Honda: ಯುಗಾದಿಗೆ ಹೊಸ ಕಾರುಗಳನ್ನು ಖರೀದಿಸಬಹುದು.. ರೂ.1.97 ಲಕ್ಷವರೆಗೆ ರಿಯಾಯಿತಿ ಸಿಕ್ತು.. ಯಾವುದಕ್ಕೆ ಎಷ್ಟು?

ಹೋಂಡಾ ಕಾರ್ಸ್ ಇಂಡಿಯಾ (Honda Cars India) ನಂಬಿಕಾರ್ಹ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅಮೇಜ್, ಎಲಿವೇಟ್ ಹಾಗೂ ಸಿಟಿ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇವುಗಳ ಖರೀದಿ ಮೇಲೆ ಈ 2026ರ ಮಾರ್ಚ್ ತಿಂಗಳು ದೊಡ್ಡ ಮಟ್ಟದಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಘೋಷಣೆ ಮಾಡಿದೆ. ಯುಗಾದಿ ಹಬ್ಬಕ್ಕೆ ಹೊಚ್ಚ ಹೊಸ ಕಾರನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದವರಿಗೆ ಹೆಚ್ಚಿನ ಪ್ರಯೋಜನಗಳು ಲಭ್ಯವಾಗಲಿದೆ.

ಹೋಂಡಾ ಅಮೇಜ್ (Honda Amaze):

ಇದೊಂದು ಜನಪ್ರಿಯ ಸೆಡಾನ್ ಆಗಿ ಹೊರಹೊಮ್ಮಿದೆ. ರೂ.57,000 ವರೆಗೆ ಹಣಕಾಸಿನ ಪ್ರಯೋಜನಗಳನ್ನು ಪಡೆದಿದೆ. ರೂ.7.48 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಮೆಟಿರೊಯ್ಡ್ ಗ್ರೇ ಮೆಟಾಲಿಕ್, ರೇಡಿಯಂಟ್ ರೆಡ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್ ಹಾಗೂ ಲೂನಾರ್ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Honda Cars Have Upto Rs 1 97 Lakh Discount In 2026 March Amaze Elevate To City

ನೂತನ 'ಅಮೇಜ್' 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 18.65 ರಿಂದ 19.46 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 8-ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ 3-ಸ್ಪೋಕ್ ಸ್ಟೀರಿಂಗ್ ವೀಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಹೋಂಡಾ ಎಲಿವೇಟ್ (Honda Elevate):

ಈ ಪ್ರಖ್ಯಾತ ಎಸ್‌ಯುವಿಯು ರೂ.1.81 ಲಕ್ಷವರೆಗೆ ಆಫರ್‌ನ್ನು ಹೊಂದಿದೆ. ರೂ.11.60 ಲಕ್ಷದಿಂದ ರೂ.16.67 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಫೀನಿಕ್ಸ್ ಆರೆಂಜ್ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್, ಅಬ್ಸಿಡಿಯನ್ ಬ್ಲೂ ಪರ್ಲ್ ಮತ್ತು ರೇಡಿಯಂಟ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

Honda Cars Have Upto Rs 1 97 Lakh Discount In 2026 March Amaze Elevate To City

ಹೊಸ 'ಎಲಿವೇಟ್' 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 15 ರಿಂದ 17 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಹಾಗೂ ರೇರ್-ಎಸಿ ವೆಂಟ್‌ಗಳಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಹೋಂಡಾ ಸಿಟಿ (Honda City):

ಇದು ಜನಮೆಚ್ಚಿದ ಸೆಡಾನ್ ಆಗಿದೆ. ರೂ.1.56 ಲಕ್ಷವರೆಗೆ ರಿಯಾಯಿತಿಯನ್ನು ಒಳಗೊಂಡಿದೆ. ರೂ.11.95 ಲಕ್ಷದಿಂದ ರೂ.16.07 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಅಬ್ಸಿಡಿಯನ್ ಬ್ಲ್ಯೂ ಪರ್ಲ್, ರೇಡಿಯಂಟ್ ರೆಡ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್, ಮೆಟಿಯೊರಾಯ್ಡ್ ಗ್ರೇ ಮೆಟಾಲಿಕ್, ಲೂನಾರ್ ಸಿಲ್ವರ್ ಮತ್ತು ಗೋಲ್ಡನ್ ಬ್ರೌನ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Honda Cars Have Upto Rs 1 97 Lakh Discount In 2026 March Amaze Elevate To City

ನೂತನ 'ಸಿಟಿ' 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 17.8 ರಿಂದ 18.4 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಹೋಂಡಾ ಸಿಟಿ ಇ:ಹೆಚ್ಇವಿ (Honda City e:HEV):

ಈ ಹೈಬ್ರಿಡ್ ಸೆಡಾನ್ ಸಹ ಅತಿಹೆಚ್ಚು ರೂ.1.97 ಲಕ್ಷವರೆಗೆ ಹಣಕಾಸಿನ ಪ್ರಯೋಜನವನ್ನು ಪಡೆದಿದೆ. ರೂ.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ರೇಡಿಯಂಟ್ ರೆಡ್ ಮೆಟಾಲಿಕ್, ಅಬ್ಸಿಡಿಯನ್ ಬ್ಲೂ ಪರ್ಲ್, ಲೂನಾರ್ ಸಿಲ್ವರ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್ ಹಾಗೂ ಗೋಲ್ಡನ್ ಬ್ರೌನ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ 'ಸಿಟಿ ಇ:ಹೆಚ್ಇವಿ' 1.5-ಲೀಟರ್ ಹೈಬ್ರಿಡ್ (ಪೆಟ್ರೋಲ್+ಹೈಬ್ರಿಡ್) ಎಂಜಿನ್‌ನ್ನು ಒಳಗೊಂಡಿದೆ. 27.13 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಹಾಗೂ ರಿಮೋಟ್ ಎಸಿ ಕಂಟ್ರೋಲ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Friday, March 6, 2026, 11:45 [IST]
English summary
Honda cars get upto rs 1 97 lakh discount in 2026 march amaze elevate to city
Read more on ಹೋಂಡಾ india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+