟೈಲ್ ವೈನ್ ಹಾಗೂ ರೆಡ್-ಆರೆಂಜ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. ಸಾಕಷ್ಟು ವಿಶಾಲವಾಗಿದ್ದು, 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,255 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Hero Splendor Plus Xtec Vs Bajaj Platina 110 Which Bike Best Comparison

ಕಾರ್ಯಕ್ಷಮತೆ (Performance):

ಈ ಬೈಕ್‌ಗಳು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿವೆ. 'ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್' ಮೋಟಾರ್‌ಸೈಕಲ್‌ 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 73 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 12 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. 87 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 8.51 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

'ಬಜಾಜ್ ಪ್ಲಾಟಿನಾ 110' ಬೈಕ್ 115.45 ಸಿಸಿ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಹೊಂದಿದ್ದು, 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 11 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 15.49 ಸೆಕೆಂಡುಗಳಲ್ಲಿ 0 ರಿಂದ 80 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ವೈಶಿಷ್ಟ್ಯಗಳು (Features):

ಈ ಮೋಟಾರ್‌ಸೈಕಲ್‌ಗಳು ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿವೆ. 'ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್' ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಐಡಲ್ ಸ್ಟಾಪ್/ ಸ್ಟಾರ್ಟ್ ಸಿಸ್ಟಮ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) 5-ಸ್ಟೆಪ್ ಅಡ್ಜಸ್ಟಬಲ್ ಹೈಡ್ರಾಲಿಕ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

'ಪ್ಲಾಟಿನಾ 110' ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಟ್ವಿನ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Wednesday, March 11, 2026, 18:14 [IST]
English summary
Hero splendor plus xtec vs bajaj platina 110 which bike best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+